ಸಾಮೂಹಿಕ ನಾಯಕತ್ವದಲ್ಲಿ ಮುಂದಿನ ಚುನಾವಣೆ ಎದುರಿಸುತ್ತೇವೆ | ಸತೀಶ್ ಜಾರಕಿಹೊಳಿ

sathish jarakiholi
22/06/2021

ಬೆಳಗಾವಿ: ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರುವುದು ನಮ್ಮ ಗುರಿ. ಈ ನಿಟ್ಟಿನಲ್ಲಿ, ಮುಂಬರುವ ವಿಧಾನಸಭಾ ಚುನಾವಣೆಯನ್ನು ಸಾಮೂಹಿಕ ನಾಯಕತ್ವದಲ್ಲಿ ಎದುರಿಸುತ್ತೇವೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದರು.

ಮಂಗಳವಾರ ಈ ಬಗ್ಗೆ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಚುನಾವಣೆ ಯಾವಾಗ ಬರುತ್ತದೆಯೋ ಗೊತ್ತಿಲ್ಲ. ಚುನಾವಣೆ ನಡೆಯಬೇಕು. ಶಾಸಕರ ಆಯ್ಕೆಯಾಗಬೇಕು. ನಂತರವೇ ಮುಖ್ಯಮಂತ್ರಿ ಯಾರಾಗಬೇಕು ಎನ್ನುವುದು ತೀರ್ಮಾನವಾಗುತ್ತದೆ. ಈಗಲೇ ಆ ಬಗ್ಗೆ ಹೇಳಲಾಗುವುದಿಲ್ಲ. ಅಭಿಮಾನಿಗಳು ತಮ್ಮ ನಾಯಕರೇ ಮುಂದಿನ ಮುಖ್ಯಮಂತ್ರಿ ಎಂದು ಹೇಳುತ್ತಾರೆ. ಅದರಲ್ಲಿ ಯಾವುದೇ ತಪ್ಪಿಲ್ಲ. ಆದರೆ, ನಿರ್ಧರಿಸುವವರು ಪಕ್ಷದ ಶಾಸಕರು ಹಾಗೂ ಹೈಕಮಾಂಡ್ ಎಂದು ಸತೀಶ್ ತಿಳಿಸಿದ್ದಾರೆ.

ರಮೇಶ್ ಜಾರಕಿಹೊಳಿ ಅವರ ರಾಜೀನಾಮೆ ವಿಚಾರವಾಗಿ ಪತ್ರಕರ್ತರು ಕೇಳಿದ ಪ್ರಶ್ನೆಗೆ ಅವರು, ಈ ಬಗ್ಗೆ ಅವರನ್ನೇ ಕೇಳಿ ಎಂದು ಹೇಳಿದರು. ಅಲ್ಲದೇ ಅವರು ಕಾಂಗ್ರೆಸ್ ಗೆ ಬರುವ ವಿಚಾರದ ಬಗ್ಗೆ ತನ್ನೊಂದಿಗೆ ಚರ್ಚಿಸಿಲ್ಲ. ಅದು ನಮ್ಮ ವರಿಷ್ಠರಿಗೆ ಬಿಟ್ಟ ವಿಚಾರ. ನಾನು ಅದರ ಬಗ್ಗೆ ಮಾತನಾಡಲು ಆಗುವುದಿಲ್ಲ ಎಂದು ಅವರು ಹೇಳಿದರು.

ಇತ್ತೀಚಿನ ಸುದ್ದಿ

Exit mobile version