ಸ್ಕೂಟರ್ ಗೆ ಲಾರಿ ಡಿಕ್ಕಿ: ಸಮೋಸ ಮಾರಾಟಗಾರ ಅಬ್ದುಲ್ ರಶೀದ್ ಸಾವು - Mahanayaka

ಸ್ಕೂಟರ್ ಗೆ ಲಾರಿ ಡಿಕ್ಕಿ: ಸಮೋಸ ಮಾರಾಟಗಾರ ಅಬ್ದುಲ್ ರಶೀದ್ ಸಾವು

accident
19/01/2023

ಉಡುಪಿ: ಕರಾವಳಿ ಬೈಪಾಸ್ ಸಮೀಪದ ಮಣಿಪಾಲ ಇನ್ ಹೊಟೇಲ್ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಗುರುವಾರ ರಾತ್ರಿ ವೇಳೆ ಲಾರಿಯೊಂದು ಸ್ಕೂಟರ್ ಗೆ ಡಿಕ್ಕಿ ಹೊಡೆದ ಪರಿಣಾಮ ಸವಾರರೊಬ್ಬರು ಮೃತಪಟ್ಟ ಬಗ್ಗೆ ವರದಿಯಾಗಿದೆ.


Provided by

ಅಂಬಲಪಾಡಿಯ ಅಬ್ದುಲ್ ರಶೀದ್(60) ಮೃತಪಟ್ಟವರಾಗಿದ್ದಾರೆ. ಕರಾವಳಿ ಬೈಪಾಸ್ ಕಡೆಯಿಂದ ಸಂತೆಕಟ್ಟೆ ಕಡೆಗೆ ಹೋಗುತ್ತಿದ್ದಾಗ ಸ್ಕೂಟರ್ ಗೆ  ಲಾರಿ ಹಿಂದಿನಿಂದ ಡಿಕ್ಕಿ ಹೊಡೆಯಿತು. ಇದರಿಂದ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡ ಅವರು ಸ್ಥಳದಲ್ಲೇ ಮೃತಪಟ್ಟರು.

ಮೃತ ಅಬ್ದುಲ್ ರಶೀದ್ ಸಮೋಸ ಮಾರಾಟದ ವೃತ್ತಿ ಮಾಡಿಕೊಂಡಿದ್ದರೆಂದು ತಿಳಿದುಬಂದಿದೆ. ಈ ಬಗ್ಗೆ ಉಡುಪಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Provided by

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LG00SlXNdBFJ1LFb3E40gL

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ