ಮತಗಟ್ಟೆಯಲ್ಲಿ ಬಿಜೆಪಿ ಕಾರ್ಯಕರ್ತನಿಂದ ಕಿರಿಕ್!
ಮಂಗಳೂರು: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಮತಚಲಾಯಿಸಿ ಹೊರ ಬಂದು, ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡುತ್ತಿದ್ದ ವೇಳೆ ಬಿಜೆಪಿ ಕಾರ್ಯಕರ್ತನೋರ್ವ ಅನಗತ್ಯವಾಗಿ ಕ್ಯಾತೆ ತೆಗೆದಿದ್ದಲ್ಲದೇ ಪತ್ರಕರ್ತರ ಜೊತೆಗೂ ಅನುಚಿತ ವರ್ತನೆ ತೋರಿದ ಘಟನೆ ನಡೆದಿದೆ.
ಬಿಜೆಪಿ ಕಾರ್ಯಕರ್ತ ಸಂದೀಪ್ ಎಕ್ಕೂರು ಎಂಬಾತ ಪದ್ಮರಾಜ್ ಆರ್. ಪೂಜಾರಿ ಅವರ ಹೇಳಿಕೆ ಪಡೆದುಕೊಳ್ಳುತ್ತಿರುವುದನ್ನು ವಿರೋಧಿಸಿದ್ದು, ಎಷ್ಟು ಹೊತ್ತು ಪ್ರತಿಕ್ರಿಯೆ ಪಡೆಯುತ್ತೀರಿ ಎಂದು ಕಿರಿಕ್ ಮಾಡಿದ್ದಾನೆ.
ಈ ವೇಳೆ ಪೊಲೀಸ್ ಇನ್ಸ್ ಪೆಕ್ಟರ್ ಟಿ.ಡಿ.ನಾಗರಾಜ್ ಸೇರಿದಂತೆ ಇತರರು ಆತನನ್ನು ಸ್ಥಳದಿಂದ ಹೊರಗೆ ತಳ್ಳಿಕೊಂಡು ಬಂದಿದ್ದು, ಈ ವೇಳೆ ಪೊಲೀಸರೊಂದಿಗೂ ಅನುಚಿತ ವರ್ತನೆ ತೋರಿ ವಾಗ್ವಾದ ನಡೆಸಿದ ಘಟನೆ ನಡೆದಿದೆ. ಕೊನೆಗೆ ಟಿ.ಡಿ.ನಾಗರಾಜ್ ಅವರು ಖಡಕ್ ವಾರ್ನಿಂಗ್ ನೀಡಿ ಸ್ಥಳದಿಂದ ಕಳುಹಿಸಿದ್ದಾರೆ.
ಇನ್ನೂ ಘಟನೆಯ ದೃಶ್ಯವನ್ನು ಚಿತ್ರೀಕರಿಸುತ್ತಿದ್ದ ಮಾಧ್ಯಮ ಸಿಬ್ಬಂದಿಯ ಮೇಲೆಯೂ ಆತ ವಾಗ್ವಾದ ನಡೆದಿದ್ದು, ಸ್ಥಳದಲ್ಲಿ ಗೊಂದಲದ ವಾತಾವರಣ ಸೃಷ್ಟಿಸಿದ ಘಟನೆ ನಡೆದಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth