ಭಯೋತ್ಪಾದನೆ ವಿರುದ್ಧ ಗುಡುಗಿದ ಪ್ರಧಾನಿ: ಪಾಕ್ ಪ್ರಧಾನಿ, ಚೀನಾ ಅಧ್ಯಕ್ಷರ ಎದುರೇ ಮೋದಿ ಟಾಂಗ್..! - Mahanayaka

ಭಯೋತ್ಪಾದನೆ ವಿರುದ್ಧ ಗುಡುಗಿದ ಪ್ರಧಾನಿ: ಪಾಕ್ ಪ್ರಧಾನಿ, ಚೀನಾ ಅಧ್ಯಕ್ಷರ ಎದುರೇ ಮೋದಿ ಟಾಂಗ್..!

04/07/2023

ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಎಸ್‌ಸಿಒ ರಾಷ್ಟ್ರಗಳ ನಾಯಕರ ಸಭೆಯಲ್ಲಿ ಭಯೋತ್ಪಾದನೆ ವಿರುದ್ಧ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ. ಅದು ಪಾಕಿಸ್ತಾನದ ಪ್ರಧಾನಿ ಶೆಹಬಾಜ್‌ ಶರೀಫ್‌ ಹಾಗೂ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಎದುರಲ್ಲೇ ಟಾಂಗ್‌ ನೀಡಿದ್ದಾರೆ.‌

ಭಯೋತ್ಪಾದಕ ಚಟುವಟಿಕೆಗಳನ್ನು ಎದುರಿಸುವಲ್ಲಿ ಯಾವುದೇ ದ್ವಂದ್ವ ನೀತಿ ಇರಬಾರದು ಎಂದು ಹೇಳಿದ ಮೋದಿಯವರು, ಗಡಿಯಾಚೆಗಿನ ಭಯೋತ್ಪಾದನೆಯನ್ನು ಬೆಂಬಲಿಸುವ ರಾಷ್ಟ್ರಗಳನ್ನು ಟೀಕಿಸಲು ಎಸ್‌ಸಿಒ ಹಿಂಜರಿಯಬಾರದು ಎಂದು ಪಾಕಿಸ್ತಾನಕ್ಕೆ ಬೆಂಬಲಿಸುವ ರಾಷ್ಟ್ರಗಳಿಗೆ ಮೋದಿ ಪರೋಕ್ಷವಾಗಿ ಎಚ್ಚರಿಸಿದ್ದಾರೆ.

ಭಯೋತ್ಪಾದನೆಗೆ ಹಣಕಾಸಿನ ನೆರವು ನೀಡುವುದನ್ನು ಎದುರಿಸಲು ನಿರ್ಣಾಯಕ ಕ್ರಮದ ಅಗತ್ಯವಿದೆ ಎಂದು ಹೇಳಿದ ಪ್ರಧಾನಿ ಮೋದಿ, ಭಯೋತ್ಪಾದನೆಯು ಜಾಗತಿಕ ಶಾಂತಿಗೆ ಬೆದರಿಕೆಯಾಗಿದೆ. ಇಂತಹ ಬೆದರಿಕೆಯನ್ನು ಸಮರ್ಥವಾಗಿ ಎದುರಿಸಲು ಪರಸ್ಪರ ಸಹಕಾರವನ್ನು ವಿಸ್ತರಿಸಬೇಕು ಎಂದು ಕರೆ ನೀಡಿದ್ದಾರೆ.

ಭಾರತದ ಅಧ್ಯಕ್ಷತೆಯಲ್ಲಿ ವರ್ಚುವಲ್ ಶೃಂಗಸಭೆ ನಡೆದಿದ್ದು, ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಶರೀಫ್, ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್, ರಷ್ಯಾದ ವ್ಲಾಡಿಮಿರ್ ಪುಟಿನ್ ಸೇರಿದಂತೆ, ಕಝಾಕಿಸ್ತಾನ್, ಕಿರ್ಗಿಸ್ತಾನ್, ತಜಕಿಸ್ತಾನ್, ಉಜ್ಬೇಕಿಸ್ತಾನ್ ಮತ್ತು ಇರಾನ್ ನಾಯಕರು ಭಾಗವಹಿಸಿದ್ದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ