ಸಾಂಪ್ರದಾಯಿಕ ನಾಡದೋಣಿ ಮೀನುಗಾರರ ಒಕ್ಕೂಟ : ಸೀಮೆಎಣ್ಣೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಸಚಿವರಿಗೆ ಮನವಿ - Mahanayaka
1:28 AM Wednesday 5 - February 2025

ಸಾಂಪ್ರದಾಯಿಕ ನಾಡದೋಣಿ ಮೀನುಗಾರರ ಒಕ್ಕೂಟ : ಸೀಮೆಎಣ್ಣೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಸಚಿವರಿಗೆ ಮನವಿ

malpe
27/08/2022

ಮಲ್ಪೆ,ಜು. 25: ಸೀಮೆಎಣ್ಣೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಕರ್ನಾಟಕ ರಾಜ್ಯ ಸಾಂಪ್ರದಾಯಿಕ ನಾಡದೋಣಿ ಮೀನುಗಾರರ ಒಕ್ಕೂಟವು ಮೀನುಗಾರಿಕಾ ಸಚಿವ ಎಸ್. ಅಂಗಾರ ಅವರಿಗೆ ಮನವಿ ನೀಡಿ ಆಗ್ರಹಿಸಿತ್ತು.

ರಾಜ್ಯದ ಮೂರು ಜಿಲ್ಲೆಗಳಿಂದ 8030 ಸೀಮೆಎಣ್ಣೆ ರಹದಾರಿಗಳಿಗೆ ಮಾಸಿಕ 300ಲೀ. ನಂತೆ ಸರಕಾರ ಆಗಸ್ಟ್ ತಿಂಗಳಿಂದ ಆದೇಶ ನೀಡಿದ್ದರೂ ಇಲ್ಲಿಯ ವರೆಗೂ ಬಿಡುಗಡೆಯಾಗದೆ ಮೀನುಗಾರರಿಗೆ ತೊಂದರೆಯಾಗುತ್ತಿದೆ. ರಾಜ್ಯದಲ್ಲಿರುವ ಸೀಮೆಎಣ್ಣೆ ಪರ್ಮಿಟ್ ನವೀಕರಣವನ್ನು ಕಳೆದ ವರ್ಷದಂತೆ ನವೀಕರಿಸಬೇಕು.

ರಾಜ್ಯದ ಕೆಲವು ಭಾಗಗಳಲ್ಲಿ ಪ್ರಕೃತಿ ವಿಕೋಪದಿಂದ ನಾಡದೋಣಿಗಳಿಗೆ ನಷ್ಟ ಉಂಟಾಗಿದ್ದು ಇದನ್ನು ವಿಶೇಷ ಪ್ರಕರಣವೆಂದು ಪರಿಗಣಿಸಿ ಸರಕಾರದಿಂದ ಗರಿಷ್ಟ ಪರಿಹಾರ ದೊರಕಿಸಿಕೊಡಬೇಕು. ಮತ್ಸ್ಯಸಂಪದ ಯೋಜನೆಯಲ್ಲಿ ಸಾಂಪ್ರದಾಯಿಕ ದೋಣಿಗಳ ಮೋಟರೀಕರಣಕ್ಕೆ ಕೊಡುತ್ತಿರುವ ಸಹಾಯಧನವನ್ನು ಕೈಬಿಟ್ಟಿದ್ದು ಅದನ್ನು ಈ ಹಿಂದಿನಂತೆ ಮುಂದುವರಿಸಬೇಕು ಎಂದು ಮನವಿಯಲ್ಲಿ ತಿಳಿಸಲಾಗಿದೆ.

ಮೀನುಗಾರರ ಸಚಿವರ ಸಭೆಯಲ್ಲಿ ಪೆಡರೇಶನ್ನ ಅಧ್ಯಕ್ಷ ಯಶ್ಪಾಲ್ ಸುವರ್ಣ, ನಾಡದೋಣಿ ವಿುೀನುಗಾರರ ಒಕ್ಕೂಟದ ಅಧ್ಯಕ್ಷ ಆನಂದ ಖಾರ್ವಿ ಉಪ್ಪುಂದ, ಪ್ರಧಾನ ಕಾರ್ಯದರ್ಶಿ ಗೋಪಾಲ್ ಆರ್. ಕೆ, ಉಪಾಧ್ಯಕ್ಷರಾದ ಚಂದ್ರಕಾಂತ ಕರ್ೇರ, ವಿಜಯ ಬಂಗೇರ ಹೆಜಮಾಡಿ, ಸುಂದರ ಸಾಲ್ಯಾನ್, ಕೋಶಾಧಿಕಾರಿ ಪುರಂದರ ಕೋಟ್ಯಾನ್, ಸಂಘಟನಾ ಕಾರ್ಯದರ್ಶಿ ವಿಕ್ರಂ ಸಾಲ್ಯಾನ್, ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IaxQSuNxGHREVEoloSpDOO

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

 

ಇತ್ತೀಚಿನ ಸುದ್ದಿ