ಸರ್ಕಾರಕ್ಕೆ ಕೆಟ್ಟ ಹೆಸರು ತರಲು ರೈತರಿಗೆ ಕಾಂಗ್ರೆಸ್ ಪ್ರಚೋದನೆ | ಸಚಿವ ಶ್ರೀರಾಮುಲು ಆರೋಪ - Mahanayaka
6:04 AM Wednesday 5 - February 2025

ಸರ್ಕಾರಕ್ಕೆ ಕೆಟ್ಟ ಹೆಸರು ತರಲು ರೈತರಿಗೆ ಕಾಂಗ್ರೆಸ್ ಪ್ರಚೋದನೆ | ಸಚಿವ ಶ್ರೀರಾಮುಲು ಆರೋಪ

27/01/2021

ಚಿಕ್ಕೋಡಿ:  ಐದು ರಾಜ್ಯಗಳ ಚುನಾವಣೆ ಹಿನ್ನೆಲೆಯಲ್ಲಿ ಸರ್ಕಾರಕ್ಕೆ ಕೆಟ್ಟ ಹೆಸರು ತರಲು ಕಾಂಗ್ರೆಸ್ ರೈತರನ್ನು ಪ್ರಚೋದಿಸುತ್ತಿದೆ ಎಂದು ಸಚಿವ ಶ್ರೀರಾಮುಲು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ದೆಹಲಿಯಲ್ಲಿ ನಿನ್ನೆ ನಡೆದ ರೈತರ ಪ್ರತಿಭಟನೆಗೆ ಸಂಬಂಧಿಸಿದಂತೆ ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿನ ಹಂಚನಾಳದಲ್ಲಿ ಅವರು ಪ್ರತಿಕ್ರಿಯೆ ನೀಡಿದ್ದು, ಚುನಾವಣೆ ಗೆಲ್ಲುವು ಉದ್ದೇಶದಿಂದ ಕಾಂಗ್ರೆಸ್ ರೈತರನ್ನು ಪ್ರತಿಭಟನೆಗೆ ಪ್ರೇರೇಪಿಸಿದ್ದು, ಸರ್ಕಾರಕ್ಕೆ ಕೆಟ್ಟ ಹೆಸರು ತರಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು.

ಕಾಂಗ್ರೆಸ್ ದೇಶದಲ್ಲಿ ಧೂಳಿಪಟವಾಗುತ್ತಿದೆ. ಕಾಂಗ್ರೆಸ್ ನಾಯಕರಿಗೆ ಉದ್ಯೋಗವೇ ಇಲ್ಲವಾಗಿದೆ. ಈ ಹತಾಶೆಯಿಂದ ಅವರು ಈ ರೀತಿಯಾಗಿ ವರ್ತಿಸುತ್ತಿದ್ದಾರೆ ಎಂದು ಅವರು ವ್ಯಂಗ್ಯವಾಡಿದರು.

ಇತ್ತೀಚಿನ ಸುದ್ದಿ