ಸಾವಿಗೆ ಶರಣಾಗಲು ಯತ್ನಿಸಿದ ಸಾಮಾಜಿಕ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದ ಸಂದೇಶ್!
ಕೋಲಾರ: ಅಂಬೇಡ್ಕರ್ ಸೇವಾ ಸಮಿತಿ ಸಂಘಟನೆ ಮೂಲಕ ಶೋಷಿತ ಸಮುದಾಯದ ಪರ ಹಲವಾರು ಹೋರಾಟಗಳಲ್ಲಿ ಮುಂಚೂಣಿಯಲ್ಲಿದ್ದ ಸಂದೇಶ್ (28) ಅವರು ಸಾವಿಗೆ ಶರಣಾಗಲು ಯತ್ನಿಸಿದ ಘಟನೆ ನಡೆದಿದೆ.
ಗಣ್ಯ ವ್ಯಕ್ತಿಗಳು ಹಾಗೂ ಅಧಿಕಾರಿಗಳ ಕಿರುಕುಳದಿಂದ ಸಂದೇಶ್ ಅವರು ಸಾವಿಗೆ ಶರಣಾಗಲು ಯತ್ನಿಸಿರುವುದಾಗಿ ಹೇಳಲಾಗಿದೆ. ಸದ್ಯ ಸಂದೇಶ್ ಕೋಲಾರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇತ್ತೀಚೆಗೆ ದಾಖಲಾದ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಸಂದೇಶ್ ಅವರಿಗೆ ಅಧಿಕಾರಿಗಳು ಹಾಗೂ ಗಣ್ಯ ವ್ಯಕ್ತಿಗಳು ಕಿರುಕುಳ ನೀಡುತ್ತಿದ್ದರು ಅನ್ನೋ ಆರೋಪ ಕೇಳಿ ಬಂದಿದೆ.
ಇನ್ನೂ ಸಂದೇಶ್ ಅವರು, ವಿಷ ಸೇವಿಸಿ ಸಾವಿಗೆ ಶರಣಾಗಲು ಯತ್ನಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ಸಂದೇಶ್ ಪರ ಸಾಮಾಜಿಕ ಜಾಲತಾಣಗಳಲ್ಲಿ ಸಾರ್ವಜನಿಕರು ವ್ಯಾಪಕವಾಗಿ ಬರಹಗಳನ್ನು ಬರೆದು ವ್ಯವಸ್ಥೆಯ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಇನ್ನೊಂದೆಡೆ ಯುವ ಹೋರಾಟಗಾರನೋರ್ವನನ್ನು ಉಳಿಸಲಾಗದ ಸಮುದಾಯದ ನಾಯಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw