ಭಾರತದ ಸಂವಿಧಾನ ಕೋಟ್ಯಂತರ ಜನರ ನೋವು ನಲಿವುಗಳಿಗೆ ಸ್ಪಂದಿಸುವ ಶ್ರೇಷ್ಠ ಗ್ರಂಥ | ಸಂಸದ ವಿ.ಶ್ರೀನಿವಾಸ್ ಪ್ರಸಾದ್ - Mahanayaka

ಭಾರತದ ಸಂವಿಧಾನ ಕೋಟ್ಯಂತರ ಜನರ ನೋವು ನಲಿವುಗಳಿಗೆ ಸ್ಪಂದಿಸುವ ಶ್ರೇಷ್ಠ ಗ್ರಂಥ | ಸಂಸದ ವಿ.ಶ್ರೀನಿವಾಸ್ ಪ್ರಸಾದ್

13/03/2021

ಚಾಮರಾಜನಗರ: ಭಾರತದ ಸಂವಿಧಾನ ಎಂದರೆ ಅದು ಕಾನೂನುಗಳ ಸಂಗ್ರಹ ಅಲ್ಲ. ಕೋಟ್ಯಂತರ ಜನರ ನೋವು ನಲಿವುಗಳಿಗೆ ಸ್ಪಂದಿಸುವ ಶ್ರೇಷ್ಠ ಗ್ರಂಥ ಎಂದು ಸಂಸದ ವಿ.ಶ್ರೀನಿವಾಸ್ ಪ್ರಸಾದ್ ಹೇಳಿದರು.

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯ ಸಹಯೋಗದಲ್ಲಿ ತಮ್ಮ ಪ್ರದೇಶಾಭಿವೃದ್ಧಿ ನಿಧಿಯಿಂದ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಪಿಯುಸಿಯ 30 ಸಾವಿರ ವಿದ್ಯಾರ್ಥಿಗಳಿಗೆ, ನಿವೃತ್ತ ನ್ಯಾಯಮೂರ್ತಿ ಎಚ್‌.ಎಸ್‌.ನಾಗಮೋಹನ್‌ ದಾಸ್ ಅವರು ಬರೆದಿರುವ ‘ಸಂವಿಧಾನ ಓದು’ ಪುಸ್ತಕ ವಿತರಣೆ ಸಮಾರಂಭದಲ್ಲಿ ಮಾತನಾಡಿದ ಪ್ರಸಾದ್, ಸಂವಿಧಾನವು  ದೇಶದ ಜನರ ಜೀವನ ವ್ಯವಸ್ಥೆಯನ್ನು ರೂಪಿಸಿರುವ ಗ್ರಂಥ ಎಂದು ಹೇಳಿದರು.

ವಿದ್ಯಾರ್ಥಿಗಳಿಗೆ ಇದರ ಬಗ್ಗೆ ತಿಳಿಸಬೇಕು ಎಂಬ ಉದ್ದೇಶದಿಂದ ಸಂಸದರ ಪ್ರದೇಶಾಭಿವೃದ್ಧಿ ನಿಧಿಯಿಂದ 15 ಲಕ್ಷ ವೆಚ್ಚದಲ್ಲಿ ಸಂವಿಧಾನ ಓದು ಎಂಬ ಕೃತಿಯನ್ನು ಮುದ್ರಿಸಿ ವಿತರಿಸಲಾಗುತ್ತಿದೆ. ದೇಶದಲ್ಲೇ ಇದು ಮೊದಲ ಪ್ರಯತ್ನ ಎಂದು ಶ್ರೀನಿವಾಸ್ ಪ್ರಸಾದ್ ಹೇಳಿದರು.

ಇತ್ತೀಚಿನ ಸುದ್ದಿ