ಸತೀಶ್ ಜಾರಕಿಹೊಳಿ ಸಿಎಂ ಆಗಲು ಕುಮಾರಸ್ವಾಮಿ ಜೊತೆ ಭೇಟಿ: ಜಿ.ಟಿ.ದೇವೇಗೌಡ ಹೇಳಿಕೆ

ಮೈಸೂರು: ಸಿಎಂ ಆಗಲು ಸಚಿವ ಸತೀಶ್ ಜಾರಕಿಹೊಳಿ ಹೆಚ್.ಡಿ.ಕುಮಾರಸ್ವಾಮಿಯವರನ್ನು ಭೇಟಿ ಮಾಡಿದ್ದಾರೆ ಎಂದು ಶಾಸಕ ಜಿ.ಟಿ.ದೇವೇಗೌಡ ಹೇಳಿಕೆ ನೀಡಿದ್ದಾರೆ.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂದೆ ಸಿಎಂ ಆಗುವ ಅವಕಾಶ ದೊರಕಿದರೆ, ಜೆಡಿಎಸ್ ನ 18 ಶಾಸಕರ ಬೆಂಬಲವನ್ನು ಸತೀಶ್ ಜಾರಕಿಹೊಳಿ ಕೇಳಿರಬಹುದು ಎಂದು ಅವರು ಹೇಳಿದ್ದಾರೆ.
ಬೇರೆ ಯಾವುದೇ ಕಾರಣಕ್ಕೂ ಸದ್ಯದ ಪರಿಸ್ಥಿತಿಯಲ್ಲಿ ಕುಮಾರಸ್ವಾಮಿ ಮತ್ತು ಸತೀಶ್ ಜಾರಕಿಹೊಳಿ ಭೇಟಿ ಸಾಧ್ಯವಿಲ್ಲ ಎಂದು ಜಿಟಿಡಿ ಹೇಳಿದ್ದಾರೆ.
ಜಾರಕಿಹೊಳಿಯವರು ಮಾಜಿ ಪ್ರಧಾನಿ, ಕೇಂದ್ರ ಸಚಿವರನ್ನು ಭೇಟಿ ಮಾಡಿದ್ದಾರೆ ಎಂದರೆ ಅದಕ್ಕೆ ಇದೇ ಕಾರಣ. ಒಂದು ವೇಳೆ ಜೆಡಿಎಸ್ ಅವರಿಗೆ ಬೆಂಬಲ ನೀಡಿದರೂ ನಾನು ತಟಸ್ಥನಾಗಿರುತ್ತೇನೆ. ಈ ವಿಚಾರದಲ್ಲಿ ಮಾತ್ರ ನಾನು ತಟಸ್ಥ ಅಲ್ಲ ಎಂದು ಅವರು ಹೇಳಿದರು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/HEkqDgrW2BlJLad5kZ1DX7