ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯತ್ ಚುನಾವಣಾ ಮೀಸಲಾತಿಯಲ್ಲಿ SC-STಸಮುದಾಯಕ್ಕೆ ಅನ್ಯಾಯ | ವಸಂತ ಬಂಗೇರ - Mahanayaka
8:13 PM Wednesday 11 - December 2024

ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯತ್ ಚುನಾವಣಾ ಮೀಸಲಾತಿಯಲ್ಲಿ SC-STಸಮುದಾಯಕ್ಕೆ ಅನ್ಯಾಯ | ವಸಂತ ಬಂಗೇರ

vasantha bangera
07/07/2021

ಬೆಳ್ತಂಗಡಿ: ಚುನಾವಣಾ ಆಯೋಗ ಘೋಷಿಸಿರುವ ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯಿತಿ ಚುನಾವಣಾ ಮೀಸಲಾತಿ ಅವೈಜ್ಞಾನಿಕವಾಗಿದೆ. ಬೆಳ್ತಂಗಡಿಯ ಇತಿಹಾಸದಲ್ಲಿಯೇ ಜಿಲ್ಲಾ ಪಂಚಾಯಿತಿ ಚುನಾವಣೆಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಒಂದೇ ಒಂದು ಕ್ಷೇತ್ರವನ್ನು ಮೀಸಲಿಡದೆ ಸಮುದಾಯಕ್ಕೆ ಅನ್ಯಾಯ ಮಾಡಲಾಗಿದೆ ಎಂದು ಮಾಜಿ ಶಾಸಕ ಕೆ.ವಸಂತ ಬಂಗೇರ ಆರೋಪಿದ್ದಾರೆ.

 

ಮಂಗಳವಾರ ಬೆಳ್ತಂಗಡಿಯಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಬೆಳ್ತಂಗಡಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಒಟ್ಟು 40,958 ಜನಸಂಖ್ಯೆ ಇದೆ. ಹೀಗಿದ್ದರೂ ಜಿಲ್ಲಾ ಪಂಚಾಯಿತಿ ಚುನಾವಣೆಯಲ್ಲಿ ಒಂದೂ ಕ್ಷೇತ್ರವನ್ನು ಮೀಸಲಿಟ್ಟಿಲ್ಲ. ಇದರಲ್ಲಿ ಶಾಸಕ ಹರೀಶ್ ಪೂಂಜ ನೇರವಾಗಿ ಶಾಮೀಲಾಗಿದ್ದಾರೆ ಎಂದು ಅವರು ಆರೋಪಿಸಿದರು.

ತಾಲ್ಲೂಕಿನ ಕೆಲವೊಂದು ಕಡೆ ಜಿಲ್ಲಾ ಪಂಚಾಯಿತಿ ಮತ್ತು ತಾಲ್ಲೂಕು ಪಂಚಾಯಿತಿ ಕ್ಷೇತ್ರವನ್ನು ಸಾಮಾನ್ಯ ಮಹಿಳೆಯರಿಗೆ ಮೀಸಲಿರಿಸಲಾಗಿದೆ. ಧರ್ಮಸ್ಥಳ ತಾಲ್ಲೂಕು ಪಂಚಾಯಿತಿ ಕ್ಷೇತ್ರದಲ್ಲಿ ಈ ಹಿಂದೆ ಕೂಡ ಹಿಂದುಳಿದ ವರ್ಗ (ಎ) ಮೀಸಲಾತಿ ಇದ್ದು, ಈ ಬಾರಿ ಅದೇ ಮೀಸಲಾತಿ ಪುನರಾವರ್ತನೆಯಾಗಿದೆ ಎಂದು ಅವರು ಹೇಳಿದರು.

 

ಇತ್ತೀಚಿನ ಸುದ್ದಿ