ಸರ್ಕಾರದ ಮೇಲೆ ಕಮಿಷನ್ ಆರೋಪ ಸತ್ಯಕ್ಕೆ ದೂರವಾದದ್ದು | ನಿರಂಜನಾನಂದಪುರಿ ಸ್ವಾಮೀಜಿ
ಗದಗ : ಕಳೆದ ಕೆಲವು ದಿನಗಳಿಂದ ಸರ್ಕಾರದ ಮೇಲೆ ಕಮಿಷನ್ ಆರೋಪ ಕೇಳಿಬರುತ್ತಿದೆ.ಈ ಹಿನ್ನೆಲೆ ‘ಕಾಗಿನೆಲೆ ಕನಕ ಗುರುಪೀಠ ಸೇರಿದಂತೆ ಹಲವು ಮಠಗಳು ಸರ್ಕಾರದಿಂದ ಸಾಕಷ್ಟು ಅನುದಾನ ಪಡೆದಿವೆ. ಆದರೆ, ಯಾರೂ ಯಾವುದೇ ಕಮಿಷನ್ ಕೊಟ್ಟಿಲ್ಲ. ಇತ್ತೀಚೆಗೆ ಸ್ವಾಮೀಜಿಯೊಬ್ಬರು ಮಠಗಳಿಂದಲೂ ಕಮಿಷನ್ ಪಡೆಯಲಾಗುತ್ತಿದೆ ಎಂದು ಸರ್ಕಾರದ ಮೇಲೆ ಆರೋಪ ಮಾಡಿರುವುದು ಸತ್ಯಕ್ಕೆ ದೂರ’ ಎಂದು ಹಾವೇರಿಯ ಕಾಗಿನೆಲೆ ಮಹಾಸಂಸ್ಥಾನಮಠದ ಕನಕ ಗುರುಪೀಠದ ನಿರಂಜನಾನಂದಪುರಿ ಸ್ವಾಮೀಜಿ ಹೇಳಿಕೆ ನೀಡಿದ್ದಾರೆ.
ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದಲಿತ, ಹಿಂದುಳಿದ ಮಠಾಧೀಶರ ಒಕ್ಕೂಟಕ್ಕೆ 119 ಕೋಟಿ ಅನುದಾನ ನೀಡಿದ್ದಾರೆ. ಈ ಹಿಂದೆ ಬಿ.ಎಸ್.ಯಡಿಯೂರಪ್ಪ,ಸದಾನಂದಗೌಡ,ಎಚ್.ಡಿ.ಕುಮಾರಸ್ವಾಮಿ, ಹಾಗೂ ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾಗಿದ್ದಾಗ ಕೂಡ ಮಠಗಳಿಗೆ ಶೈಕ್ಷಣಿಕ, ಸಾಮಾಜಿಕ ಅಭಿವೃದ್ಧಿಗಾಗಿ ನೂರಾರು ಕೋಟಿ ರೂಪಾಯಿ ಅನುದಾನ ನೀಡಿದ್ದಾರೆ ಎಂದರು.
ಈ ಎಲ್ಲ ಅನುದಾನಗಳು ಸರ್ಕಾರದಿಂದ ಜಿಲ್ಲಾಧಿಕಾರಿಗಳ ಖಜಾನೆಗೆ ಬಂದು ಅಲ್ಲಿಂದ ನೇರವಾಗಿ ಮಠಗಳ ಖಾತೆಗೆ ಜಮೆಯಾಗಿ ಅಭಿವೃದ್ಧಿ ಕಾರ್ಯಗಳಿಗೆ ಬಳಕೆಯಾಗಿವೆ. ಇದರಲ್ಲಿ ಯಾರಿಗೂ ನಯಾ ಪೈಸೆ ಕಮಿಷನ್ ನೀಡಿಲ್ಲ’ ಎಂದು ಶಿರಹಟ್ಟಿ ಫಕೀರ ದಿಂಗಾಲೇಶ್ವರ ಶ್ರೀಗಳ ಹೆಸರು ಉಲ್ಲೇಖಿಸದೇ ತಿರುಗೇಟು ನೀಡಿದರು
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ https://chat.whatsapp.com/FZkISFWKknBDvdYkMVFArW
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಕೋಟಿ ಸಂಭಾವನೆ ಕೊಟ್ಟರೂ ತಂಬಾಕು ಜಾಹೀರಾತಿನಲ್ಲಿ ನಟಿಸಲ್ಲ ಎಂದ ಅಲ್ಲು ಅರ್ಜುನ್
ನಟ ಶಿವರಾಜ್ ಕುಮಾರ್ ಆರೋಗ್ಯದ ಬಗ್ಗೆ ಸುಳ್ಳು ಸುದ್ದಿ: ಅಷ್ಟಕ್ಕೂ ನಡೆದದ್ದೇನು?
ಯಡಿಯೂರಪ್ಪರಿಂದ ಬೆಳೆದ ಯತ್ನಾಳ್, ಅವರ ವಿರುದ್ಧವೇ ಕತ್ತಿಮಸೆಯುತ್ತಿದ್ದಾರೆ: ದಿಂಗಾಲೇಶ್ವರ ಶ್ರೀ ತಿರುಗೇಟು
ಬಸ್ಸಿನ ಕಿಟಕಿ ತೆರೆಯುವ ನೆಪದಲ್ಲಿ ಯುವತಿಗೆ ಲೈಂಗಿಕ ಕಿರುಕುಳ: ಚಾಲಕನ ಬಂಧನ
ವೀಕ್ಷಕರ ನಿರೀಕ್ಷೆ ಸುಳ್ಳಾಗಿಸಿದ ಕೆಜಿಎಫ್ ಚಾಪ್ಟರ್ 2: ನೆಗೆಟಿವ್ ವಿಮರ್ಶೆ