ಸಂಗೊಳ್ಳಿ ರಾಯಣ್ಣ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು: ಘಟನಾ ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್
ಬೆಳಗಾವಿ: ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣ ಅವರ ಮೂರ್ತಿಯನ್ನು ಭಗ್ನಗೊಳಿಸಿರುವ ಘಟನೆ ಜಿಲ್ಲೆಯ ಅನಗೋಳದ ಕನಕದಾಸ ಕಾಲೋನಿಯಲ್ಲಿ ನಡೆದಿದ್ದು, ಘಟನೆಗೆ ಸಂಬಂಧಿಸಿದಂತೆ ರಾಯಣ್ಣನ ಅಭಿಮಾನಿಗಳು ತೀವ್ರ ಪ್ರತಿಭಟನೆ ನಡೆಸಿದ್ದಾರೆ.
ಮುಖದ ಭಾಗವನ್ನು ಕಿಡಿಗೇಡಿಗಳು ತಲ್ವಾರ್ ಬಳಸಿ ವಿರೂಪಗೊಳಿಸಿದ್ದಾರೆ. ಪ್ರತಿಮೆಯಲ್ಲಿದ್ದ ಖಡ್ಗವನ್ನು ಕಿತ್ತು ಹಾಕಿದ್ದಾರೆ. ಎನ್ನಲಾಗಿದೆ. ಬೆಳಗ್ಗಿನ ಜಾವ 3ರ ಸುಮಾರಿಗೆ ಈ ಕೃತ್ಯ ನಡೆಸಿರುವ ಕಿಡಿಗೇಡಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ.
ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ತೆರಳಿದ ತಿಲಕವಾಡಿ ಠಾಣೆ ಪೊಲೀಸರು, ಪ್ರತಿಮೆಯನ್ನು ಮುಂಜಾಗೃತಾ ಕ್ರಮವಾಗಿ ವಶಕ್ಕೆ ಪಡೆದುಕೊಂಡಿದ್ದಾರೆ. ಘಟನೆ ಸಂಬಂಧ ರಾಯಣ್ಣ ಅಭಿಮಾನಿ ಸಂಘಟನೆಗಳು ತಿಲಕವಾಡಿ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿದವು.
ಇನ್ನೂ ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಪೊಲೀಸರು ಕಿಡಿಗೇಡಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವ ಭರವಸೆ ನೀಡಿದ ಹಿನ್ನೆಲೆಯಲ್ಲಿ ಪ್ರತಿಭಟನೆ ಹಿಂಪಡೆಯಲಾಗಿದೆ. ಆದರೂ ಘಟನಾ ಸ್ಥಳದಲ್ಲಿ ಪೊಲೀಸರು ಬಿಗು ಬಂದೋಬಸ್ತ್ ಏರ್ಪಡಿಸಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಪ್ರಿಯಕರನ ಸಾವಿನಿಂದ ನೊಂದು ನೇಣಿಗೆ ಶರಣಾದ ಯುವತಿ!
ಉಪ್ಪಿನಂಗಡಿ ಘಟನೆ ಖಂಡಿಸಿ ಮಂಗಳೂರಿನಲ್ಲಿ ಪಿಎಫ್ ಐ ಬೃಹತ್ ಪ್ರತಿಭಟನೆ
ಸಿದ್ದರಾಮಯ್ಯ, ಸಿಎಂ ಇಬ್ರಾಹಿಂ ಬೈದಾಡಿಕೊಳ್ಳುತ್ತಿರುವ ವಿಡಿಯೋ ಬಗ್ಗೆ ಸಿಎಂ ಇಬ್ರಾಹಿಂ ಹೇಳಿದ್ದೇನು ಗೊತ್ತಾ?
ಅತ್ಯಾಚಾರದ ಬಗ್ಗೆ ವ್ಯಂಗ್ಯ: ಸ್ಪೀಕರ್ ಕಾಗೇರಿ ಕ್ಷಮೆ ಕೇಳುವುದಿಲ್ಲವೇ? ಎಂಬ ಪ್ರಶ್ನೆಗೆ ನಿರುತ್ತರವಾದ ಯಡಿಯೂರಪ್ಪ
“ರೇಪ್ ತಡೆಯಲು ಆಗದಿದ್ದರೆ, ಮಲಗಿ ಎಂಜಾಯ್ ಮಾಡಬೇಕು” | ತನ್ನ ವಿವಾದಾತ್ಮಕ ಹೇಳಿಕೆಗೆ ಕ್ಷಮೆ ಕೇಳಿದ ರಮೇಶ್ ಕುಮಾರ್
ಮಗುವನ್ನು ಬಕೆಟ್ ನಲ್ಲಿ ಮುಳುಗಿಸಿ ಕೊಂದು ತಾನೂ ಆತ್ಮಹತ್ಯೆಗೆ ಶರಣಾದ ಮಹಿಳೆ!