ಸತೀಶ್ ಜಾರಕಿಹೊಳಿ ರಾಜ್ಯದ ಜನರ ಕ್ಷಮಾಪಣೆ ಕೇಳಬೇಕು: ಯಡಿಯೂರಪ್ಪ
ಉಡುಪಿ: ಸತೀಶ್ ಜಾರಕಿಹೋಳಿ ಹಿಂದುಗಳಿಗೆ ಅಪಮಾನ ಮಾಡುವ ರೀತಿಯಲ್ಲಿ ಮಾತನಾಡಿದ್ದು ಖಂಡನೀಯ. ಕಾಂಗ್ರೆಸ್ ಕೇವಲ ಖಂಡನೆ ಮಾಡಿದರೆ ಸಾಕಾಗೋದಿಲ್ಲ. ಸತೀಶ್ ಜಾರಕಿಹೊಳಿ ರಾಜ್ಯದ ಜನರ ಕ್ಷಮಾಪಣೆ ಕೇಳಬೇಕು ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ.
ಉಡುಪಿಯಲ್ಲಿ ಎಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಹಗುರವಾಗಿ ಮಾತನಾಡಿದರೆ ದೊಡ್ಡವನಾಗುತ್ತೇನೆ ಎಂದು ಅಂದುಕೊಂಡಿದ್ದರೆ ಅದೊಂದು ಭ್ರಮೆ. ಸತೀಶ್ ಜಾರಕಿಹೊಳಿ ಗೌರವದಿಂದ ನಡೆದುಕೊಳ್ಳಬೇಕು. ಹಿಂದುಗಳಿಗೆ ಅಪಮಾನ ಆಗುವ ಹಾಗೆ ವರ್ತನೆ ಮಾಡಬಾರದು ಎಂದರು
ಚುನಾವಣೆ ಗೆದ್ದು ಖರ್ಗೆಗೆ ಗಿಫ್ಟ್ ಕೊಡುತ್ತೇವೆ ಎಂದಿರುವ ಸಿದ್ದರಾಮಯ್ಯ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಅವರು, ಸಿದ್ದರಾಮಯ್ಯ ಯಾವುದೊ ಭ್ರಮೆಯಲ್ಲಿದ್ದಾರೆ. ರಾಜ್ಯದ ಜನ ಅವರ ಜೇಬಿನಲ್ಲಿದ್ದಾರೆ ಎಂಬ ಭಾವನೆ ಮನಸ್ಸಲ್ಲಿದ್ದಂತಿದೆ. ಕರ್ನಾಟಕದಲ್ಲಿ ಕಾಂಗ್ರೆಸ್ ಗೆಲ್ಲುವುದು ಅಸಾಧ್ಯ ಎಂದರು
ನಾನು ಮತ್ತು ಬೊಮ್ಮಾಯಿ ರಾಜ್ಯದಲ್ಲಿ ಪ್ರವಾಸ ಹೊರಟಾಗ ಅಭೂತಪೂರ್ವ ಜನಬೆಂಬಲ ಸಿಕ್ಕಿದೆ.ಬಮೋದಿ ಅವರ ಬೆಂಬಲದೊಂದಿಗೆ ಬಿಜೆಪಿಗೆ ಕರ್ನಾಟಕದಲ್ಲಿ ಸ್ಪಷ್ಟ ಬಹುಮತ ಸಿಗಲಿದೆ. ಕರ್ನಾಟಕದಲ್ಲಿ ಬಿಜೆಪಿಯ ಗೆಲುವನ್ನು ತಡೆಯಲು ಸಿದ್ದರಾಮಯ್ಯನಿಂದ ಸಾಧ್ಯವಿಲ್ಲ ಎಂದು ಅವರು ಹೇಳಿದರು
ಕರ್ನಾಟಕದಲ್ಲಿ ಅಧಿಕಾರಕ್ಕೆ ಬರ್ತೀವಿ ಅಂತೀರಿ ಆದರೆ ನೀವು ಬಾದಾಮಿಯನ್ನು ಯಾಕೆ ಬಿಟ್ಟು ಬರುತ್ತಿದ್ದೀರಿ. ಬಾದಾಮಿಯಲ್ಲಿ ಸಿದ್ದರಾಮಯ್ಯಗೆ ಸೋಲು ನಿಶ್ಚಿತ. ಎಂಎಲ್ಎ ಆಗಿ ಕೆಲವೇ ಮತಗಳಿಂದ ಅಂದು ಗೆದ್ದಿದ್ದೀರಿ. ಆನಂತರ ಕ್ಷೇತ್ರವನ್ನು ಮರೆತುಬಿಟ್ಟಿದ್ದೀರಿ ಅಭಿವೃದ್ಧಿ ಮಾಡಿಲ್ಲ. ಬಾದಾಮಿಯನ್ನು ತೊರೆಯುತ್ತೀರಿ ಎಂಬುದು ನಿಮಗೆ ಎಷ್ಟರ ಮಟ್ಟಿಗೆ ಶೋಭೆ ತರುತ್ತದೆ. ರಾಜ್ಯದ ಜನ ಈಗಾಗಲೇ ತೀರ್ಮಾನವನ್ನು ಮಾಡಿದ್ದಾರೆ ನಿಮಗೆ ಉತ್ತರ ಕೊಡುತ್ತಾರೆ. ಬೇರೆಬೇರೆ ಪಕ್ಷದಿಂದ ಅನೇಕರು ಈಗಾಗಲೇ ಬಿಜೆಪಿ ಬಂದಿದ್ದಾರೆ ಇನ್ನೂ ಬರುವವರಿದ್ದಾರೆ ಎಂದು ಅವರು ತಿಳಿಸಿದರು
ಮುರುಘಾ ಶರಣರಿಂದ ಲೈಂಗಿಕ ಕಿರುಕುಳ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಕ್ಷಮಿಸಲಾರದ ಅಕ್ಷಮ್ಯ ಅಪರಾಧ ಮಾಡಿದ್ದಾರೆ. ಇಷ್ಟು ಕೆಳಮಟ್ಟಕ್ಕೆ ಇಳಿಯುತ್ತಾರೆ ಅಂತ ಯಾರೂ ನಿರೀಕ್ಷೆ ಮಾಡಿರಲಿಲ್ಲ. ಎಲ್ಲರೂ ಖಂಡಿಸಬೇಕು.ಅವರಿಗೆ ತಕ್ಕ ಶಿಕ್ಷೆಯಾಗಬೇಕು ಎಂದು ತಿಳಿಸಿದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/GoQnwP3qNkmAbAPcjb8n8F
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka