ವೈದ್ಯಕೀಯ ಕೋರ್ಸ್ | ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶೇ. 7.5 ಮೀಸಲಾತಿ - Mahanayaka
4:08 AM Wednesday 11 - December 2024

ವೈದ್ಯಕೀಯ ಕೋರ್ಸ್ | ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶೇ. 7.5 ಮೀಸಲಾತಿ

30/10/2020

ಚೆನ್ನೈ: ವೈದ್ಯಕೀಯ ಕೋರ್ಸ್‌ ಪ್ರವೇಶಕ್ಕೆ ನೀಟ್‌ ತೇರ್ಗಡೆಯಾಗಿರುವ, ಸರ್ಕಾರಿ ಶಾಲೆಗಳಲ್ಲಿ ಕಲಿತ ವಿದ್ಯಾರ್ಥಿಗಳಿಗೆ ಶೇ 7.5ರಷ್ಟು ಮೀಸಲಾತಿ ಕಲ್ಪಿಸುವ ಮಸೂದೆಗೆ ತಮಿಳುನಾಡಿನ ರಾಜ್ಯಪಾಲ ಬನ್ವಾರಿಲಾಲ್‌ ಪುರೋಹಿತ್‌ ಶುಕ್ರವಾರ ಅನುಮೋದನೆ ನೀಡಿದ್ದಾರೆ.




 

ಈ ಮಸೂದೆಗೆ ರಾಜ್ಯಪಾಲರು ಒಪ್ಪಿಗೆ ಸೂಚಿಸಿರುವ ಬಗ್ಗೆ ರಾಜಭವನವು ಶುಕ್ರವಾರ ಹೇಳಿದೆ.  2020-21 ಶೈಕ್ಷಣಿಕ ವರ್ಷದಿಂದಲೇ ಈ ಮೀಸಲಾತಿ ಜಾರಿಗೆ ತರಲು ನಿರ್ಧರಿಸಿದ್ದ ರಾಜ್ಯ ಸರ್ಕಾರವು ಈ ಕುರಿತ ಆದೇಶವನ್ನೂ ಹೊರಡಿಸಿದೆ.


 ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ ಈ ಮೀಸಲಾತಿ ಅನುಷ್ಠಾನಕ್ಕೆ ತರುವ ಪ್ರಯತ್ನಗಳು ಆರಂಭವಾಗಿವೆ ಎಂದು ಮುಖ್ಯಮಂತ್ರಿ ಕೆ.ಪಳನಿಸ್ವಾಮಿ ತಿಳಿಸಿದ್ದಾರೆ.


ಇತ್ತೀಚಿನ ಸುದ್ದಿ