ಶಾಲಾ ಮಕ್ಕಳ ಪ್ರವಾಸದ ಬಸ್ ಪಲ್ಟಿ: 11 ಮಕ್ಕಳಿಗೆ ಗಾಯ
ಮೈಸೂರು: ಶಾಲಾ ಮಕ್ಕಳ ಪ್ರವಾಸದ ಬಸ್ ಡಿವೈಡರ್ ಗೆ ಡಿಕ್ಕಿ ಹೊಡೆದು ಮಗುಚಿ ಬಿದ್ದ ಘಟನೆ ನಡೆದಿದ್ದು, ಅಪಘಾತದ ಪರಿಣಾಮ 11 ಮಕ್ಕಳು ಗಾಯಗೊಂಡಿದ್ದಾರೆ.
ಶಾಲಾ ಮಕ್ಕಳಿದ್ದ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಬಸ್ ಚಾಲಕನ ಅಜಾರೋಕತೆಯ ಚಾಲನೆಯಿಂದಾಗಿ ಡಿವೈಡರ್ ಗೆ ಡಿಕ್ಕಿ ಹೊಡೆದು ಮಗುಚಿ ಬಿದ್ದಿದೆ ಎಂದು ಹೇಳಲಾಗಿದೆ.
ಅಪಘಾತದ ವೇಳೆ ಬಸ್ ನಲ್ಲಿ 36 ಮಕ್ಕಳಿದ್ದರು. ಈ ಪೈಕಿ 11 ಜನರಿಗೆ ಗಾಯಗಳಾಗಿದ್ದು, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ನಗರ ಪೊಲೀಸ್ ಕಮಿಷನರ್ ಸೀಮಾ ಲಾಟ್ಕರ್ ತಿಳಿಸಿದ್ದಾರೆ.
ಬೆಳಗಾವಿ ಜಿಲ್ಲೆಯ ಖಾನಾಪುರದ ಶಾಂತಿನಿಕೇತನ ಶಾಲೆಯ ಮಕ್ಕಳು ಮೈಸೂರಿಗೆ ಪ್ರವಾಸಕ್ಕೆ ಬಂದಿದ್ದರು. ಪ್ರವಾಸಿ ತಾಣಗಳನ್ನು ವೀಕ್ಷಿಸಿ ವಾಪಸ್ ತೆರಳುವಾಗ ಈ ಅಪಘಾತ ನಡೆದಿದೆ.
ಗಾಯಗೊಂಡ ಮಕ್ಕಳನ್ನು ಕೆ.ಆರ್.ಆಸ್ಪತ್ರೆ ಮತ್ತು ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಕ್ಕಳೆಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದು, ಯಾರೂ ಭಯಪಡುವ ಅವಶ್ಯಕತೆ ಇಲ್ಲ ಎಂದು ಸೀಮಾ ಲಾಟ್ಕರ್ ತಿಳಿಸಿದರು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: