BIG NEWS: ಸಂಪುಟ ದರ್ಜೆ ಸ್ಥಾನ ಮಾನವನ್ನು ತಿರಸ್ಕರಿಸಿದ ಮಾಜಿ ಸಿಎಂ ಯಡಿಯೂರಪ್ಪ - Mahanayaka
11:32 AM Tuesday 4 - February 2025

BIG NEWS: ಸಂಪುಟ ದರ್ಜೆ ಸ್ಥಾನ ಮಾನವನ್ನು ತಿರಸ್ಕರಿಸಿದ ಮಾಜಿ ಸಿಎಂ ಯಡಿಯೂರಪ್ಪ

yediyurappa bommai
08/08/2021

ಬೆಂಗಳೂರು: ರಾಜ್ಯ ಸರ್ಕಾರದಿಂದ ನೀಡಲಾಗಿರುವ ಸಂಪುಟ ದರ್ಜೆಯ ಸ್ಥಾನಮಾನಗಳನ್ನು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ನಿರಾಕರಿಸಿದ್ದು, ಈ ಬಗ್ಗೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಗೆ ಪತ್ರ ಬರೆದಿದ್ದಾರೆ.

ಓರ್ವ ಮಾಜಿ ಸಿಎಂ ಗೆ ಸರ್ಕಾರದಿಂದ ನೀಡಲಾಗುವ ಸೌಲಭ್ಯಗಳು, ಸ್ಥಾನಮಾನಗಳನ್ನು ನನಗೆ ನೀಡಿದರೆ ಸಾಕು. ಸಂಪುಟ ದರ್ಜೆಯ ಸ್ಥಾನಮಾನ ನೀಡಿ ಹೊರಡಿಸಿರುವ ಆದೇಶವನ್ನು ಹಿಂಪಡೆಯುವಂತೆ ಕೋರುತ್ತೇನೆ ಎಂದು ಸಿಎಂಗೆ ಯಡಿಯೂರಪ್ಪನವರು ಪತ್ರದ ಮೂಲಕ ಮನವಿ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.

ಬಸವರಾಜ್ ಬೊಮ್ಮಾಯಿ ಅವರು ಸಿಎಂ ಆಗಿರುವವರೆಗೂ ಮಾಜಿ ಸಿಎಂ ಯಡಿಯೂರಪ್ಪನವರಿಗೆ ಸಂಪುಟ ದರ್ಜೆಯ ಸಚಿವರಿಗೆ ನೀಡಲಾಗುವ ಎಲ್ಲ ಸೌಲಭ್ಯಗಳನ್ನು ನೀಡುವಂತೆ ನಿನ್ನೆ ರಾಜ್ಯ ಸರ್ಕಾರ ಆದೇಶ ನೀಡಿದ ಬೆನ್ನಲ್ಲೇ ಯಡಿಯೂರಪ್ಪನವರು ಸಿಎಂ ಬೊಮ್ಮಾಯಿಗೆ ಪತ್ರ ಬರೆದು ಈ ಸೌಲಭ್ಯಗಳನ್ನು ನಯವಾಗಿ ನಿರಾಕರಿಸಿದ್ದಾರೆ.

ಇನ್ನಷ್ಟು ಸುದ್ದಿಗಳು…

 

ಇತ್ತೀಚಿನ ಸುದ್ದಿ