ಸ್ಯಾಂಟ್ರೋ ರವಿ ಬಂಧನ: ಗೃಹ ಸಚಿವ ಅರಗ ಜ್ಞಾನೇಂದ್ರ ಫಸ್ಟ್ ರಿಯಾಕ್ಷನ್ - Mahanayaka

ಸ್ಯಾಂಟ್ರೋ ರವಿ ಬಂಧನ: ಗೃಹ ಸಚಿವ ಅರಗ ಜ್ಞಾನೇಂದ್ರ ಫಸ್ಟ್ ರಿಯಾಕ್ಷನ್

araga jnanendra
13/01/2023

ಸ್ಯಾಂಟ್ರೋ ರವಿ ಬಂಧನ ಖಚಿತಪಡಿಸಿದ ಗೃಹ ಸಚಿವ ಅರಗ ಜ್ಞಾನೇಂದ್ರ, 11 ದಿನಗಳ ನಂತರ ಸ್ಯಾಂಟ್ರೋ ರವಿ ಬಂಧನವಾಗಿದೆ. ಪೊಲೀಸರ ವಿಶೇಷ ಪ್ರಯತ್ನದಿಂದ ಸ್ಯಾಂಟ್ರೋ ರವಿ ಬಂಧನವಾಗಿದೆ. ಗುಜರಾತ್ ರಾಜ್ಯದಲ್ಲಿ ಸ್ಯಾಂಟ್ರೋ ರವಿ ಬಂಧನವಾಗಿದೆ ಎಂದಿದ್ದಾರೆ.

ಗುಜರಾತ್ ನಲ್ಲಿ ನ್ಯಾಯಾಲಯಕ್ಕೆ ಆತನನ್ನು ಹಾಜರುಪಡಿಸುತ್ತಾರೆ. ನಂತರ ಆತನನ್ನು ಕರೆ ತರುವುದಾಗಿ ಪೊಲೀಸ್ ಮೂಲಗಳು ತಿಳಿಸಿವೆ. ಇಂದು ಸಂಜೆ ಅಥವಾ ನಾಳೆ ಆತನನ್ನು ಬೆಂಗಳೂರಿಗೆ ಕರೆದಿರುವ ಸಾಧ್ಯತೆ ಇದೆ. ಎರಡು ಮೂರು ಕಡೆ ಅಂತಿಮ ಕ್ಷಣದಲ್ಲಿ ತಪ್ಪಿಸಿಕೊಂಡಿದ್ದ. ಎಲ್ಲಾ ಆಯಮದಲ್ಲೂ ತನಿಖೆ ನಡೆಯುತ್ತದೆ ಏನೇ ಇದ್ದರೂ ಅಡಗಿಸಿರುವುದಿಲ್ಲ. ಅತ್ಯಂತ ಪಾರದರ್ಶಕವಾಗಿ ತನಿಖೆ ನಡೆಯುತ್ತದೆ ಎಂದು ಅವರು ಹೇಳಿದ್ದಾರೆ.


ADS

ಆತ ನಡೆಸಿದ ಎಲ್ಲ ಕೃತ್ಯಕ್ಕೆ ಶಿಕ್ಷೆಯಾಗುತ್ತೆ. ಯಾವುದೇ ಅಧಿಕಾರಿ ರಾಜಕಾರಣಿ ಇದ್ದರೂ ಕೂಡ ತನಿಖೆಯಿಂದ ಹೊರಗೆಳೆಯುತ್ತೇವೆ. ಆತನ ಜೊತೆಗೆ ಇರುವವರನ್ನು ಕೂಡ ಬಂಧಿಸಲಾಗುವುದು. ಸದ್ಯ ರವಿ ಬಂಧನವಾಗಿದೆ ಹೆಚ್ಚಿನ ವಿವರಣೆ ನೀಡಲು ಹೋಗುವುದಿಲ್ಲ ಪೊಲೀಸರು ಈ ಬಗ್ಗೆ ವಿವರ ನೀಡುತ್ತಾರೆ ಎಂದು ಅವರು ತಿಳಿಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LG00SlXNdBFJ1LFb3E40gL

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ