ಸಾಮೂಹಿಕ ಅತ್ಯಾಚಾರ: ಮನನೊಂದು ಯುವತಿ ಆತ್ಮಹತ್ಯೆ
ಹೈದರಾಬಾದ್: 23 ವರ್ಷದ ಯುವತಿ ಮೇಲೆ ಪೊಲೀಸ್ ಪೇದೆ ಸೇರಿದಂತೆ ನಾಲ್ವರು ಸಾಮೂಹಿಕ ಅತ್ಯಾಚಾರ ನಡೆಸಿದ್ದರಿಂದ ಮನನೊಂದು ಆತ್ಮಹತ್ಯೆಗೆ ಮಾಡಿಕೊಂಡಿರುವ ಘಟನೆ ತೆಲಂಗಾಣದ ಮಹಬೂಬಾಬಾದ್ ಜಿಲ್ಲೆಯಲ್ಲಿ ನಡೆದಿದೆ.
ಈ ಕುರಿತಂತೆ ಮಹಬೂಬಾಬಾದ್ ಜಿಲ್ಲೆಯ ನೆಲ್ಲಿಕುದೂರು ಪೊಲೀಸ್ ಠಾಣೆಯಲ್ಲಿ ರಿಟ್ ಅರ್ಜಿಯನ್ನು ಸಲ್ಲಿಸಲಾಗಿದ್ದು, ಫೆ. 16ರಂದು ಸಂತ್ರಸ್ತೆ ರಾತ್ರಿ ತಂಗಲು ತನ್ನ ಸ್ನೇಹಿತೆಯ ಮನೆಗೆ ಹೋಗುವ ವೇಳೆ ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ ಮತ್ತು ಫೆ.17 ರಂದು ಅದೇ ಸ್ನೇಹಿತೆಯನ್ನು ಭೇಟಿಯಾಗಲು ಹೋಗುವ ವೇಳೆ ಮತ್ತೊಮ್ಮೆ ತನ್ನ ಮೇಲೆ ಅತ್ಯಾಚಾರವೆಸಗಲಾಗಿದೆ ಎಂದು ಆಕೆ ತಿಳಿಸಿದ್ದಾರೆ.
ಫೆ. 18ರಂದು ಮನೆಗೆ ಹಿಂದಿರುಗಿದ ಯುವತಿ ಬೆಳಗ್ಗೆ 8 ಗಂಟೆ ಸುಮಾರಿಗೆ ಸುಮಾರಿಗೆ ವಿಷ ಸೇವಿಸಿದ್ದಾಳೆ. ಇದರಿಂದ ಅಸ್ವಸ್ಥಳಾದ ಯುವತಿಯನ್ನು ತಕ್ಷಣ ಆಕೆಯ ಸಹೋದರ ಮಹಬೂಬಾಬಾದ್ ನ ಆಸ್ಪತ್ರೆಯೊಂದಕ್ಕೆ ಕರೆದೊಯ್ದಿದ್ದಾರೆ. ಆದರೆ ಚಿಕಿತ್ಸೆ ಫಲಾಕಾರಿಯಾಗದೇ ಸಂತ್ರಸ್ತೆ ಫೆ. 22 ರಂದು ಮೃತಪಟ್ಟಿದ್ದಾಳೆ.ಫೆ. 17 ಮತ್ತು 18 ರಂದು ನಾಲ್ವರು ತನ್ನ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದರಿಂದ ವಿಷ ಸೇವಿಸಿರುವುದಾಗಿ ಹೇಳಿಕೊಂಡಿದ್ದಾಳೆ ಎನ್ನಲಾಗಿದೆ.
ಅರ್ಜಿಯ ವಿಚಾರಗಳ ಆಧಾರದ ಮೇಲೆ ಐಪಿಸಿ ಸೆಕ್ಷನ್ 34 ರೊಂದಿಗೆ 376 (ಡಿ), 306, 354 (ಡಿ) ಅಡಿಯಲ್ಲಿ ಎಫ್‍ಐಆರ್ ದಾಖಲಿಸಲಾಗಿದೆ. ಅಲ್ಲದೇ ಆರೋಪಿಗಳಲ್ಲಿ ಒಬ್ಬ ಪೊಲೀಸ್ ಪೇದೆ ಎಂದು ಗುರುತಿಸಲಾಗಿದೆ. ಮತ್ತೊಬ್ಬ ಆರೋಪಿ ಮಂಡಲ ಪರಿಷತ್ ಪ್ರಾದೇಶಿಕ ಕ್ಷೇತ್ರದ (ಎಂಪಿಟಿಸಿ) ಸದಸ್ಯೆಯ ಪತಿ ಎಂದು ಆರೋಪಿಸಲಾಗಿದೆ.
ಇದೀಗ ಪೊಲೀಸರು ಮೂವರು ಆರೋಪಿಗಳನ್ನು ವಶಪಡಿಸಿಕೊಂಡಿದ್ದು, ಮತ್ತೋರ್ವ ಆರೋಪಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ ಮತ್ತು ಸಂತ್ರಸ್ತೆಯ ಮೃತ ದೇಹವನ್ನು ವೈದ್ಯಕೀಯ ಪರೀಕ್ಷೆಗೆ ಕಳುಹಿಸಲಾಗಿದ್ದು, ತನಿಖೆ ಮುಂದುವರಿಸಲಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IrdQk252EnnGsLx9CS8tli
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ವಿದ್ಯುತ್ ಶಾಕ್ ತಗುಲಿ ವ್ಯಕ್ತಿ ಸಾವು
ಆನೆಕಾಲು ರೋಗ ತಡೆ ಮಾತ್ರೆ ಸೇವನೆ: 19 ವಿದ್ಯಾರ್ಥಿಗಳು ಅಸ್ವಸ್ಥ
ಹರ್ಷ ಕೊಲೆ ಪ್ರಕರಣ: ಮತ್ತಿಬ್ಬರು ಆರೋಪಿಗಳ ಬಂಧನ; ಬಂಧಿತರ ಸಂಖ್ಯೆ 8ಕ್ಕೆ ಏರಿಕೆ
ಕಟ್ಟಿಗೆ ಸಂಗ್ರಹಿಸುತ್ತಿದ್ದ ಮಹಿಳೆಯ ಮಾನಭಂಗಕ್ಕೆ ಯತ್ನ
ವಿದ್ಯಾರ್ಥಿನಿಯರಿಗೆ ಅಶ್ಲೀಲ ಸಂದೇಶ ಆರೋಪ: ಪಿ ಆರ್ ಓ ವಜಾಕ್ಕೆ ಆಗ್ರಹಿಸಿ ಧರಣಿ