ಸರ್ಕಾರಿ ಶಾಲೆಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ!
ಭೋಪಾಲ್: ಸರ್ಕಾರಿ ಶಾಲೆಗಳಿಗೆ ದಿಢೀರ್ ಭೇಟಿ ನೀಡುವ ಸಚಿವರುಗಳು ಅಧಿಕಾರಿ ವರ್ಗಗಳಿಗೆ ಹಿಗ್ಗಾಮುಗ್ಗಾ ಬೈದು ಸುದ್ದಿಯಾಗುವುದು ಸಾಮಾನ್ಯವಾಗಿದೆ. ಆದರೆ, ಇಲ್ಲೊಬ್ಬರು ಸಚಿವರು ಶಾಲೆಯ ಶೌಚಾಲಯವನ್ನು ತಾನೇ ಸ್ವಚ್ಛ ಮಾಡುವ ಮೂಲಕ ಸುದ್ದಿಯಾಗಿದ್ದಾರೆ.
ಮಧ್ಯಪ್ರದೇಶದ ಇಂಧನ ಖಾತೆ ಸಚಿವರಾದ ಪ್ರದ್ಯುಮ್ನ ಸಿಂಗ್ ಥೋಮರ್ ಅವರು, ಇಲ್ಲಿನ ಹಜಿರಾ ಗ್ವಾಲಿಯರ್ ನಲ್ಲಿರುವ ಸರ್ಕಾರಿ ಶಾಲೆಗೆ ಭೇಟಿ ನೀಡಿದಾಗ ಶಾಲೆಯ ಶೌಚಾಲಯವನ್ನು ಪರಿಶೀಲಿಸಿದ್ದು, ಈ ವೇಳೆ ಶೌಚಾಲಯ ಶುಚಿತ್ವವಿಲ್ಲದೇ ಅವ್ಯವಸ್ಥೆಯಿಂದ ಕೂಡಿತ್ತು.
ಈ ವೇಳೆ ಶಾಲಾ ಸಿಬ್ಬಂದಿಗೆ ಕ್ಲಾಸ್ ತೆಗೆದ ಸಚಿವರು ತಾವೇ ಶೌಚಾಲಯವನ್ನು ಸ್ವಚ್ಛಗೊಳಿಸುವ ಮೂಲಕ ಸಿಬ್ಬಂದಿಗೆ ಬಿಸಿಮುಟ್ಟಿಸಿದ್ದು, ನಾವು ಬಳಸುವ ಶೌಚಾಲಯವನ್ನು ಶುಚಿಯಾಗಿಟ್ಟುಕೊಳ್ಳಬೇಕು. ಅದಕ್ಕೆ ಇನ್ನೊಬ್ಬರನ್ನು ಕಾಯಬಾರದು ಎಂದು ಸಿಬ್ಬಂದಿಗೆ ಉಪದೇಶ ನೀಡಿದರು.
ಶಾಲೆಗೆ ಸಚಿವರು ಬಂದಾಗಿ ಮೊದಲೇ ಸಿದ್ಧರಾಗಿದ್ದ ವಿದ್ಯಾರ್ಥಿಗಳು ಶಾಲೆಯ ಶೌಚಾಲಯ ಬಳಸಲು ಯೋಗ್ಯವಾಗಿಲ್ಲ ಎಂದು ಹೇಳಿದ್ದಾರೆ. ಹೀಗಾಗಿ ಸಚಿವರು ಶೌಚಾಲಯವನ್ನು ಪರಿಶೀಲನೆ ನಡೆಸಿದರು. ಈ ವೇಳೆ ಶೌಚಾಲಯವನ್ನು ಕಂಡು ಅವರು ಶಾಲಾ ಸಿಬ್ಬಂದಿಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಲ್ಲದೇ, ಶಾಲಾ ಸಿಬ್ಬಂದಿಗೆ ಸರಿಯಾಗಿಯೇ ಕ್ಲಾಸ್ ತೆಗೆದುಕೊಂಡಿದ್ದಾರೆ. ಬಳಿಕ ತಾವೇ ಶೌಚಾಲಯವನ್ನು ಸ್ವಚ್ಛಗೊಳಿಸುವ ಮೂಲಕ ಶಾಲಾ ಸಿಬ್ಬಂದಿಗೆ ಮುಜುಗರ ಸೃಷ್ಟಿಸಿದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಅಪಾರ್ಟ್ ಮೆಂಟ್ ನ 5ನೇ ಮಹಡಿಯಿಂದ ಬಿದ್ದು 2 ವರ್ಷದ ಮಗು ಸಾವು
ಗಂಗಾ ಎಕ್ಸ್ಪ್ರೆಸ್ ವೇ ನಿರ್ಮಾಣಕ್ಕೆ ಪ್ರಧಾನಿ ನರೇಂದ್ರ ಮೋದಿಯಿಂದ ಶಂಕುಸ್ಥಾಪನೆ
ಭಾರತದ ಕುಸ್ತಿ ಸಂಸ್ಥೆ ಅಧ್ಯಕ್ಷನಿಂದ ಕುಸ್ತಿಪಟುವಿಗೆ ವೇದಿಕೆಯಲ್ಲೇ ಕಪಾಳಮೋಕ್ಷ
ಸಂಗೊಳ್ಳಿ ರಾಯಣ್ಣ ಪ್ರತಿಮೆ ಭಗ್ನ ಹಿನ್ನೆಲೆ: ಬೆಳಗಾವಿಯಲ್ಲಿ 144 ಸೆಕ್ಷನ್ ಜಾರಿ