ಸವರ್ಣೀಯರಿಂದ ಶೋಷಿತರಿಗೆ ಇನ್ನೂ ಸ್ವಾತಂತ್ರ್ಯ ದೊರೆತಿಲ್ಲ | ಅಂಬೇಡ್ಕರ್ ಸೇನೆ
ಕೆ.ಆರ್.ಪುರಂ: ಬ್ರಿಟಿಷರಿಂದ ಭಾರತೀಯರಿಗೆ ಸ್ವಾತಂತ್ರ್ಯ ದೊರೆತು 75 ವರ್ಷಗಳೇ ಕಳೆದರೂ ಭಾರತೀಯ ಶೋಷಿತ ಸಮುದಾಯಗಳಿಗೆ ಸವರ್ಣೀಯರಿಂದ ಸ್ವಾತಂತ್ರ್ಯ ದೊರೆತಿಲ್ಲ ಎಂದು ಮೂಲನಿವಾಸಿ ಅಂಬೇಡ್ಕರ್ ಸೇನೆಯ ರಾಜ್ಯ ಸಂಚಾಲಕ ದೊಡ್ಡಗುಬ್ಬಿ ಸತೀಶ್ ಹೇಳಿದರು.
ಕೆ.ಆರ್.ಪುರದಲ್ಲಿ ಮೂಲನಿವಾಸಿ ಅಂಬೇಡ್ಕರ್ ಸೇನೆ ವತಿಯಿಂದ ಹಮ್ಮಿಕೊಂಡಿದ್ದ ರಾಜ್ಯ ಸಮಿತಿ ರಚನಾ ಸಭೆಯಲ್ಲಿ ಮಾತನಾಡಿದ ಅವರು, ಇಡೀ ದೇಶಾದ್ಯಂತ ದಲಿತ, ಹಿಂದುಳಿದ ವರ್ಗಗಳ ಮತ್ತು ಧಾರ್ಮಿಕ ಅಲ್ಪಸಂಖ್ಯಾತರ ಮೇಲೆ ಇಂದಿಗೂ ದಬ್ಬಾಳಿಕೆ ಮತ್ತು ದೌರ್ಜನ್ಯಗಳು ನಡೆಯುತ್ತಲೇ ಇರುವುದು ಖಂಡನೀಯ. ಈ ಬಗ್ಗೆ ಆಳುವ ಸರ್ಕಾರಗಳಿಂದ ಯಾವುದೇ ಶಾಶ್ವತ ಪರಿಹಾರ ಕಂಡುಕೊಳ್ಳಲು ಸಾಧ್ಯವಾಗಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
ರಾಜ್ಯ ಸಂಘಟನಾ ಸಂಚಾಲಕ ರಾಹುಲ್ ಹುಲಿಮನಿ ಮಾತನಾಡಿ, ಸ್ವಾತಂತ್ರ್ಯ, ಸಮಾನತೆ ಬಯಸುವ ಯಾರೇ ಆಗಲಿ ಬಾಬಾಸಾಹೇಬ್ ಅಂಬೇಡ್ಕರರು ತೋರಿದ ಮಾರ್ಗಗಳನ್ನು ಅನುಸರಿಸಿದರೆ ಮಾತ್ರ ದೇಶದಲ್ಲಿರುವ ಅನಿಷ್ಠ ಪದ್ಧತಿಗಳನ್ನು ಬೇರು ಸಮೇತ ಕಿತ್ತುಗೆದು ನಿಜವಾದ ಸ್ವಾತಂತ್ರ್ಯ ಪಡೆದುಕೊಳ್ಳಲು ಸಾಧ್ಯ ಎಂದು ಅಭಿಪ್ರಾಯಪಟ್ಟರು.
ರಾಜ್ಯ ಪ್ರಧಾನ ಸಂಚಾಲಕ ಧನರಾಜ್ ನಾಗವಂಶಿ ಮಾತನಾಡಿ, ದೇಶದ ಶೇ.85ರಷ್ಟು ಜನಸಂಖ್ಯೆ ಹೊಂದಿರುವ ಮೂಲನಿವಾಸಿ ಸಮುದಾಯಗಳು ಎಲ್ಲಿಯವರೆಗೂ ಸಾಮಾಜಿಕವಾಗಿ ಮತ್ತು ರಾಜಕೀಯವಾಗಿ ಒಂದಾಗುವುದಿಲ್ಲವೋ ಅಲ್ಲಿಯವರೆಗೂ ಆಳುವ ವರ್ಗಗಳು ಶೋಷಿತ ಸಮುದಾಯಗಳ ಮೇಲೆ ದಬ್ಬಾಳಿಕೆಗಳು ನಡೆಸುತ್ತಲೇ ಇರುತ್ತವೆ ಎಂದು ಹೇಳಿದರು.
ಇನ್ನಷ್ಟು ಸುದ್ದಿಗಳು…
ಭಾರತಕ್ಕೆ ಸ್ವಾತಂತ್ರ್ಯೋತ್ಸವದ ಶುಭಾಶಯ ಕೋರಿದ WWE ಸೂಪರ್ ಸ್ಟಾರ್ ಗಳು
ಮೊಟ್ಟೆ ವಿಚಾರ: ಧ್ವಜಾರೋಹಣಕ್ಕೆ ಬಂದ ಸಚಿವೆ ಶಶಿಕಲಾ ಜೊಲ್ಲೆಗೆ ಮುತ್ತಿಗೆ ಹಾಕಿದ ಮಹಿಳೆಯರು!
ಧ್ವಜಸ್ತಂಭ ನಿಲ್ಲಿಸುತ್ತಿದ್ದ ವೇಳೆ ಮೂವರ ಮೇಲೆ ಪ್ರವಹಿಸಿದ ವಿದ್ಯುತ್: ಓರ್ವ ಬಾಲಕನ ದಾರುಣ ಸಾವು
ಎಸ್ ಸಿ-ಎಸ್ ಟಿಗಳ ಜಾತಿ ನಿಂದನೆ ಮಾಡಿದ ನಟಿ ಅರೆಸ್ಟ್: ಬಂಧನದ ವೇಳೆ ನಟಿಯಿಂದ ಹೈಡ್ರಾಮಾ
ಸ್ವಾತಂತ್ರ್ಯ ದಿನಾಚರಣೆ: ಗಾಂಧಿ, ಭಗತ್ ಸಿಂಗ್, ಅಂಬೇಡ್ಕರರನ್ನು ನೆನೆದ ಪ್ರಧಾನಿ ನರೇಂದ್ರ ಮೋದಿ
ಎಲ್ಲಾ ಜಾತಿಯವರೂ ಅರ್ಚಕ ಹುದ್ದೆ ಪಡೆಯಲು ಅರ್ಹರು: ಕ್ರಾಂತಿಕಾರಿ ಹೆಜ್ಜೆಯಿಟ್ಟ ಎಂ.ಕೆ.ಸ್ಟ್ಯಾಲಿನ್