ಪಿಕ್ನಿಕ್ ಮುಗಿಸಿ ಬರುತ್ತಿದ್ದ ವೇಳೆ ಅಪಘಾತ: ಐವರು ವಿದ್ಯಾರ್ಥಿಗಳಿಗೆ ಗಾಯ
ಕೊಟ್ಟಿಗೆಹಾರ: ಪಿಕ್ನಿಕ್ ಮುಗಿಸಿ ಬರುತ್ತಿದ್ದ ವೇಳೆ ಕಾಲೇಜು ವಾಹನವೊಂದು ಪಲ್ಟಿಯಾದ ಘಟನೆ ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಅಪಘಾತದಲ್ಲಿ ಐವರು ವಿದ್ಯಾರ್ಥಿಗಳಿಗೆ ಗಾಯವಾಗಿದ್ದು, ಎಲ್ಲ ವಿದ್ಯಾರ್ಥಿಗಳು ಕೂಡ ಅಪಾಯದಿಂದ ಪಾರಾಗಿದ್ದಾರೆ. ಮೂಡಿಗೆರೆ ತಾಲೂಕಿನ ದೇವರಮನೆ ಗುಡ್ಡದಿಂದ ಪಿಕ್ನಿಕ್ ಮುಗಿಸಿಕೊಂಡು ಬರುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಬಸ್ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ.
ಮೂಡಿಗೆರೆ ತಾಲೂಕಿನ ಮುತ್ತಿಗೆಪುರದ ಹರೀಶ್ ಪಿ.ಯು. ಕಾಲೇಜಿನ ವಿದ್ಯಾರ್ಥಿಗಳು ಪ್ರಯಾಣಿಸುತ್ತಿದ್ದ ಬಸ್ ಅಪಘಾತಕ್ಕೀಡಾದ ಬಸ್ ಆಗಿದೆ. 10 ವಿದ್ಯಾರ್ಥಿಗಳು ಇಂದು ದೇವರಮನೆ ಗುಡ್ಡಕ್ಕೆ ಪಿಕ್ನಿಕ್ ಹೋಗಿದ್ದರು.
ಅಪಘಾತದಲ್ಲಿ ಗಾಯಗೊಂಡ ವಿದ್ಯಾರ್ಥಿಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LG00SlXNdBFJ1LFb3E40gL
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw