ಸ್ಯಾಂಡಲ್ ವುಡ್ ಹಿರಿಯ ನಟ ರಾಜೇಶ್ ನಿಧನ
ಬೆಂಗಳೂರು: ಅನಾರೋಗ್ಯದಿಂದಾಗಿ ಬಳಲುತ್ತಿದ್ದ ಸ್ಯಾಂಡಲ್ವುಡ್ ಹಿರಿಯ ನಟ ರಾಜೇಶ್ ಶನಿವಾರ ಮೃತಪಟ್ಟಿದ್ದಾರೆ.
ರಾಜೇಶ್ (87) ಅವರು ಶನಿವಾರ ಮುಂಜಾನೆ 2.30ರ ಸುಮಾರಿಗೆ ಮೃತಪಟ್ಟಿದ್ದಾರೆ ಎಂದು ಅವರ ಅಳಿಯ ಮತ್ತು ನಟ ಅರ್ಜುನ್ ಸರ್ಜಾ ಮಾಹಿತಿ ನೀಡಿದ್ದಾರೆ.
ಬಹು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ರಾಜೇಶ್, ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದು, ಇಂದು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ವಿದ್ಯಾರಣ್ಯಪುರದ ನಿವಾಸದಲ್ಲಿ ರಾಜೇಶ್ ಅವರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ ಎಂದು ಅರ್ಜುನ್ ಸರ್ಜಾ ಹೇಳಿದ್ದಾರೆ.
ಮಧ್ಯಾಹ್ನ 3:30ರ ನಂತರ ಹೆಬ್ಬಾಳ ಚಿತಾಗಾರದಲ್ಲಿ ಅಂತ್ಯಕ್ರಿಯೆಗೆ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ ಎಂದು ಕುಟುಂಬಸ್ಥರು ಮಾಹಿತಿ ನೀಡಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಹಿಜಾಬ್ ಪರ ಪ್ರತಿಭಟನೆ: 58 ವಿದ್ಯಾರ್ಥಿನಿಯರ ಅಮಾನತು
ಸೌದೆ ತರಲು ಹೋಗಿದ್ದ ಕುರಿಗಾಹಿ ಮಹಿಳೆಯ ಮೇಲೆ ಅತ್ಯಾಚಾರ, ಕೊಲೆ?
ಗಾಂಜಾ ಸೇದಲು ಪ್ರೇರಣೆ ನೀಡಿದ್ರಾ ಪುನೀತ್ ಕೆರೆಹಳ್ಳಿ?
ಯೇಸುವಿನ ಪ್ರತಿಮೆ ಧ್ವಂಸ: ಕ್ರಿಶ್ಚಿಯನ್ನರ ಮೇಲಿನ ದಾಳಿಗೆ ಉದಾಹರಣೆ: ಕ್ಯಾಥೋಲಿಕ್ ಬಿಷಪ್ ಗಳಿಂದ ಬೇಸರ