ಸ್ಕೂಲ್ ಬಸ್ ತಪ್ಪಿ ಹೋಯಿತು ಎಂದು ಆತ್ಮಹತ್ಯೆ ಮಾಡಿಕೊಂಡ ಬಾಲಕ!
ಮಧ್ಯಪ್ರದೇಶ: ಸ್ಕೂಲ್ ಬಸ್ ತಪ್ಪಿ ಹೋಯಿತು ಎಂಬ ಬೇಸರದಿಂದ 9ನೇ ತರಗತಿ ವಿದ್ಯಾರ್ಥಿಯೊಬ್ಬ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿರುವ ಆಘಾತಕಾರಿ ಘಟನೆ ಮಧ್ಯಪ್ರದೇಶದ ಬೆತುಲ್ ಜಿಲ್ಲೆಯ ಅಮ್ಹೋಹ್ ಗ್ರಾಮದಲ್ಲಿ ನಡೆದಿದೆ.
ಸೋಮವಾರ ಬೆಳಗ್ಗೆ ಈ ಘಟನೆ ನಡೆದಿದ್ದು, 14 ವರ್ಷ ವಯಸ್ಸಿನ ಬಾಲಕ ಮನೆಯಿಂದ ಶಾಲೆಗೆ ಹೊರಟಿದ್ದು, ಈ ವೇಳೆ ಶಾಲೆಯ ಬಸ್ ತಪ್ಪಿ ಹೋಗಿತ್ತು. ಇದರಿಂದ ತೀವ್ರವಾಗಿ ಬೇಸರಗೊಂಡ ಆತ ಅಳುತ್ತಾ ಮನೆಗೆ ಬಂದಿದ್ದಾನೆ ಎನ್ನಲಾಗಿದೆ.
ಮನೆಗೆ ಬಂದ ಬಳಿಕ ಶಾಲಾ ಯೂನಿಫಾರ್ಮ್ ಹಾಕಿಕೊಂಡೇ ಇದ್ದ ಆತ ಮನೆಯ ಹಿಂಬದಿಯ ಮಾವಿನ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ಬಾಲಕನ ಕುಟುಂಬಸ್ಥರು ತಿಳಿಸಿದ್ದಾರೆ.
ಬಾಲಕನು ಕಲಿಕೆಯಲ್ಲಿ ಮುಂದೆ ಇದ್ದ ಎನ್ನಲಾಗಿದ್ದು, ಶಾಲೆಗೆ ರಜೆ ಮಾಡಲು ಆತನಿಗೆ ಇಷ್ಟವಿರಲಿಲ್ಲ. ಹೀಗಾಗಿ ಶಾಲಾ ಬಸ್ ತಪ್ಪಿದ್ದರಿಂದ ಆತ ತೀವ್ರವಾಗಿ ನೊಂದಿದ್ದ ಎನ್ನಲಾಗಿದೆ. ಮಕ್ಕಳ ಮನಸ್ಸನ್ನು ಅಳತೆ ಮಾಡಲು ಸಾಧ್ಯವಿಲ್ಲ, ಸ್ಕೂಲ್ ಬಸ್ ತಪ್ಪಿ ಹೋಗಿದ್ದಕ್ಕೆ ಆತ್ಮಹತ್ಯೆ ಮಾಡಿಕೊಳ್ಳುತ್ತಾನೆ ಎಂದು ಯಾರಾದರೂ ನಿರೀಕ್ಷಿಸಲು ಸಾಧ್ಯವೇ ಎಂದು ಹೆತ್ತವರು ಇದೀಗ ರೋದಿಸುವಂತಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Ginhq56yzxz2MmHFl94DFN
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಮಂಗಳೂರು: 8 ವರ್ಷದ ಬಾಲಕಿಯ ಹತ್ಯೆ ಪ್ರಕರಣ | 20 ಮಂದಿ ಪೊಲೀಸ್ ವಶಕ್ಕೆ
ಸೆಲ್ಫಿ ವಿಡಿಯೋಗಾಗಿ ಪ್ರಾಣವನ್ನೇ ಕಳೆದುಕೊಂಡ ಬಾಲಕ
ಮಗಳ ಮೇಲೆಯೇ ಅತ್ಯಾಚಾರ ನಡೆಸುತ್ತಿದ್ದ ತಂದೆಯನ್ನು ಕೊಚ್ಚಿ ಕೊಂದ ಮಗಳ ಸ್ನೇಹಿತರು!
ರಾಜ್ಯ ಪ್ರವಾಹ ಸಂಕಷ್ಟದಲ್ಲಿರುವಾಗ ಬಿಜೆಪಿ—ಕಾಂಗ್ರೆಸ್ ನ ಬೇಜವಾಬ್ದಾರಿಯ ಜನ‘ಜಾತ್ರೆ’
ನನ್ನ ಕಾರು ಅಪಘಾತವಾಗಿಲ್ಲ, ನಾನು ಸುರಕ್ಷಿತವಾಗಿದ್ದೇನೆ | ಸಂಸದ ಪ್ರತಾಪ್ ಸಿಂಹ ಸ್ಪಷ್ಟನೆ
ಪುನೀತ್ ರಾಜ್ ಕುಮಾರ್ ಅವರ ಬ್ಯಾನರ್ ಹರಿದ ವ್ಯಕ್ತಿಗೆ ಹಿಗ್ಗಾಮುಗ್ಗಾ ಥಳಿತ!