ಸಾಹಿತ್ಯ ಸಮ್ಮೇಳನ ವೇದಿಕೆಯಲ್ಲಿ ಸಂವಿಧಾನ ಬದಲಾವಣೆಯ ಹೇಳಿಕೆ: ಸಣ್ಣತನ ತೋರಿದ ದೊಡ್ಡರಂಗೇಗೌಡ
ಹಾಸನ: ಇವರೆಲ್ಲ ಯಾವ ಅರ್ಹತೆಯ ಆಧಾರದಲ್ಲಿ ಸಾಹಿತ್ಯ ಪರಿಷತ್ ನ ಅಧ್ಯಕ್ಷರಾಗಿದ್ದಾರೋ ಗೊತ್ತಿಲ್ಲ. ಎಲ್ಲೋ ಕೇಳಿ ಕೊಂಡು ಬಂದಿರುವ ಮಾತುಗಳನ್ನು ಸಾಹಿತ್ಯ ಸಮ್ಮೇಳದಲ್ಲಿ ಮಾತನಾಡುವ ಮೂಲಕ ದೇಶಕ್ಕೆ ಅಪಮಾನ ಮಾಡುವ ಕೆಲಸಕ್ಕೆ ಕೈಹಾಕಿದ್ದಾರೆ.
ಅಖಿಲ ಭಾರತ ಕನ್ನಡ ಸಾಹಿತ್ಯ ಪರಿಷತ್ ನ ನಿಯೋಜಿತ ಸಮ್ಮೇಳನಾಧ್ಯಕ್ಷ ದೊಡ್ಡರಂಗೇಗೌಡ ಅವರು ವೇದಿಕೆಯಲ್ಲಿ ಸಣ್ಣತನದ ಹೇಳಿಕೆ ನೀಡಿದ ಘಟನೆ ನಡೆದಿದ್ದು, ಅಂಬೇಡ್ಕರ್ ಅವರು ಅಂದಿನ ಕಾಲಘಟ್ಟಕ್ಕೆ ಸಂಬಂಧಿಸಿದಂತೆ ಸಂವಿಧಾನ ರಚಿಸಿದ್ದಾರೆ. ಪ್ರಸ್ತುತ ವಿದ್ಯಮಾನಕ್ಕೆ ಸಂವಿಧಾನ ಬದಲಾಗಬೇಕು ಎಂದು ಹೇಳಿದ್ದು, ಈ ಸಂಬಂಧ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.
ಹಾಸನ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳದಲ್ಲಿ ಬಲಪಂಥೀಯ ಸಂಘಟನೆಯ ನಾಯಕರಂತೆ ಮಾತನಾಡಿದ ದೊಡ್ಡೇರಂಗಗೌಡರು ಸಂವಿಧಾನ ಬದಲಾವಣೆಯ ಬಗ್ಗೆ ನಾಲಿಗೆ ಹರಿಯಬಿಟ್ಟಿದ್ದಾರೆ. ಭಾಷೆಯ ವಿಚಾರದಲ್ಲಿ ನಡೆಸಲಾಗುತ್ತಿದ್ದ ಕಾರ್ಯಕ್ರಮದಲ್ಲಿ ಸಂವಿಧಾನದ ವಿಷಯ ತೆಗೆದು, ಸಂವಿಧಾನಕ್ಕೆ ಅವಮಾನ ಮಾಡಲು ಮುಂದಾಗಿದ್ದಾರೆ. ಈ ಸಂಬಂಧ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.
ಅಂಬೇಡ್ಕರ್ ಅವರಿಂದ ಅಂದಿನ ಕಾಲಘಟ್ಟಕ್ಕೆ ಸಂಬಂಧಿಸಿದಂತೆ ಸಂವಿಧಾನ ರಚನೆ ಮಾಡಲಾಗಿದೆ. ಪ್ರಸ್ತುತ ವಿದ್ಯಮಾನಕ್ಕೆ ಸಂಬಂಧಿಸಿದಂತೆ ಸಂವಿಧಾನ ತಿದ್ದುಪಡಿ ಮಾಡಬೇಕು. ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ನಾನು ಮನವಿ ಮಾಡುತ್ತೇನೆ ಎಂದು ಅವರು ಹೇಳಿದ್ದಾರೆ. ಇದರಿಂದಾಗಿ ಇತರ ಸಾಹಿತಿಗಳು ತೀವ್ರವಾಗಿ ಆಕ್ರೋ ವ್ಯಕ್ತಪಡಿಸಿದ್ದು, ಈ ವಿಚಾರವನ್ನು ಅವರು ಪ್ರಸ್ತಾಪಿಸುತ್ತಿದ್ದಂತೆಯೇ ಸಾಹಿತಿಗಳು ಕಾರ್ಯಕ್ರಮವನ್ನು ಬಹಿಷ್ಕರಿಸಿ ಹೊರ ನಡೆದರು.