ಸರ್ಕಾರದ ಹಣದಲ್ಲಿ ನಡೆಯುವ ಕ್ಯಾಂಟೀನ್ ಗೆ ಇಂದಿರಾ ಹೆಸರು ಬೇಡ | ಸಿ.ಟಿ.ರವಿ ಕಿಡಿ
ಬೆಂಗಳೂರು: ಮಾಜಿ ಸಿಎಂ ಸಿದ್ದರಾಮಯ್ಯನವರ ಕೊಡುಗೆಯಾದ ಇಂದಿರಾ ಕ್ಯಾಂಟೀನ್ ನ ಹೆಸರನ್ನು ಬದಲಿಸುವಂತೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಸಿಎಂ ಬಸವರಾಜ್ ಬೊಮ್ಮಾಯಿ ಅವರಿಗೆ ಮನವಿ ಮಾಡಿದ್ದಾರೆ.
ಇಂದಿರಾ ಕ್ಯಾಂಟಿನ್ ನ್ನು ಅನ್ನಪೂರ್ಣೇಶ್ವರಿ ಕ್ಯಾಂಟೀನ್ ಎಂದು ಹೆಸರನ್ನು ಬದಲಿಸಬೇಕು ಎಂದು ಆಗ್ರಹಿಸಿರುವ ಸಿ.ಟಿ.ರವಿ, ಕಾಂಗ್ರೆಸ್ ತನ್ನ ದುಡ್ಡಿನಲ್ಲಿ ಕ್ಯಾಂಟೀನ್ ಮಾಡುವುದಾದರೆ, ನೆಹರೂ, ಇಂದಿರಾ ಗಾಂಧಿ, ರಾಜೀವ ಗಾಂಧಿ, ಸೋನಿಯಾ ಗಾಂಧಿ ಎಂದು ಬೇಕಾದರೆ ಹೆಸರಿಡಲಿ, ಆದರೆ, ಸರ್ಕಾರದ ಹಣದಲ್ಲಿ ನಡೆಯುವ ಕ್ಯಾಂಟೀನ್ ಗೆ ಇಂದಿರಾ ಎಂದು ಹೆಸರಿಡದಂತೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇನ್ನೂ ಇಂದಿರಾ ಕ್ಯಾಂಟೀನ್ ಮೂಲಕ ಕಾಂಗ್ರೆಸ್ ನವರು ಕೊಳ್ಳೆ ಹೊಡೆದಿದ್ದಾರೆ. ಕ್ಯಾಂಟೀನ್ ಉಸ್ತುವಾರಿ ಯಾರ ಬೀಗರಿಗೆ ಕೊಟ್ಟಿದ್ದಾರೆ. ಆ ಬೀಗರು ಎಷ್ಟು ಹಣ ಲೂಟಿ ಮಾಡಿದ್ದಾರೆ ಎಂದು ಗೊತ್ತಿದೆ ಎಂದು ರವಿ ಕಿಡಿಕಾರಿದ್ದಾರೆ.
ಇನ್ನಷ್ಟು ಸುದ್ದಿಗಳು…
ಕೊನೆಗೂ ಖಾತೆ ಹಂಚಿಕೆ: ಯಾರಿಗೆ ಯಾವ ಖಾತೆ ಹಂಚಿಕೆ ಮಾಡಲಾಗಿದೆ?
ಮತ್ತೆ ಕೃಷ್ಣನ ತಂತ್ರಗಾರಿಗೆ ತೋರುತ್ತಾರಾ ರಮೇಶ್ ಜಾರಕಿಹೊಳಿ?
ಮಾಡದ ತಪ್ಪಿಗೆ ಅಗ್ನಿ ಪರೀಕ್ಷೆ ಎದುರಿಸಿ ಬಂದಿದ್ದೇನೆ | ಕ್ಷೇತ್ರದ ಜನತೆ ಎದುರು ಶಶಿಕಲಾ ಜೊಲ್ಲೆ ಭಾವುಕ
ರಾಜ್ಯದಲ್ಲಿ ಆಗಸ್ಟ್ 23ರಿಂದ ಶಾಲಾ ಕಾಲೇಜು ಆರಂಭಕ್ಕೆ ತೀರ್ಮಾನ | ಸಿಎಂ ಹೇಳಿದ್ದೇನು?
403 ಕ್ಷೇತ್ರಗಳಲ್ಲಿಯೂ ASP ಸ್ಪರ್ಧೆ | ಮಾಯಾವತಿಗೆ ಅಸುರಕ್ಷಿತ ಭಾವನೆ ಇದೆ- ಚಂದ್ರಶೇಖರ್ ಆಜಾದ್
ಬಿಗ್ ನ್ಯೂಸ್: ರಾಜಕೀಯ ನಿವೃತ್ತಿ ಘೋಷಿಸಿದ ಸಂಸದ ಶ್ರೀನಿವಾಸ್ ಪ್ರಸಾದ್
ತಾಯಿಯೇ ಮಗನಿಗೆ ಮೋಸ ಮಾಡಿದಾಗ ಮಗ ಅನಾಥನಾಗಿದ್ದ | ಬಿಜೆಪಿ ಸೇರ್ಪಡೆಗೆ ಎನ್.ಮಹೇಶ್ ಪ್ರತಿಕ್ರಿಯೆ