ಸತೀಶ್ ಜಾರಕಿಹೊಳಿ ಹೆಸರಿನಲ್ಲಿ ವಿವಾದಾತ್ಮಕ ಪೋಸ್ಟ್: ದೂರು ದಾಖಲು
ಬೆಳಗಾವಿ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೆಸರು ಬಳಸಿ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟರ್ ವೊಂದನ್ನು ವೈರಲ್ ಮಾಡಿರುವ ವಿಚಾರವಾಗಿ ವಾಲ್ಮೀಕಿ ಯುವ ವೇದಿಕೆ ರಾಜ್ಯಾಧ್ಯಕ್ಷ ವಿಜಯ ಬಸಪ್ಪ ತಳವಾರ ಬೆಳಗಾವಿ ಸಿಇಎನ್ ಅಪರಾಧ ಪೊಲೀಸ್ ಠಾಣೆಗೆ ದೂರು ದಾಖಲಿಸಿದ್ದಾರೆ.
“ರಾಮ ಮಂದಿರ ಹೋರಾಟದಲ್ಲಿ ಸತ್ತ ಹೆಚ್ಚಿನವರು ಓಬಿಸಿಗಳು, ಒಬ್ಬನೇ ಒಬ್ಬ ಬ್ರಾಹ್ಮಣ ಸಾಯಲಿಲ್ಲ. ಆದರೆ, ಈಗ ಮಂದಿರದ ಟ್ರಸ್ಟ್ ನ ಪದಾಧಿಕಾರಿಗಳೆಲ್ಲ ಬ್ರಾಹ್ಮಣರು, ಒಬ್ಬನು ಓಬಿಸಿ ಇಲ್ಲ” ಎನ್ನುವ ಬರಹವನ್ನೊಳಗೊಂಡ ಪೋಸ್ಟ್ ನಲ್ಲಿ ಸತೀಶ್ ಜಾರಕಿಹೊಳಿ ಚಿತ್ರ ಬಳಸಿ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳಲಾಗಿದ್ದು, ಈ ಹಿನ್ನೆಲೆಯಲ್ಲಿ ಕಿಡಿಗೇಡಿಗಳ ವಿರುದ್ಧ ದೂರು ದಾಖಲಿಸಲಾಗಿದೆ.
ಸೇವಕನಾಗಿರುವ ನಾನು ಕಳೆದ 10 ವರ್ಷಗಳಿಂದ ಸತೀಶ್ ಜಾರಕಿಹೊಳಿ ಅವರ ಜೊತೆಗೆ ಒಡನಾಟ ಹೊಂದಿದ್ದೇನೆ. ಸತೀಶ್ ಜಾರಕಿಹೊಳಿ ಅವರ ಹೆಸರನ್ನು ಕೆಡಿಸುವ ದುರುದ್ದೇಶದಿಂದ ವಾಟ್ಸಪ್, ಫೇಸ್’ಬುಕ್’ಗಳಲ್ಲಿ ವಿವಾದಾತ್ಮಕ ಪೋಸ್ಟ್ ಹರಿಯಬಿಡುತ್ತಿದ್ದಾರೆ. ಕಿಡಿಗೇಡಿಗಳ ವಿರುದ್ಧ ತಕ್ಷಣವೇ ಕಾನೂನು ಕ್ರಮಕೈಗೊಳ್ಳುವಂತೆ ದೂರಿನಲ್ಲಿ ಒತ್ತಾಯಿಸಲಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka