ಪಠ್ಯಪುಸ್ತಕದ ವಿಚಾರದಲ್ಲಿ ಸತ್ಯದ ವಿಷಯ ಮರೆಮಾಚುವ ಕೆಲಸ ಆಗ್ತಿದೆ: ಸದಾನಂದ ಗೌಡ
ಬೆಂಗಳೂರು: ನಾಡಗೀತೆಗೆ ಅಪಮಾನ ಮಾಡಿದವರ ಮೇಲೆ ಕ್ರಮಕ್ಕೆ ಒತ್ತಾಯಿಸಿದ ಆದಿಚುಂಚನಗಿರಿ ಶ್ರೀಗಳ ಕುರಿತು ಮಲ್ಲೇಶ್ವರದ ಬಿಜೆಪಿ ಕಚೇರಿಯಲ್ಲಿ ಪ್ರತಿಕ್ರಿಯಿಸಿದ ಸಂಸದ ಸದಾನಂದ ಗೌಡ, ಪಠ್ಯಪುಸ್ತಕ ವಿಚಾರದಲ್ಲಿ ಸತ್ಯದ ವಿಷಯ ಮರೆಮಾಚುವ ಕೆಲಸ ನಡೆಯುತ್ತಿದೆ ಎಂದಿದ್ದಾರೆ.
ಸಚಿವರು ಸಭೆಯಲ್ಲಿ ಮಾತನಾಡಿ, ಬುದ್ದಿ ಜೀವಿಗಳು ಗೊಂದಲ ಸೃಷ್ಟಿ ಮಾಡುತ್ತಿದ್ದಾರೆ. ಕುವೆಂಪುರವರಿಗೆ ಯಾವುದೇ ಅಪಮಾನ ಮಾಡಿಲ್ಲ, ಸುಮ್ಮನೆ ಕುವೆಂಪು ಅವರಿಗೆ ಅಪಮಾನ ಮಾಡಲಾಗುತ್ತಿದೆ ಅಂತಾ ಮಾತನಾಡುತ್ತಿದ್ದಾರೆ. ಜನರು ಇದನ್ನು ಅರ್ಥ ಮಾಡಿಕೊಳ್ಳುತ್ತಾರೆ ಎಂದಿದ್ದಾರೆ.
ರಾಷ್ಟ್ರ, ಸಂಸ್ಕೃತಿ, ಸಂಸ್ಕಾರಕ್ಕೆ ಆದ್ಯತೆ ಕೊಡುವ ಕೆಲಸ ಆಗಬೇಕು. ಬರಗೂರು ರಾಮಚಂದ್ರಪ್ಪ ಸಮಿತಿ ಸೇರಿಸಿದ್ದಕ್ಕಿಂತ ಹೆಚ್ಚು ಪಠ್ಯ ಈಗ ಸೇರ್ಪಡೆ ಮಾಡಲಾಗಿದೆ. ಮೆಕಾಲೆ ಸಂಸ್ಕೃತಿ ನಮ್ಮಿಂದ ದೂರ ಆಗಬೇಕು.ಬರಗೂರು ಸಮಿತಿ ಬ್ರಿಟಿಷರ ವಿರುದ್ಧದ ಹೋರಾಟಗಾರರ ಬಗ್ಗೆ ಉಲ್ಲೇಖ ಮಾಡಿದ್ದಾರೆ. ಆದರೆ, ಭಾರತೀಯರು ಯಾರನ್ನೂ ಪಠ್ಯದಲ್ಲಿ ಹಾಕಿರಲಿಲ್ಲ. ಇದನ್ನ ಸರಿ ಮಾಡುವ ಕೆಲಸ ನಾವು ಮಾಡುತ್ತಿದ್ದೇವೆ. ಯಾರು ಏನೇ ಹೇಳಿದರೂ ನಾವು ಮುಂದೆ ಹೋಗುತ್ತೇವೆ ಎಂದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಮೇ 31, ಜೂನ್ 1ರಂದು ಮಂಗಳೂರಿನಲ್ಲಿ ರಾಜ್ಯಮಟ್ಟದ ಮುಸ್ಲಿಂ ಸಮಾವೇಶ
ದಲಿತ ಮಹಿಳೆಯರು ಪ್ರವೇಶಿಸಿದ ದೇವಸ್ಥಾನಕ್ಕೆ ಬೀಗ: ನಾಪತ್ತೆಯಾದ ಧರ್ಮ ರಕ್ಷಕರು!