ಶಾಸಕ ಸತೀಶ್ ರೆಡ್ಡಿ ಕಾರಿಗೆ ಬೆಂಕಿ ಹಚ್ಚಿದವರು ಯಾರು? | ತಡ ರಾತ್ರಿ ನಡೆದ್ದದ್ದೇನು?
ಬೆಂಗಳೂರು: ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕ ಸತೀಶ್ ರೆಡ್ಡಿಗೆ ಸಂಬಂಧಿಸಿದ 2 ಕಾರುಗಳಿಗೆ ಬೆಂಕಿ ಹಚ್ಚಿದ ಘಟನೆ ತಡರಾತ್ರಿ ನಡೆದಿದ್ದು, ಬೆಂಕಿ ಹಚ್ಚಿದವರು ಯಾರು ಎನ್ನುವುದು ಇನ್ನೂ ಬೆಳಕಿಗೆ ಬಂದಿಲ್ಲ. ತಡ ರಾತ್ರಿ ಈ ಘಟನೆ ನಡೆದಿದೆ ಎನ್ನಲಾಗಿದೆ.
ಸದ್ಯದ ಮಾಹಿತಿಯ ಪ್ರಕಾರ ರಾತ್ರಿ 1:25ರ ಸುಮಾರಿಗೆ ಈ ಘಟನೆ ನಡೆದಿದೆ. ಮನೆಯಲ್ಲಿದ್ದ ಸಿಸಿ ಕ್ಯಾಮರವನ್ನು ಗಮನಿಸಿ ಗೇಟ್ ನಿಂದ ಹಾರಿ ಕಾರ್ ಗಳಿಗೆ ಬೆಂಕಿ ಹಚ್ಚಿ ಕೇವಲ 3 ನಿಮಿಷಗಳಲ್ಲಿಯೇ ಪರಾರಿಯಾಗಿದ್ದಾರೆ ಎಂದು ಹೇಳಲಾಗಿದೆ.
ಘಟನಾ ಸ್ಥಳಕ್ಕೆ ಡಿಸಿಪಿ ಶ್ರೀನಾಥ್ ಮತ್ತು ಪೊಲೀಸ್ ಜಂಟಿ ಆಯುಕ್ತ ಮುರುಗನ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇನ್ನೂ ಆಗ್ನೇಯ ವಿಭಾಗದ ಡಿಸಿಪಿ ಶ್ರೀನಾಥ್ ಜೋಶಿ ಈ ಬಗ್ಗೆ ಪ್ರತಿಕ್ರಿಯಿಸಿ, ರಾತ್ರಿ 1 ಗಂಟೆಯ ಸುಮಾರಿಗೆ ಈ ಘಟನೆ ನಡೆದಿದೆ. ಈ ಸಂಬಂಧ ತನಿಖೆ ನಡೆಯುತ್ತಿದೆ ಎಂದು ಹೇಳಿದ್ದಾರೆ.
ಇನ್ನೂ ಘಟನೆ ಸಂಬಂಧ ಪ್ರತಿಕ್ರಿಯಿಸಿರುವ ಸತೀಶ್ ರೆಡ್ಡಿ, ಯಾರ ಮನೆಯಲ್ಲಿ ಏನು ಬೇಕಾದ್ರೂ ಮಾಡಬಹುದು ಎನ್ನುವ ದುರಾಲೋಚನೆಯ ಸಂದೇಶವನ್ನು ತೋರಿಸಲು ನನ್ನ ಕಾರಿಗೆ ಬೆಂಕಿ ಹಚ್ಚಿದ್ದಾರೆ. ಬೆಂಕಿ ಹಚ್ಚಿದ ಬಳಿಕ ಹಿಂದಿನ ಗೇಟ್ ನಿಂದ ಇಬ್ಬರು ಕೂಡ ಪರಾರಿಯಾಗಿರುವ ದೃಶ್ಯ ಸೆರೆಯಾಗಿದೆ. ಆ ಇಬ್ಬರ ಮುಖ ಸಿಸಿ ಕ್ಯಾಮರದಲ್ಲಿ ಸರಿಯಾಗಿ ಕಾಣಿಸುತ್ತಿಲ್ಲ. ಬೈಕ್ ಗಳಲ್ಲಿ ಇಬ್ಬರು ಬಂದಿದ್ದರು ಅನ್ನೋದು ಗೊತ್ತಾಗಿದೆ ಎಂದು ಹೇಳಿದ್ದಾರೆ.
ನನಗೆ ಇಲ್ಲಿ ಯಾರ ಜೊತೆಗೂ ರಾಜಕೀಯ ವೈಷಮ್ಯ ಇಲ್ಲ. ರಾಜಕೀಯ ದ್ವೇಷದಿಂದ ಈ ಘಟನೆ ನಡೆದಿದೆ ಎಂದು ನನಗೆ ಅನ್ನಿಸುತ್ತಿಲ್ಲ ಎಂದು ಅವರು ಇದೇ ಸಂದರ್ಭದಲ್ಲಿ ಸ್ಪಷ್ಟಪಡಿಸಿದರು. ರಾಜಕೀಯದ ವಿಚಾರ ಇಲ್ಲ ಎಂದು ಸ್ಪಷ್ಟವಾಗಿ ಹೇಳುತ್ತಿರುವ ಸತೀಶ್ ರೆಡ್ಡಿ ಅವರು ಏನನ್ನೋ ಮುಚ್ಚಿಡುತ್ತಿದ್ದಾರೋ ತಿಳಿದಿಲ್ಲ. ಘಟನೆಯ ಹಿಂದಿನ ಕಾರಣದ ಬಗ್ಗೆ ಅವರಿಗೆ ಐಡಿಯಾ ಇದೆಯೇ? ಎನ್ನುವುದು ಕೂಡ ತಿಳಿದಿಲ್ಲ. ಪೊಲೀಸರ ತನಿಖೆಯಿಂದ ಇವೆಲ್ಲ ಬಯಲಾಗಬೇಕಿದೆ.
ಇನ್ನಷ್ಟು ಸುದ್ದಿಗಳು…
ನೀರಜ್ ಚೋಪ್ರಾರನ್ನು ಅನುಕರಿಸಿ ರೋಡಲ್ಲಿ ನಿಂತು ಈಟಿ ಎಸೆದ ರಾಖಿ ಸಾವಂತ್ | ಮುಂದೇನಾಯ್ತು?
ಉಗ್ರರ ಜೊತೆಗೆ ನಂಟು ವಿಚಾರ: ವಿ ಎಚ್ ಪಿ, ಬಜರಂಗದಳದಿಂದ ಬಿ.ಎಂ.ಬಾಷಾ ಮನೆಗೆ ಮುತ್ತಿಗೆ!
ಮಾತುಬಾರದ, ಕಿವಿ ಕೇಳದ ಮಹಿಳೆಯ ಮೇಲೆ ಆಸ್ಪತ್ರೆಯಲ್ಲೇ ಅತ್ಯಾಚಾರ!
ದೇವಸ್ಥಾನದಿಂದ ಬರುತ್ತಿದ್ದ ಮಹಿಳೆಯನ್ನು ಹೊತ್ತೊಯ್ದು ಸಾಮೂಹಿಕ ಅತ್ಯಾಚಾರ!
ಮೊಘಲರ ಆಳ್ವಿಕೆಯ 600 ವರ್ಷಗಳ ಕಾಲ ಪ್ರಮುಖ ಹುದ್ದೆ ಅಲಂಕರಿಸಿದ್ದವರು ಬ್ರಾಹ್ಮಣರು | ಸಿದ್ದರಾಮಯ್ಯ