ಲೈಂಗಿಕ ಕಿರುಕುಳ ಪ್ರಕರಣ: ಸಮರಕ್ಕೂ ಸಿದ್ಧ ಸಂಧಾನಕ್ಕೂ ಸಿದ್ಧ ಎಂದ ಮುರುಘಾಶ್ರೀ
ಚಿತ್ರದುರ್ಗ: ಡಾ.ಶಿವಮೂರ್ತಿ ಮುರುಘಾ ಶರಣರ ವಿರುದ್ಧ ಪೋಕ್ಸೋ ಕಾಯ್ದೆಯಡಿ ಕೇಸ್ ದಾಖಲಾಗಿದ್ದು, ಮಠದ ಆಡಳಿತಾಧಿಕಾರಿ ಬಸವರಾಜನ್ ವಿರುದ್ಧವೂ ಅತ್ಯಾಚಾರ ಯತ್ನ ಕೇಸ್ ದಾಖಲಾಗಿದೆ. ಈ ನಡುವೆ ಆರೋಪದ ಹಿನ್ನೆಲೆಯಲ್ಲಿ ಮಠದಲ್ಲಿ ಶ್ರೀಗಳು ಸಲಹಾ ಸಮಿತಿ ಸಭೆ ನಡೆಸಿದ್ದಾರೆ.
ಸಭೆಯಲ್ಲಿ ಮುರುಘಾಶ್ರೀ, ನಾನು ಸಮರಕ್ಕೂ ಸಿದ್ಧ, ಸಂಧಾನಕ್ಕೂ ಸಿದ್ಧ ಎಂದು ಆಪ್ತರ ಎದುರು ಹೇಳಿಕೊಂಡಿದ್ದಾರೆನ್ನಲಾಗಿದ್ದು, ತಪ್ಪು ಒಪ್ಪಿಕೊಂಡು ಬಂದರೆ, ಕ್ಷಮಿಸಿ ಸಂಧಾನ ಮಾಡೋಣ, ಕಾನೂನು ಸಮರಕ್ಕೆ ಸೈ ಅಂದ್ರೆ, ಕಾನೂನು ಮೂಲಕವೇ ಹೋರಾಟ ಮಾಡೋಣ ಎಂದು ಸ್ವಾಮೀಜಿ ಹೇಳಿದ್ದಾರೆ.
ಕೆಲ ಹಿರಿಯ ಅಧಿಕಾರಿಗಳು ಮತ್ತು ಸರ್ಕಾರದ ಮಟ್ಟದಲ್ಲಿ ಮುರುಘಾಮಠದ ಮುರುಘಾಶ್ರೀ ಮಾತುಕತೆ ನಡೆಸಿದ್ದಾರೆ. ಬಂಧನದ ಭೀತಿ ನಡುವೆ ಎದೆಗುಂದದೆ ಮಾತುಕತೆ ನಡೆಸಿದ್ದಾರೆ. ಇನ್ನು ಆರೋಪ ಕೇಳಿ ಬಂದ ಬಳಿಕ ಬೆಳಗ್ಗೆಯಿಂದ ವಿವಿಧ ಮುಖಂಡರು, ಮಠಾಧೀಶರು ಚಿತ್ರದುರ್ಗದ ಮುರುಘಾಮಠಕ್ಕೆ ಭೇಟಿ ನೀಡಿ ಮುರುಘಾಶ್ರೀಗಳ ಜೊತೆ ಚರ್ಚೆ ನಡೆಸಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Ginhq56yzxz2MmHFl94DFN
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka