ಸನಾತನ ಧರ್ಮ ರಾಷ್ಟ್ರೀಯ ಧರ್ಮ, ಎಲ್ಲರೂ ಗೌರವಿಸಬೇಕು: ಯೋಗಿ ಆದಿತ್ಯನಾಥ
ಲಕ್ನೋ: ಸನಾತನ ಧರ್ಮ ಭಾರತದ ರಾಷ್ಟ್ರೀಯ ಧರ್ಮವಾಗಿದೆ, ಇದನ್ನು ಪ್ರತಿಯೊಬ್ಬರೂ ಗೌರವಿಸಬೇಕು ಎಂದು ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ಹೇಳಿಕೆ ನೀಡಿದ್ದಾರೆ.
ರಾಜಸ್ಥಾನದ ಭಿನ್ಮಾಲ್ನಲ್ಲಿರುವ ನೀಲಕಂಠ ಮಹಾದೇವ ದೇವಸ್ಥಾನದಲ್ಲಿ ಮೂರ್ತಿ ಪ್ರತಿಷ್ಠಾಪನೆ ಮತ್ತು ಅದರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಅಯೋಧ್ಯೆಯ ರಾಮಮಂದಿರದ ಮಾದರಿಯಲ್ಲಿ ಅಪವಿತ್ರಗೊಂಡ ಧಾರ್ಮಿಕ ಸ್ಥಳಗಳನ್ನು ಪುನಃಸ್ಥಾಪಿಸಲು ಅಭಿಯಾನವನ್ನು ನಡೆಸುವಂತೆ ಜನರಿಗೆ ಪ್ರೇರಣೆ ನೀಡಿದರು.
ಯಾವುದೇ ಅವಧಿಯಲ್ಲಿ ನಮ್ಮ ಧಾರ್ಮಿಕ ಸ್ಥಳಗಳನ್ನು ಅಪವಿತ್ರಗೊಳಿಸಿದ್ದರೆ, 500 ವರ್ಷಗಳ ನಂತರ ಭವ್ಯವಾದ ರಾಮನ ಮಂದಿರ ನಿರ್ಮಾಣ ನಡೆಯುತ್ತಿರುವ ಅಯೋಧ್ಯೆಯ ಮಾದರಿಯಲ್ಲಿ ಅವುಗಳ ಜೀರ್ಣೋದ್ಧಾರಕ್ಕಾಗಿ ಅಭಿಯಾನವನ್ನು ಪ್ರಾರಂಭಿಸಬೇಕು ಎಂದು ಯೋಗಿ ಕರೆ ನೀಡಿದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw