ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿದ ನಟ ಧನಂಜಯ, ಶಾಸಕ ಶಿವಲಿಂಗೇಗೌಡ
15/05/2021
ಅರಸೀಕೆರೆ: ಶ್ರೀಜಯಚಾಮರಾಜೇಂದ್ರ ಸರ್ಕಾರಿ ಆಸ್ಪತ್ರೆಗೆ ಸ್ಯಾಂಡಲ್ ವುಡ್ ನ ಖ್ಯಾತ ಚಲನಚಿತ್ರ ನಟರಾದ ಧನಂಜಯ (ಡಾಲಿ ) ಸ್ಥಳೀಯ ಶಾಸಕರಾದ ಕೆ.ಎಂ. ಶಿವಲಿಂಗೇಗೌಡರ ಜೊತೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಈ ವೇಳೆ ಆಸ್ಪತ್ರೆಯ ಸ್ವಚ್ಚತೆ ಮತ್ತು ಕರೋನಾ ರೋಗಿಗಳಿಗೆ ಗುಣಮಟ್ಟದ ಚಿಕಿತ್ಸೆ ನೀಡುತ್ತಿರುವುದಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು
ಉನ್ನತ ಮಟ್ಟದಲ್ಲಿ ರಾಜ್ಯದ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಬಡಜನರಿಗೆ ಉತ್ತಮ ಮಟ್ಟದ ಎಲ್ಲಾ ಖಾಯಿಲೆಗೆ ಉಚಿತವಾಗಿ ಚಿಕಿತ್ಸೆ ಸಿಗುವಹಾಗೆ ಸರ್ಕಾರ ಮಾಡಬೇಕು ಎಂದು ಅವರು ಇದೇ ಸಂದರ್ಭದಲ್ಲಿ ಮನವಿ ಮಾಡಿಕೊಂಡರು.
ದೇಶದಲ್ಲಿ ಕೊರೋನ ರೋಗಕ್ಕೆ ತುತ್ತಾಗಿ ಜನರು ಸಾವನ್ನಪ್ಪುತ್ತಿರುವುದಕ್ಕೆ ಬೇಸರ ವ್ಯಕ್ತಪಡಿಸಿದ ಅವರು, ಕೊರೊನದಿಂದ ಮೃತಪಟ್ಟ ಕುಟುಂಬಗಳಿಗೆ ಸರ್ಕಾರ ಸೂಕ್ತ ಪರಿಹಾರ ನೀಡಬೇಕೆಂದು ಮನವಿ ಮಾಡಿದರು.