ಹುಡುಗಿಯರನ್ನು ಚುಡಾಯಿಸಿದ್ದಕ್ಕೆ ಸಾರಿಗೆ ಬಸ್ ನಲ್ಲಿಯೇ ಯುವಕನಿಗೆ ಹಿಗ್ಗಾಮುಗ್ಗಾ ಹಲ್ಲೆ!
ಕೋಲಾರ: ಯುವತಿಯನ್ನು ಚುಡಾಯಿಸಿದ್ದಕ್ಕೆ ಸಾರಿಗೆ ಬಸ್ಸಿನಲ್ಲಿಯೇ ಯುವಕನಿಗೆ ಹಿಗ್ಗಾಮುಗ್ಗಾ ಥಳಿಸಿದ ಘಟನೆ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ತಾಡಿಗೋಳ್ ಗ್ರಾಮದಲ್ಲಿ ನಡೆದಿದ್ದು, ಈ ಸಂಬಂಧ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಯುವಕರ ಗುಂಪೊಂದು ಬಾಬು ಎಂಬಾತನಿಗೆ ಬಸ್ ನಲ್ಲಿಯೇ ಹಲ್ಲೆ ನಡೆಸಿದ್ದಾರೆ. ಅಭಿ, ನಾಗೇಂದ್ರ, ಗಂಗಾಧರ್, ನರೇಷ್ ಎಂಬವರ ಗುಂಪು ಬಸ್ಸಿನಲ್ಲಿಯೇ ಹಲ್ಲೆ ನಡೆಸಿದ ವ್ಯಕ್ತಿಗಳಾಗಿದ್ದಾರೆ ಎಂದು ವರದಿಯಾಗಿದೆ.
ಬಾಬು ಹಾಗೂ ಮತ್ತೋರ್ವ ಯುವಕ ತಾಡಿಗೋಳ್ ಗ್ರಾಮದ ಯುವತಿಯರನ್ನು ಚುಡಾಯಿಸುತ್ತಿದ್ದರು ಎನ್ನಲಾಗಿದ್ದು, ಈ ಸಂಬಂಧ ಎಚ್ಚರಿಕೆ ನೀಡಿದ್ದರೂ ಇವರ ಕಾಟ ನಿಂತಿರಲಿಲ್ಲ ಎನ್ನಲಾಗಿದೆ. ಇದರಿಂದಾಗಿ ಆಕ್ರೋಶಗೊಂಡ ಯುವಕರ ತಂಡ ಬಸ್ಸಿನಲ್ಲಿಯೇ ಬಾಬುಗೆ ಹಲ್ಲೆ ನಡೆಸಿದ್ದಾರೆ.
ಇನ್ನೂ ಗೌನಿಪಲ್ಲಿ ಗ್ರಾಮದಿಂದ ಶ್ರೀನಿವಾಸಪುರಕ್ಕೆ ತೆರಳುತ್ತಿದ್ದ ಸಾರಿಗೆ ಬಸ್ ನಲ್ಲಿ ಈ ಘಟನೆ ನಡೆದಿದ್ದು, ಗೌನಿಪಲ್ಲಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಇನ್ನೂ ಬಾಬುಗೆ ಹಲ್ಲೆ ನಡೆಸುತ್ತಿದ್ದ ವೇಳೆ ಹಿಂಬದಿ ಸೀಟಿನಲ್ಲಿ ಕುಳಿತುಕೊಂಡಿದ್ದ ಓರ್ವ ಯುವತಿ ಹಾಗೂ ಯುವಕನಿಗೂ ಪೆಟ್ಟು ಬಿದ್ದಿದೆ ಎಂದು ತಿಳಿದು ಬಂದಿದೆ.
ಇನ್ನಷ್ಟು ಸುದ್ದಿಗಳು…
ಆನ್ ಲೈನ್ ಜೂಜು ನಿಷೇಧಕ್ಕೆ ರಾಜ್ಯ ಸರ್ಕಾರ ತೀರ್ಮಾನ | ಸಚಿವ ಮಾಧುಸ್ವಾಮಿ
ಹಾಸ್ಟೆಲ್ ನ ರಹಸ್ಯ ಮುಚ್ಚಿ ಹಾಕಲು ಅತ್ಯಾಚಾರದ ಕಥೆ ಕಟ್ಟಿದ ವಿದ್ಯಾರ್ಥಿನಿ?
1ರಿಂದ 5ನೇ ತರಗತಿವರೆಗೆ ಶಾಲೆಗಳನ್ನು ತೆರೆಯುವ ಚಿಂತನೆ ಸದ್ಯಕ್ಕಿಲ್ಲ | ಸಚಿವ ಸುಧಾಕರ್
ಅಫ್ಘಾನಿಸ್ತಾನದಲ್ಲಿ ಲೈಂಗಿಕ ಕಾರ್ಯಕರ್ತೆಯರಿಗಾಗಿ ಹುಡುಕಾಡುತ್ತಿರುವ ತಾಲಿಬಾನಿಗಳು | ಡೆತ್ ಸ್ಕ್ವಾಡ್ ಆರಂಭ
ನವದೆಹಲಿಯ ಎಐಸಿಸಿ ಕಟ್ಟಡದಲ್ಲಿ ಐವನ್ ಡಿಸೋಜ ಕಚೇರಿ ಉದ್ಘಾಟನೆ | ಕಾಂಗ್ರೆಸ್ ಕಾರ್ಯಕರ್ತರಿಂದ ಅಭಿನಂದನೆ
ಗಂಡ, ಹೆಂಡತಿ ನಡುವೆ ರಾಜಿ ಪಂಚಾಯಿತಿ ವೇಳೆ ಮನ ಬಂದಂತೆ ಗುಂಡು ಹಾರಿಸಿದ ನಿವೃತ್ತ ಸೈನಿಕ | ಇಬ್ಬರು ಸಾವು