ಸಂಭಾಲ್ ಘರ್ಷಣೆ ಪ್ರಕರಣ: ಭೇಟಿಗೆ ಹೋಗುತ್ತಿದ್ದ ರಾಹುಲ್ ಗಾಂಧಿಗೆ ತಡೆ
ಹಿಂಸಾಚಾರ ನಡೆದ ಸಂಭಾಲ್‌ಗೆ ತೆರಳುತ್ತಿದ್ದ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಹಾಗೂ ಸಂಸದೆ ಪ್ರಿಯಾಂಕಾ ಗಾಂಧಿಯವರನ್ನು ಉತ್ತರ ಪ್ರದೇಶ ಪೊಲೀಸರು ಬುಧವಾರ ಗಾಜಿಪುರ ಗಡಿಯಲ್ಲಿ ತಡೆದಿದ್ದಾರೆ. “ನಾನು ಪೊಲೀಸರೊಂದಿಗೆ ಸಂಭಾಲ್‌ಗೆ ಏಕಾಂಗಿಯಾಗಿ ಹೋಗಲು ಸಿದ್ಧನಿದ್ದೇನೆ. ಆದರೆ, ಅವರು ಅನುಮತಿಸಲಿಲ್ಲ” ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.
ರಾಯ್ ಬರೇಲಿ ಸಂಸದ ರಾಹುಲ್ ಗಾಂಧಿ, ಅವರ ಸಹೋದರಿ ಪ್ರಿಯಾಂಕಾ ಗಾಂಧಿ ವಾದ್ರಾ ಮತ್ತು ಇತರ ಹಿರಿಯ ಕಾಂಗ್ರೆಸ್ ನಾಯಕರು ಬೆಳಗ್ಗೆ ಘಾಜಿಪುರ ಗಡಿಯನ್ನು ತಲುಪಿದರು. ಅಲ್ಲಿ ಭಾರೀ ಪೊಲೀಸ್ ಪಡೆಗಳನ್ನು ನಿಯೋಜಿಸಲಾಗಿದ್ದು, ಸಂಭಾಲ್‌ಗೆ ಪ್ರವೇಶಿಸುವುದನ್ನು ತಡೆಯಲು ಬ್ಯಾರಿಕೇಡ್‌ಗಳನ್ನು ಹಾಕಲಾಯಿತು. ಹಲವು ಹೊತ್ತಿನ ಮಾತುಕತೆ ಬಳಿಕ ರಾಹುಲ್ ಗಾಂಧಿ ದೆಹಲಿಗೆ ತೆರಳಿದರು.
ಅನಂತರ ಮಾತನಾಡಿದ ಅವರು, “ನಾವು ಸಂಭಾಲ್‌ಗೆ ಹೋಗಲು ಪ್ರಯತ್ನಿಸುತ್ತಿದ್ದೇವೆ, ಪೊಲೀಸರು ನಿರಾಕರಿಸುತ್ತಿದ್ದು, ನಮಗೆ ಅವಕಾಶ ನೀಡುತ್ತಿಲ್ಲ. ಲೋಕಸಭೆಯ ವಿರೋಧ ಪಕ್ಷದ ನಾಯಕನಾಗಿ ಸ್ಥಳಕ್ಕೆ ಹೋಗುವುದು ನನ್ನ ಹಕ್ಕು.. ನಾನು ಒಬ್ಬನೇ ಹೋಗಲು ಸಿದ್ಧ ಎಂದು ಪೊಲೀಸರೊಂದಿಗೆ ಹೇಳಿದೆ. ಆದರೆ ಅವರು ಅದನ್ನು ಸ್ವೀಕರಿಸಲಿಲ್ಲ” ಎಂದು ರಾಹುಲ್ ಗಾಂಧಿ ಹೇಳಿದರು.
ಇದು ಲೋಕಸಭೆಯ ವಿರೋಧ ಪಕ್ಷದ ನಾಯಕನ ಹಕ್ಕಿಗೆ ವಿರುದ್ಧವಾಗಿದೆ. ನನಗೆ ಹೋಗಲು ಅವಕಾಶ ನೀಡಬೇಕು” ಎಂದು ಅವರು ಸುದ್ದಿಗಾರರಿಗೆ ತಿಳಿಸಿದರು.
ಕೈಯಲ್ಲಿ ಸಂವಿಧಾನದ ಪ್ರತಿಯನ್ನು ಹಿಡಿದುಕೊಂಡ ಗಾಂಧಿ, ಪೊಲೀಸರ ನಿರ್ಧಾರ ಪ್ರಜಾಪ್ರಭುತ್ವಕ್ಕೆ ವಿರುದ್ಧವಾಗಿದೆ ಎಂದು ಹೇಳಿದರು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/BHOOdLNNvmD17cBJslQgwj