ಸಂವಿಧಾನ ದಿನವೇ ಅಂಬೇಡ್ಕರ್ ಗೆ ಅವಮಾನ ಮಾಡಿದ ನ್ಯಾಯಾಧೀಶ: ಕೋರ್ಟ್ ಆವರಣದಲ್ಲಿಯೇ ಉದ್ಧಟತನದ ವರ್ತನೆ
ರಾಯಚೂರು: ಸಮಾಜಕ್ಕೆ ಮಾದರಿಯಾಗಬೇಕಾದ ನ್ಯಾಯಾಧೀಶರೋರ್ವರು ಗಣರಾಜ್ಯೋತ್ಸವ ದಿನದಂದೇ ಡಾ.ಬಿ.ಆರ್.ಅಂಬೇಡ್ಕರ್ ಅವರಿಗೆ ಅವಮಾನ ಮಾಡಿರುವ ಘಟನೆ ರಾಯಚೂರು ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ನಡೆದಿದೆ.
ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರು ಬರೆದ ಸಂವಿಧಾನದಡಿಯಲ್ಲಿ ಕಾರ್ಯಾಚರಿಸುತ್ತಿರುವ ನ್ಯಾಯಾಧೀಶರೊಬ್ಬರು ತನ್ನ ಘನತೆ ಮರೆತು ವರ್ತಿಸಿದ ಘಟನೆ ವಿರುದ್ಧ ಇದೀಗ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.
ರಾಯಚೂರು ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ನಡೆದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಜಿಲ್ಲಾ ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡ, ಅಂಬೇಡ್ಕರ್ ಫೋಟೋವನ್ನು ತೆರವುಗೊಳಿಸಿದರೆ ಮಾತ್ರ ತಾನು ಧ್ವಜರೋಹಣ ಮಾಡುವುದಾಗಿ ಹೇಳಿರುವುದು ವರದಿಯಾಗಿದ್ದು, ಈ ಸಂಬಂಧ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ವರದಿಗಳ ಪ್ರಕಾರ, ಗಣರಾಜ್ಯೋತ್ಸವ ಆಚರಣೆಯ ವೇಳೆ ಗಾಂಧೀಜಿ ಭಾವ ಚಿತ್ರದ ಜೊತೆಗೆ ಅಂಬೇಡ್ಕರ್ ಚಿತ್ರವನ್ನು ಕೂಡ ಇರಿಸಲಾಗಿತ್ತು. ಕಾರ್ಯಕ್ರಮದ ವೇಳೆ ಅಂಬೇಡ್ಕರ್ ಫೋಟೋಗೆ ಪುಷ್ಪಾರ್ಚನೆ ಮಾಡಲು ಒಪ್ಪದ ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡ, ಅಂಬೇಡ್ಕರ್ ಫೋಟೋ ತೆಗೆದು ಹಾಕಲು ಪಟ್ಟು ಹಿಡಿದಿದ್ದು, ಹೀಗಾಗಿ ಕಾರ್ಯಕ್ರಮ ಆಯೋಜಕರು ಅಂಬೇಡ್ಕರ್ ಫೋಟೋವನ್ನು ತೆಗೆದು ಹಾಕುವ ಮೂಲಕ ಅಂಬೇಡ್ಕರ್ ಅವರಿಗೆ ಸಂವಿಧಾನ ದಿನಾಚರಣೆಯ ದಿನದಂದೇ ಅವಮಾನ ಮಾಡಲಾಗಿದೆ. ಈ ಘಟನೆ ವಿರುದ್ಧ ಇದೀಗ ವ್ಯಾಪಕ ಆಕ್ರೋಶ ಕೇಳಿ ಬಂದಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಗಣರಾಜ್ಯೋತ್ಸವ ವೇಳೆ ವಿದ್ಯುತ್ ಸ್ಪರ್ಶಿಸಿ ಓರ್ವ ವಿದ್ಯಾರ್ಥಿ ಸಾವು
ನಾವು ಹಿಂದಿ ವಿರೋಧಿಸುವುದಿಲ್ಲ, ಹಿಂದಿ ಹೇರಿಕೆಗೆ ವಿರೋಧ: ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್
ಬಜೆಟ್ ಅಧಿವೇಶನಕ್ಕೂ ಮೊದಲು ಸರ್ವಪಕ್ಷ ಸಭೆ ಕರೆದ ಕೇಂದ್ರ ಸರ್ಕಾರ
ಗಂಡನ ಕಿರುಕುಳ ತಾಳಲಾರದೇ ಗರ್ಭಿಣಿ ಆತ್ಮಹತ್ಯೆ
ಸಂವಿಧಾನ ದಿನದಂದೇ ಡಾ.ಬಿ.ಆರ್.ಅಂಬೇಡ್ಕರ್ ಅವರಿಗೆ ಸರ್ಕಾರದಿಂದ ಅಗೌರವ!