ಲಾರಿ, ಟಾಟಾ ಏಸ್, ಬೈಕ್ ನಡುವೆ ಭೀಕರ ಸರಣಿ ಅಪಘಾತ - Mahanayaka

 ಲಾರಿ, ಟಾಟಾ ಏಸ್, ಬೈಕ್ ನಡುವೆ ಭೀಕರ ಸರಣಿ ಅಪಘಾತ

vittal news
23/04/2021

ವಿಟ್ಲ: ಲಾರಿ, ಟಾಟಾ ಏಸ್ ವಾಹನ ಹಾಗೂ ಬೈಕ್ ನಡುವೆ ಸರಣಿ ಅಪಘಾತ ನಡೆದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮಾಣಿ-ಮೈಸೂರು ರಾಜ್ಯ ಹೆದ್ದಾರಿಯಲ್ಲಿ ನಡೆದಿದ್ದು, ಇಬ್ಬರು ಗಾಯಗೊಂಡಿದ್ದಾರೆ.

ಪುತ್ತೂರಿನಿಂದ ತೆರಳುತ್ತಿದ್ದ ಲಾರಿ, ಮಾಣಿ ಕಡೆಯಿಂದ ಬರುತ್ತಿದ್ದ ಟಾಟಾ ಏಸ್ ವಾಹನಕ್ಕೆ ಡಿಕ್ಕಿಯಾಗಿದೆ. ಈ ವೇಳೆ ಟಾಟಾ ಏಸ್ ವಾಹನದ ಹಿಂದಿನಿಂದ ಬರುತ್ತಿದ್ದ ಬೈಕ್  ಟಾಟಾ ಏಸ್ ಗೆ ಡಿಕ್ಕಿ ಹೊಡೆದಿದೆ.

ಘಟನೆಯಲ್ಲಿ ಇಬ್ಬರು ಗಾಯಗೊಂಡಿದ್ದಾರೆ. ಓರ್ವನ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ. ಗಾಯಾಳುಗಳನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿದೆ. ಇದೇ ಸ್ಥಳದಲ್ಲಿ ಈ ಹಿಂದೆಯೂ ಹಲವು ಅಪಘಾತಗಳು ನಡೆದಿದ್ದು, ಇಲ್ಲಿನ ಜನರು ಇದೊಂದು ಆಕ್ಸಿಡೆಂಟ್ ಸ್ಪಾಟ್ ಎಂದೇ ಕರೆಯುತ್ತಾರೆ.

ಇತ್ತೀಚಿನ ಸುದ್ದಿ