ಸರ್ಕಾರ ಸರಿಯಾದ ನಿರ್ಧಾರ ತೆಗೆದುಕೊಂಡಿಲ್ಲ: ಕೇಂದ್ರದ ವಿರುದ್ಧ ಉಕ್ರೇನ್‌ ನಿಂದ ಮರಳಿದ ವಿದ್ಯಾರ್ಥಿಗಳು ಆಕ್ರೋಶ - Mahanayaka
9:12 PM Wednesday 11 - December 2024

ಸರ್ಕಾರ ಸರಿಯಾದ ನಿರ್ಧಾರ ತೆಗೆದುಕೊಂಡಿಲ್ಲ: ಕೇಂದ್ರದ ವಿರುದ್ಧ ಉಕ್ರೇನ್‌ ನಿಂದ ಮರಳಿದ ವಿದ್ಯಾರ್ಥಿಗಳು ಆಕ್ರೋಶ

indian student
03/03/2022

ನವದೆಹಲಿ: ಯುದ್ಧಪೀಡಿತ ಉಕ್ರೇನ್‌ ನೆಲದಿಂದ ಭಾರತಕ್ಕೆ ವಿಶೇಷ ವಿಮಾನಗಳ ಮೂಲಕ ವಾಪಸ್ಸಾದ ವಿದ್ಯಾರ್ಥಿಗಳಿಗೆ ಗುಲಾಬಿ ಹೂ ಕೊಟ್ಟು ಸ್ವಾಗತಿಸಲಾಗುತ್ತಿದ್ದು, ಕೇಂದ್ರ ಸರ್ಕಾರದ ಈ ಸ್ಪಂದನೆ ಕುರಿತು ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬಿಹಾರ್‌ ಮೂಲದ ದಿವ್ಯಂಶು ಸಿಂಗ್‌, ಉಕ್ರೇನ್‌ ನಿಂದ ಹಂಗೇರಿ ಗಡಿ ತಲುಪಿ ಅಲ್ಲಿಂದ ವಿಶೇಷ ವಿಮಾನದ ಮೂಲಕ ಭಾರತದ ದೆಹಲಿಗೆ ಮರಳಿದ್ದಾರೆ. ಈ ವೇಳೆ ಗುಲಾಬಿ ಹೂ ಕೊಟ್ಟು ಎಲ್ಲಾ ವಿದ್ಯಾರ್ಥಿಗಳನ್ನು ಸ್ವಾಗತಿಸಲಾಯಿತು.

ಈ ವೇಳೆ ಮಾತನಾಡಿದ ದಿವ್ಯಂಶು ಸಿಂಗ್‌, ಯುದ್ಧ ಭೀಕರ ಸ್ಥಳ ಉಕ್ರೇನ್‌ನಿಂದ ಪಾರಾಗಿ ಹಂಗೇರಿ ಗಡಿ ತಲುಪಿದ ಬಳಿಕ ನಮಗೆ ಭಾರತ ಸರ್ಕಾರ ಸಹಾಯ ಮಾಡಿದೆ. ಉಕ್ರೇನ್‌ನಲ್ಲಿ ಸಿಲುಕಿದ್ದಾಗ ಯಾವುದೇ ಸಹಾಯ ಸಿಗಲಿಲ್ಲ. ಹಂಗೇರಿ ತಲುಪಲು ನಾಮಗೆ ನಾವೇ ಶ್ರಮವಹಿಸಿದ್ದೇವೆ. ನಾವು 10 ಮಂದಿ ಗುಂಪು ಕಟ್ಟಿಕೊಂಡು ದಟ್ಟಣೆಯಿದ್ದ ರೈಲಿನಲ್ಲಿ ಹೇಗೋ ಪ್ರಯಾಣ ಮಾಡಿದೆವು ಎಂದು ತಮ್ಮ ಕಷ್ಟದ ಪರಿಸ್ಥಿತಿ ಕುರಿತು ವಿವರಿಸಿದ್ದಾರೆ.

ಭಾರತದ ವಿದ್ಯಾರ್ಥಿಗಳ ಮೇಲೆ ಉಕ್ರೇನ್‌, ರಷ್ಯಾ ಸೈನಿಕರ ದೌರ್ಜನ್ಯ ಕುರಿತು ಪ್ರತಿಕ್ರಿಯಿಸಿ, ಸ್ಥಳೀಯ ಜನರು ನಮಗೆ ಸಹಾಯ ಮಾಡಿದರು. ನಮ್ಮೊಂದಿಗೆ ಯಾರು ಸಹ ಅನುಚಿತವಾಗಿ ವರ್ತಿಸಿಲ್ಲ. ಪೋಲ್ಯಾಂಡ್‌ ಗಡಿಯಲ್ಲಿ ಕೆಲವು ವಿದ್ಯಾರ್ಥಿಗಳು ದೌರ್ಜನ್ಯಕ್ಕೆ ಒಳಗಾಗಿರುವುದು ಸತ್ಯ.

ಅದಕ್ಕೆ ಭಾರತ ಸರ್ಕಾರವೇ ಹೊಣೆ. ಸೂಕ್ತ ಸಮಯಕ್ಕೆ ಸರ್ಕಾರ ಸರಿಯಾದ ನಿರ್ಧಾರ ತೆಗೆದುಕೊಂಡಿದ್ದರೆ ನಾವು ಇಷ್ಟೆಲ್ಲಾ ಸಂಕಷ್ಟಗಳನ್ನು ಎದುರಿಸುವ ಪ್ರಮೇಯ ಬರುತ್ತಿರಲಿಲ್ಲ. ಉಕ್ರೇನ್‌ ಬಿಟ್ಟು ಬಿನ್ನಿ ಎಂದು ಸ್ಪಷ್ಟವಾಗಿ ಸೂಚನೆ ನೀಡಿದ ಮೊದಲ ರಾಷ್ಟ್ರ ಅಮೇರಿಕ ಎಂದು ವಿದ್ಯಾರ್ಥಿ ಸಿಂಗ್‌ ತಿಳಿಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IrdQk252EnnGsLx9CS8tli

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ನಾಲ್ಕು ಮಂತ್ರಿಗಳು ಯಾರ ಹತ್ತಿರ ಮಾತಾಡುತ್ತಿದ್ದಾರೆ: ಪ್ರಿಯಾಂಕ್ ಖರ್ಗೆ ಪ್ರಶ್ನೆ

ನವೀನ್ ಸಾವು: ಬಿಜೆಪಿ ನಾಯಕರಿಂದ ಅರ್ಥವಿಲ್ಲದ ಹೇಳಿಕೆ; ತಮಿಳುನಾಡು ಸಿಎಂ ಸ್ಟಾಲಿನ್ ವಾಗ್ದಾಳಿ

ಮರ್ಮಾಂಗವನ್ನು ತಾನೇ ಕತ್ತರಿಸಿಕೊಂಡು ವ್ಯಕ್ತಿ ಆತ್ಮಹತ್ಯೆ

ಡಿವೈಡರ್‌ ಗೆ ಕಾರು ಡಿಕ್ಕಿ: ಓರ್ವ ಸಾವು, ಮೂವರಿಗೆ ಗಾಯ

ಪ್ರೀತಿಸಿ ಮದುವೆಯಾದ ಯುವಕ ಆತ್ಮಹತ್ಯೆ: ಸತ್ತು ಮೂರು ದಿನವದರೂ ಕುಟುಂಬಸ್ಥರಿಗೆ ತಿಳಿಸದ ಪತ್ನಿ

 

ಇತ್ತೀಚಿನ ಸುದ್ದಿ