ಸಂಭಾಲ್ ಹಿಂಸಾಚಾರ: ಜಾಮಾ ಮಸೀದಿ ಸದರ್ ಮುಖ್ಯಸ್ಥ ಜಾಫರ್ ಅಲಿ ಬಂಧನ

ಸಂಭಾಲ್ ಹಿಂಸಾಚಾರಕ್ಕೆ ಸಂಬಂಧಿಸಿದ ಪ್ರಮುಖ ಬೆಳವಣಿಗೆಯಲ್ಲಿ, ಉತ್ತರ ಪ್ರದೇಶ ಪೊಲೀಸರು ಶಾಹಿ ಜಾಮಾ ಮಸೀದಿ ಮುಖ್ಯಸ್ಥ ಮತ್ತು ಶಾಹಿ ಮಸೀದಿ ಸಮಿತಿಯ ಮುಖ್ಯಸ್ಥ ಜಾಫರ್ ಅಲಿ ಅವರನ್ನು ವಿಚಾರಣೆಯ ನಂತರ ಬಂಧಿಸಿದ್ದಾರೆ. ಕೆಲವು ತಿಂಗಳ ಹಿಂದೆ ಈ ಪ್ರದೇಶದಲ್ಲಿ ಭುಗಿಲೆದ್ದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಪೊಲೀಸರು ಜಾಫರ್ ಅಲಿಗೆ ಸಮನ್ಸ್ ಜಾರಿ ಮಾಡಿದ್ದರು.
ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಎಸ್ಪಿ ಕೆ.ಕೆ.ಬಿಷ್ಣೋಯ್, ನವೆಂಬರ್ 24, 2024 ರಂದು ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದರು. “ಇಂದು, ಜಾಫರ್ ಅಲಿಯನ್ನು ವಿಚಾರಣೆಯ ನಂತರ ಬಂಧಿಸಲಾಗಿದೆ. ನಿನ್ನೆ ಕೂಡ ಅವರನ್ನು ವಿಚಾರಣೆಗೆ ಒಳಪಡಿಸಲಾಗಿತ್ತು. ಬಿಎನ್ಎಸ್ ನ ಹಲವಾರು ಸೆಕ್ಷನ್ ಗಳ ಅಡಿಯಲ್ಲಿ ಅವರನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ. ಅವರನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದೆ, ಮತ್ತು ನ್ಯಾಯಾಲಯವು ಏನು ನಿರ್ದೇಶಿಸುತ್ತದೆಯೋ ಅದನ್ನು ಅನುಸರಿಸಲಾಗುವುದು. ಕ್ರಿಮಿನಲ್ ಪಿತೂರಿಯಡಿ ಅವರನ್ನು ಬಂಧಿಸಲಾಗಿದೆ ಎಂದು ಎಸ್ಪಿ ತಿಳಿಸಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/BHOOdLNNvmD17cBJslQgwj