ಸಂಘ ಪರಿವಾರದ ಓಲೈಕೆಗೆ ಸಿಎಂ ಬೊಮ್ಮಾಯಿ ಈ ಮಟ್ಟಕ್ಕೆ ಇಳಿಯಬಾರದಿತ್ತು | ಸಿದ್ದರಾಮಯ್ಯ ಆಕ್ರೋಶ
ಬೆಂಗಳೂರು: ಆ್ಯಕ್ಷನ್ ಗೆ ರಿಯಾಕ್ಷನ್ ಇರುತ್ತೆ ಎನ್ನುವ ಮೂಲಕ ಸಿಎಂ ಬಸವರಾಜ್ ಬೊಮ್ಮಾಯಿ ನಿನ್ನೆ ಮಂಗಳೂರಿನಲ್ಲಿ ನೈತಿಕ ಪೊಲೀಸ್ ಗಿರಿಗೆ ಪರೋಕ್ಷ ಬೆಂಬಲ ನೀಡಿದ್ದರು. ಈ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಸಿಎಂ ಬಸವರಾಜ್ ಬೊಮ್ಮಾಯಿ ಅವರನ್ನು ತರಾಟೆಗೆತ್ತಿಕೊಂಡಿದ್ದಾರೆ.
ಸಿಎಂ ಬೊಮ್ಮಾಯಿ ಅವರ ಹೇಳಿಕೆಗೆ ವಿರೋಧ ವ್ಯಕ್ತಪಡಿಸಿ ಸರಣಿ ಟ್ವೀಟ್ ಮಾಡಿರುವ ಅವರು, ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಯವರೇ, ಪುಂಡರು ಕಾನೂನನ್ನು ಕೈಗೆತ್ತಿಕೊಳ್ಳುವ ಅನೈತಿಕ ಪೊಲೀಸ್ ಗಿರಿಯನ್ನು ಸಮರ್ಥಿಸುವ ಮೂಲಕ ಕಾನೂನು ಪಾಲನೆ ನಿಮ್ಮಿಂದ ಸಾಧ್ಯವಿಲ್ಲ ಎಂದು ನಿಮ್ಮ ಅಸಾಮರ್ಥ್ಯವನ್ನು ತೋಡಿಕೊಂಡಿದ್ದೀರಿ. ದಯವಿಟ್ಟು ರಾಜೀನಾಮೆ ಕೊಟ್ಟು ಮನೆಗೆ ಹೋಗಿ. ರಾಜ್ಯವನ್ನು ಜಂಗಲ್ ರಾಜ್ಯ ಮಾಡಬೇಡಿ ಎಂದು ಒತ್ತಾಯಿಸಿದ್ದಾರೆ.
ಅನೈತಿಕ ಪೊಲೀಸ್ ಗಿರಿಗೆ ಬಲಿಯಾಗುತ್ತಿರುವುದು ಅಸಹಾಯಕ, ಅಮಾಯಕ ಹೆಣ್ಣುಮಕ್ಕಳು. ಸ್ತ್ರಿಪೀಡಕರ ಹೆಡೆಮುರಿಕಟ್ಟಿ ಜೈಲಿಗೆ ತಳ್ಳಬೇಕಾದ ನೀವು ಅದನ್ನು ಮಾಡದೆ ದುಷ್ಕರ್ಮಿಗಳ ರಕ್ಷಣೆಗೆ ನಿಂತಿದ್ದೀರಿ. ಕುರ್ಚಿಯ ರಕ್ಷಣೆಗಾಗಿ ಸಂಘ ಪರಿವಾರದ ಓಲೈಕೆ ನಿಮಗೆ ಅನಿವಾರ್ಯವಾಗಿರಬಹುದು. ಇದಕ್ಕಾಗಿ ಇಷ್ಟೊಂದು ಕೆಳಮಟ್ಟಕ್ಕೆ ಇಳಿಯುವುದೇ? ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
ನಾಳೆಯಿಂದ ರಾಜ್ಯದಲ್ಲಿ ಹೆಣ್ಣುಮಕ್ಕಳ ಮೇಲೆ ಅನೈತಿಕ ಪೊಲೀಸ್ ಗಿರಿಯನ್ನು ಯಾರೇ ನಡೆಸಲಿ, ಅವರದ್ದು ಮುಖವಾಡ ಮಾತ್ರ, ಅಸಲಿ ಮುಖ ಅಂತಹ ಕೃತ್ಯಕ್ಕೆ ಪ್ರಚೋದನೆ, ಉತ್ತೇಜನ ಮತ್ತು ರಕ್ಷಣೆ ನೀಡುವ ನಿಮ್ಮದು ಎಂದು ತಿಳಿದುಕೊಳ್ಳಬಹುದೇ ಬೊಮ್ಮಾಯಿ ಅವರೇ? ಎಂದು ಸಿದ್ದರಾಮಯ್ಯ ತರಾಟೆಗೆತ್ತಿಕೊಂಡಿದ್ದಾರೆ.
ಆ್ಯಕ್ಷನ್ ಗೆ ರಿಯಾಕ್ಷನ್ ಇರುತ್ತೆ ಎಂದು ಹೇಳುವ ಮೂಲಕ ಯಾವ ಕಾಡಿನ ನ್ಯಾಯವನ್ನು ಪಾಠ ಮಾಡುತ್ತಿದ್ದೀರಿ ಬೊಮ್ಮಾಯಿ ಅವರೇ, ಪೊಲೀಸ್ ಇಲಾಖೆಯನ್ನು ರದ್ದು ಮಾಡಿ ನಿಮ್ಮ ಪರಿವಾರಕ್ಕೆ ಕಾನೂನು ಪಾಲನೆಯ ಕೆಲಸವನ್ನು ವಹಿಸಿಕೊಡುವ ದುಷ್ಟ ಉದ್ದೇಶವೇನಾದರೂ ನಿಮಗಿದೆಯೇ? ಎಂದು ಸಿದ್ದರಾಮಯ್ಯ ತರಾಟೆಗೆತ್ತಿಕೊಂಡಿದ್ದಾರೆ.
ನಿಮ್ಮ ಆರೋಗ್ಯ ಸಚಿವ ಸುಧಾಕರ್ ಅವರು ಇತ್ತೀಚೆಗೆ ಹೆಣ್ಣುಮಕ್ಕಳ ಬದುಕುವ ಸ್ವಾತಂತ್ರ್ಯವನ್ನು ಪ್ರಶ್ನಿಸಿ ಅವಮಾನ ಮಾಡಿದ್ದರು, ಇದೀಗ ನೀವು ಮಹಿಳೆಯರ ಮೆಲೆ ದೌರ್ಜನ್ಯ ನಡೆಸುತ್ತಿರುವವರ ರಕ್ಷಣೆಗೆ ಇಳಿದಿದ್ದೀರಿ. ನಿಮ್ಮ ಸರ್ಕಾರದ ನಿಷ್ಠೆ ಸಂವಿಧಾನಕ್ಕೋ? ಮನುಸ್ಮೃತಿಗೋ ಎಂದು ಬೊಮ್ಮಾಯಿ ವಿರುದ್ಧ ಪ್ರಶ್ನೆಗಳ ಸುರಿಮಳೆಯನ್ನೇ ಸುರಿಸಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಇನ್ನಷ್ಟು ಸುದ್ದಿಗಳು…
ಕೆಲಸ ಮುಗಿಸಿ ತೆರಳುತ್ತಿದ್ದ ವ್ಯಕ್ತಿಗೆ ದುಷ್ಕರ್ಮಿಗಳ ತಂಡದಿಂದ ಚೂರಿ ಇರಿತ!
ಹಬ್ಬದ ದಿನವೇ ಘೋರ ಕೃತ್ಯ: ಸಾಂಬರ್ ಚೆನ್ನಾಗಿಲ್ಲ ಎಂದು ತಾಯಿ, ತಂಗಿಯನ್ನು ಗುಂಡು ಹಾರಿಸಿಕೊಂಡ ಪಾಪಿ!
ಅದೇ ವಿಡಿಯೋದಲ್ಲಿ ಬಿ.ವೈ.ವಿಜಯೇಂದ್ರ ಬಗ್ಗೆಯೂ ಮಾತನಾಡಿದ್ರಂತೆ ಸಲೀಂ | ವಿಡಿಯೋ ಕಟ್ ಮಾಡಿ ತೋರಿಸಲಾಗಿದೆ ಎಂಬ ಆರೋಪ
ಕೋಟಿಗೊಬ್ಬ-3: ಬಿಡುಗಡೆ ದಿನವೇ ಸುದೀಪ್ ಅಭಿಮಾನಿಗಳಿಗೆ ಭಾರೀ ನಿರಾಸೆ
12 ವರ್ಷ ವಯಸ್ಸಿನ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನ: ಆರೋಪಿ ಅರೆಸ್ಟ್
ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಸಿಡಿ ಬಿಡುಗಡೆಗೆ ಕ್ಷಣಗಣನೆ ಎಂಬ ಫೋಟೋ ವೈರಲ್: ದೂರು ದಾಖಲು
ದಸರ ಮುಗಿದ ತಕ್ಷಣ ಪೂರ್ಣ ಪ್ರಮಾಣದಲ್ಲಿ ಶಾಲೆ ಆರಂಭ: ಶಿಕ್ಷಕರಿಗೆ ಸರ್ಕಾರ ನೀಡಿದ ಆದೇಶ ಏನು?