ಹಿಜಾಬ್ ವಿವಾದ: ತಾಯಿ ಸರಸ್ವತಿ ಎಲ್ಲರಿಗೂ ಒಳ್ಳೆಯ ಬುದ್ದಿ ಕೊಡಲಿ: ರಾಹುಲ್ ಗಾಂಧಿ

ನವದೆಹಲಿ: ಮಹಿಳಾ ಕಾಲೇಜಿನಲ್ಲಿ ಹಿಜಾಬ್ ವಿವಾದ ಮುಂದುವರಿದಿದ್ದು, ಮೂರು ವಾರ ಕಳೆದರೂ ಅಂತ್ಯಗೊಳ್ಳುವ ಲಕ್ಷಣ ಕಾಣುತ್ತಿಲ್ಲ. ಹಿಜಾಬ್ ಧರಿಸುವುದು ತಮ್ಮ ಹಕ್ಕು ಎಂದು ವಿದ್ಯಾರ್ಥಿನಿಯರು ಹೇಳಿದರೆ, ಮತ್ತೊಂದೆಡೆ ಕಾಲೇಜು ಆಡಳಿತ ಮಂಡಳಿಯು ಅದಕ್ಕೆ ವಿರೋಧ ವ್ಯಕ್ತಪಡಿಸುತ್ತಿದೆ.
ಈ ವಿಚಾರ ಈಗ ರಾಷ್ಟ್ರೀಯ ವಿವಾದವಾಗಿ ಮಾರ್ಪಟ್ಟಿದೆ. ಈ ನಡುವೆ ಹಿಜಾಬ್ ಬಗ್ಗೆ ರಾಹುಲ್ ಗಾಂಧಿ ಟ್ವೀಟ್ ಮಾಡಿ, ಮಾ ಸರಸ್ವತಿ ಎಲ್ಲರಿಗೂ ಬುದ್ದಿಕೊಡಲಿ, ಆ ತಾಯಿ ಯಾರನ್ನೂ ಭೇದ ಭಾವ ಮಾಡುವುದಿಲ್ಲ ಎಂದು ನಾನು ನಂಬಿದ್ದೇನೆ ಎಂದಿದ್ದಾರೆ.
ಅಷ್ಟೇ ಅಲ್ಲ ಹಿಜಾಬ್ನಿಂದಾಗಿ ಹೆಣ್ಣುಮಕ್ಕಳ ಶಿಕ್ಷಣವನ್ನು ಕಸಿದುಕೊಳ್ಳಲಾಗುತ್ತಿದೆ. ನಾವು ದೇಶದ ಹೆಣ್ಣುಮಕ್ಕಳ ಶಿಕ್ಷಣ ಹಾಗೂ ಭವಿಷ್ಯವನ್ನು ಹಾಳು ಮಾಡುತ್ತಿದ್ದೇವೆ. ಆ ದೇವಿ ಸರಸ್ವತಿ ಎಲ್ಲರಿಗೂ ಒಳ್ಳೆಯ ಬುದ್ದಿ ಕೊಡಲಿ, ಆ ತಾಯಿ ಯಾರನ್ನೂ ಭೇದ ಭಾವ ಮಾಡುವುದಿಲ್ಲ ಎಂದು ನಂಬಿದ್ದೇನೆ ಎಂದು ಟ್ವೀಟ್‌ನಲ್ಲಿ ಹೇಳಿದ್ದಾರೆ.
ಕಳೆದ 37 ವರ್ಷಗಳಿಂದ ಉಡುಪಿಯ ಪದವಿ ಪೂರ್ವ ಮಹಿಳಾ ಕಾಲೇಜಿನಲ್ಲಿ ಸರ್ವಧರ್ಮದ ವಿದ್ಯಾರ್ಥಿನಿಯರು ಸಮವಸ್ತ್ರ ಮಾತ್ರ ಧರಿಸಿ ತರಗತಿಗೆ ಹಾಜರಾಗುತ್ತಿದ್ದರು. ಹಿಜಾಬ್ ಧರಿಸಿ ಬಂದವರು, ತರಗತಿ ಪ್ರವೇಶಿಸುವಾಗ ಅದನ್ನು ತೆಗೆದಿರಿಸಿ ಪಾಠ ಕೇಳುತ್ತಿದ್ದರು. ಈಗ ನೂರಕ್ಕೂ ಅಧಿಕ ಮುಸ್ಲಿಂ ವಿದ್ಯಾರ್ಥಿನಿಯರು ಇಲ್ಲಿ ಪಿಯುಸಿ ಶಿಕ್ಷಣ ಪಡೆಯುತ್ತಿದ್ದಾರೆ. ಆದರೆ ಹಿಜಾಬ್ ವಿವಾದ ಅಂತ ಆರಂಭವಾಗಿರುವುದು ಇದೇ ಮೊದಲಾಗಿದೆ. ಕೆಲ ಸಂಘಟನೆಗಳ ಬೆಂಬಲದೊಂದಿಗೆ ವಿದ್ಯಾರ್ಥಿನಿಯರು ಈ ಹೋರಾಟ ನಡೆಸುತ್ತಿದ್ದಾರೆ ಎನ್ನಲಾಗುತ್ತಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಅಧಿಕೃತ ಕಾರ್ಯಕ್ರಮಗಳಲ್ಲಿ ನ್ಯಾಯಾಲಯಗಳಲ್ಲಿ ಡಾ.ಅಂಬೇಡ್ಕರ್ ಭಾವಚಿತ್ರ ಅಳವಡಿಕೆಗೆ ಹೈಕೋರ್ಟ್ ಆದೇಶ
ಕನ್ನಡದ ಕಬೀರ, ಪದ್ಮಶ್ರೀ ಪುರಸ್ಕೃತ ಇಬ್ರಾಹಿಂ ಸುತಾರ ನಿಧನ
ನಾಲ್ಕು ಜನ ಆತ್ಮಹತ್ಯೆ ಮಾಡಿಕೊಂಡ ಮನೆಯಲ್ಲಿ ಕಾಣಿಸಿಕೊಂಡ ಬೆಳಕು: ಮನೆಗೆ ನುಗ್ಗಿ ನೋಡಿದಾಗ ಸತ್ಯ ಬಯಲು
ಹಿಜಾಬ್ ವಿವಾದ: 6 ವಿದ್ಯಾರ್ಥಿನಿಯರನ್ನು ಸಸ್ಪೆಂಡ್ ಮಾಡಬೇಕಿತ್ತು | ಪ್ರಮೋದ್ ಮುತಾಲಿಕ್