ಉಡುಪಿಯಲ್ಲಿ ಸಾವರ್ಕರ್ ಚಿತ್ರದ ಫ್ಲೆಕ್ಸ್ ತೆರವಿಗೆ ಒತ್ತಾಯಿಸಿ ಕಾಂಗ್ರೆಸ್ ಪ್ರತಿಭಟನೆ!
ಉಡುಪಿ: ನಗರದ ಬ್ರಹ್ಮಗಿರಿ ಸರ್ಕಲ್‌ನಲ್ಲಿ ಸ್ವಾತಂತ್ರ್ಯೋತ್ಸವ ದಿನಾಚರಣೆಗೆ ಶುಭ ಕೋರಲು ಹಾಕಲಾದ ಸಾವರ್ಕರ್ ಭಾವಚಿತ್ರ ಇರುವ ಪ್ಲೆಕ್ಸ್‌ನ್ನು ಕೂಡಲೇ ತೆರವುಗೊಳಿಸುವಂತೆ ಮಂಗಳವಾರ ಸ್ಥಳದಲ್ಲಿ ಜಮಾಯಿಸಿದ ಕಾಂಗ್ರೆಸ್ ಕಾರ್ಯಕರ್ತರು ಪೊಲೀಸರನ್ನು ಒತ್ತಾಯಿಸಿದರು.
ಕಾಂಗ್ರೆಸ್ ಮುಖಂಡರಾದ ಪ್ರಖ್ಯಾತ್ ಶೆಟ್ಟಿ, ಯತೀಶ್ ಕರ್ಕೇರ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಬ್ರಹ್ಮಗಿರಿ ಸರ್ಕಲ್‌ಗೆ ಆಗಮಿಸಿ, ವಿವಾದಿತ ಫ್ಲೆಕ್ಸ್‌ನ್ನು ಕೂಡಲೇ ತೆರವುಗೊಳಿಸಬೇಕು. ಇಲ್ಲದಿದ್ದರೆ ನಾಳೆ ಸರ್ಕಲ್‌ನಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ಪ್ರಖ್ಯಾತ್ ಶೆಟ್ಟಿ, ಯತೀಶ್ ಕರ್ಕೆರ, ಹಮದ್, ಶರತ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.
ಬಿಗಿ ಬಂದೋಬಸ್ತ್:
ವಿವಾದಿತ ಫ್ಲೆಕ್ಸ್ ಹಿನ್ನೆಲೆಯಲ್ಲಿ ಬ್ರಹ್ಮಗಿರಿ ಸರ್ಕಲ್‌ನಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಇಂದು ಕೂಡ ಮುಂದುವರೆಸಲಾಗಿದೆ.
ಉಡುಪಿ ನಗರ ಠಾಣೆಯ ಪೊಲೀಸ್ ನಿರೀಕ್ಷಕ ಪ್ರಮೋದ್ ನೇತೃತ್ವದಲ್ಲಿ ಭದ್ರತೆ ಒದಗಿಸಲಾಗಿದೆ. ಸ್ಥಳಕ್ಕೆ ಆಗಮಿಸಿದ ಉಡುಪಿ ಡಿವೈಎಸ್ಪಿ ಸುಧಾಕರ್ ನಾಯ್ಕ್ ಭದ್ರತೆ ಪರಿಶೀಲನೆ ನಡೆಸಿದರು. ಒಂದು ಜಿಲ್ಲಾ ಸಶಸ್ತ್ರ ಮೀಸಲು ಪಡೆ ಹಾಗೂ ನಗರ ಠಾಣೆಯ ಪೊಲೀಸರನ್ನು ನಿಯೋಜಿಸಲಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IaxQSuNxGHREVEoloSpDOO
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka