ಸಂಗೊಳ್ಳಿ ರಾಯಣ್ಣ ಪ್ರತಿಮೆ ಧ್ವಂಸ ಅಕ್ಷಮ್ಯ ಅಪರಾಧ: ಬಿ.ಎಸ್.ಯಡಿಯೂರಪ್ಪ
ಮೈಸೂರು: ಬೆಳಗಾವಿಯಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಧ್ವಂಸ ಅಕ್ಷಮ್ಯ ಅಪರಾಧ. ಯಾವುದೇ ಮುಖಂಡರು, ದೇಶಭಕ್ತರ ಮೂರ್ತಿಗಳನ್ನು ಧ್ವಂಸ ಮಾಡುವುದನ್ನು ಸಹಿಸಲು ಸಾಧ್ಯವಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
ಮೈಸೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಬಿಗಿಯಾದ ಕ್ರಮ ತೆಗೆದುಕೊಂಡು ಇನ್ನು ಮುಂದೆ ಇಂತಹ ಅಹಿತಕರ ಘಟನೆಗಳು ನಡೆಯದಂತೆ ಎಚ್ಚರಿಕೆ ವಹಿಸುವ ಕ್ರಮಗಳನ್ನು ಸರ್ಕಾರ ತೆಗೆದುಕೊಳ್ಳುತ್ತಿದೆ. ವಿಧಾನ ಮಂಡಲದಲ್ಲಿ ಕೂಡ ಈ ಬಗ್ಗೆ ಸುದೀರ್ಘ ಚರ್ಚೆಯಾಗಬಹುದು, ಅಲ್ಲಿ ಕ್ರಮ ತೆಗೆದುಕೊಳ್ಳುವ ಬಗ್ಗೆ ನಿರ್ಣಯ ತೆಗೆದುಕೊಳ್ಳಬಹುದು ಎಂದರು.
ಉದ್ದೇಶಪೂರ್ವಕವಾಗಿ ಬೆಳಗಾವಿ ಅಧಿವೇಶನ ಸಂದರ್ಭದಲ್ಲಿ ಈ ರೀತಿಯ ಪುಂಡಾಟಿಕೆ ನಡೆಯುವುದು ಅಧಿವೇಶನ ಕಾರ್ಯಕಲಾಪಗಳು ಸುಸೂತ್ರವಾಗಿ ನಡೆಯಬಾರದು ಎಂಬ ದುರುದ್ದೇಶವೂ ಇದೆಯೆನ್ನುವುದು ಸ್ಪಷ್ಟವಾಗಿ ಗೊತ್ತಾಗುತ್ತದೆ. ಈ ಹಿನ್ನೆಲೆಯಲ್ಲಿ ಎಲ್ಲದರ ಬಗ್ಗೆಯೂ ಸುದೀರ್ಘ ಚರ್ಚೆ ನಡೆಯಲಿದೆ ಎಂದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಮಿಯ್ಯಾರು ಲವ-ಕುಶ ಜೋಡುಕರೆ ಕಂಬಳ ಕೂಟದ ಫಲಿತಾಂಶ
ಶಿವಾಜಿ ಪ್ರತಿಮೆಗೆ ಮಸಿ ಬಳಿದಿರುವುದು ‘ಕನ್ನಡಿಗರ ವಿಕೃತ ಮನಸ್ಥಿತಿ’: ಉದ್ದವ್ ಠಾಕ್ರೆ
‘ವೀರ ಸಾವರ್ಕರ್’ ಪುಸ್ತಕ ಬಿಡುಗಡೆ: ಅಂಬೇಡ್ಕರ್ ಹಾಗೂ ಸಾವರ್ಕರ್ ನಡುವೆ ಉತ್ತಮ ಸಂಬಂಧವಿತ್ತು | ಬಿ.ಎಲ್.ಸಂತೋಷ್
ಕೊಲೆಗೆ ಕೊಲೆಯೇ ಉತ್ತರವಾಯ್ತು!: ಎಸ್ ಡಿಪಿಐ ಮುಖಂಡನ ಕೊಲೆ ನಡೆದು ಬೆಳಗಾಗುವಷ್ಟರಲ್ಲಿ ಬಿಜೆಪಿ ಮುಖಂಡನ ಬರ್ಬರ ಹತ್ಯೆ