ಎಸ್ಸಿ-ಎಸ್ಟಿಗೆ ಬಡ್ತಿ ಮೀಸಲಾತಿ: ಮಾನದಂಡ ಹಾಕಲು ಸುಪ್ರೀಂ ಕೋರ್ಟ್ ನಿರಾಕರಣೆ
ನವದೆಹಲಿ: ಸರ್ಕಾರಿ ಉದ್ಯೋಗಗಳಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಬಡ್ತಿಯಲ್ಲಿ ಮೀಸಲಾತಿ ನೀಡಲು ಮಾನದಂಡ ಅಥವಾ ಅಳತೆಗೋಲು ಹಾಕಲು ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದ್ದು, ಅದನ್ನು ರಾಜ್ಯ ಸರ್ಕಾರಗಳ ವಿವೇಚನೆಗೆ ಬಿಟ್ಟಿದೆ.
ನ್ಯಾಯಮೂರ್ತಿ ನಾಗೇಶ್ವರ ರಾವ್ ನೇತೃತ್ವದ ಮೂವರು ನ್ಯಾಯಾಧೀಶರನ್ನೊಳಗೊಂಡ ನ್ಯಾಯಪೀಠ, ಎಸ್‌ಸಿ, ಎಸ್‌ಟಿಗಳ ಪ್ರಾತಿನಿಧ್ಯದ ಅಸಮರ್ಪಕತೆಯ ಕುರಿತು ದತ್ತಾಂಶ ಸಂಗ್ರಹಿಸಲು ರಾಜ್ಯಗಳು ಬದ್ಧವಾಗಿವೆ. ಎಸ್‌ಸಿ, ಎಸ್‌ಟಿಗಳ ಪ್ರಾತಿನಿಧ್ಯದ ಅಸಮರ್ಪಕತೆಯನ್ನು ನಿರ್ಧರಿಸಲು, ರಾಜ್ಯಗಳಿಗೆ ಹಾಗೆ ಮಾಡಲು ಅದು ಯಾವುದೇ ಮಾನದಂಡ ಹಾಕಲು ಸಾಧ್ಯವಿಲ್ಲ ಎಂದು ಕೂಡ ಸುಪ್ರೀಂ ಕೋರ್ಟ್ ಹೇಳಿದೆ.
ಈ ಹಿಂದೆ ಸುಪ್ರೀಂ ಕೋರ್ಟ್ ಈ ಕುರಿತ ತೀರ್ಪನ್ನು ಅ. 26, 2021ಕ್ಕೆ ಕಾಯ್ದಿರಿಸಿತ್ತು. ನ್ಯಾಯಮೂರ್ತಿ ನಾಗೇಶ್ವರ ರಾವ್ ನೇತೃತ್ವದ ತ್ರಿಸದಸ್ಯ ಪೀಠವು ಅಟಾರ್ನಿ ಜನರಲ್ ಕೆ.ಕೆ.ವೇಣುಗೋಪಾಲ್, ಹೆಚ್ಚುವರಿ ಸಾಲಿಸಿಟರ್ ಜನರಲ್ ಬಲ್ಬೀರ್ ಸಿಂಗ್ ಮತ್ತು ವಿವಿಧ ರಾಜ್ಯಗಳ ಪರವಾಗಿ ಹಾಜರಾಗುವ ಇತರ ಹಿರಿಯ ವಕೀಲರು ಸೇರಿದಂತೆ ಎಲ್ಲಾ ಕಕ್ಷಿದಾರರನ್ನು ಪ್ರಕರಣದಲ್ಲಿ ಪರ-ವಿರೋಧ ಚರ್ಚೆಗಳನ್ನು ಆಲಿಸಿತು.
ಎಸ್ಸಿ ಮತ್ತು ಎಸ್ಟಿಗಳಿಗೆ ಸೇರಿದವರು ಎ ಗುಂಪಿನ ಉದ್ಯೋಗಗಳಲ್ಲಿ ಉನ್ನತ ಹುದ್ದೆಯನ್ನು ಪಡೆಯುವುದು ಕಷ್ಟಕರವಾಗಿದೆ. ಇಂತಹ ಸಮಯದಲ್ಲಿ ಎಸ್ಸಿ, ಎಸ್ಟಿಗಳು ಮತ್ತು ಇತರ ಹಿಂದುಳಿದ ವರ್ಗಗಳಿಗೆ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ನಿರ್ದಿಷ್ಟ ಆಧಾರವನ್ನು ನೀಡುವ ಸಮಯ ಬಂದಿದೆ ಎಂದು ಅಟಾರ್ನಿ ಜನರಲ್ ಕೆ.ಕೆ.ವೇಣುಗೋಪಾಲ್ ನ್ಯಾಯಾಲಯ ಮುಂದೆ ವಾದಿಸಿದರು.
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಿಗೆ ಬಡ್ತಿಯಲ್ಲಿ ಮೀಸಲಾತಿ ನೀಡುವ ವಿಷಯದ ಕುರಿತು ಅದು ತನ್ನ ನಿರ್ಧಾರವನ್ನು ಮತ್ತೆ ತಿಳಿಸುವುದಿಲ್ಲ. ಅದನ್ನು ಹೇಗೆ ಜಾರಿಗೆ ತರಬೇಕು ಎಂಬುದನ್ನು ರಾಜ್ಯಗಳು ನಿರ್ಧರಿಸಬೇಕು ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಪೀಠ ಈ ಹಿಂದೆ ಹೇಳಿತ್ತು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Bk3PAoJFRvJLUSBPd39m1C
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮೊಮ್ಮಗಳು ಆತ್ಮಹತ್ಯೆ
ಸೆಲ್ಫಿ ತೆಗೆಯಲು ಹೋಗಿ ಜಲಪಾತಕ್ಕೆ ಬಿದ್ದು ಯುವಕ ಸಾವು
ಬ್ಯಾಂಕ್ ಆಫ್ ಇಂಡಿಯಾದಲ್ಲಿ ಅಗ್ನಿ ಅವಘಡ
ಅಂಬೇಡ್ಕರ್ ಗೆ ಅವಮಾನ: ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡ ವಿರುದ್ಧ ಎನ್.ಮಹೇಶ್ ಆಕ್ರೋಶ