ಶೇಂದಿ ತೆಗೆಯುತ್ತಿದ್ದ ವೇಳೆ ತೆಂಗಿನ ಮರದಿಂದ ಬಿದ್ದು ಮೂರ್ತೆದಾರ ಸಾವು

ಉಳ್ಳಾಲ: ಕೊಲ್ಯ ಕನೀರುತೋಟ ಸಮೀಪದ ಶೇಂದಿ ತೆಗೆಯುತ್ತಿದ್ದ ವ್ಯಕ್ತಿಯೊಬ್ಬರು ತೆಂಗಿನ ಮರದಿಂದ ಆಯತಪ್ಪಿ ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ.
ಕೊಲ್ಯ ಕನೀರುತೋಟ, ಬಲ್ಯ ನಡುಪೊಲಿಕೆ ನಿವಾಸಿ ಯಶೋಧರ್ (46) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಯಶೋಧರ್ ಅವರು ಶುಕ್ರವಾರ ಬೆಳಗ್ಗೆ ತನ್ನ ಮನೆ ಬಳಿಯ ತೋಟವೊಂದರ ಬಳಿ ಮೂರ್ತೆದಾರಿಕೆ ನಡೆಸುತ್ತಿದ್ದಾಗ ಆಯತಪ್ಪಿ ಕೆಳಗೆ ಬಿದ್ದು ಗಂಭೀರ ಗಾಯಗೊಂಡಿದ್ದರು.
ಚಿಂತಾಜನಕ ಸ್ಥಿತಿಯಲ್ಲಿದ್ದ ಅವರನ್ನು ಆಸ್ಪತ್ರೆಗೆ ಸಾಗಿಸಲು ಪ್ರಯತ್ನ ನಡೆಸಲಾಯಿತು. ಆದರೆ ಆಸ್ಪತ್ರೆಗೆ ತಲುಪುವ ಮುನ್ನವೇ ದಾರಿ ಮಧ್ಯೆ ಅವರು ಕೊನೆಯುಸಿರೆಳೆದಿದ್ದಾರೆ.
ಯಶೋಧರ್ ಅವರು ಈ ಹಿಂದೆ ಕೂಡ ಲೋ ಬಿಪಿಯಿಂದ ಬಿದ್ದಿದ್ದರು. ಈಗಲೂ ಇದೇ ಕಾರಣದಿಂದ ಬಿದ್ದಿರಬಹುದು ಎಂದು ಶಂಕಿಸಲಾಗಿದೆ. ಮೃತರು ಪತ್ನಿ, ಪುತ್ರ, ಪುತ್ರಿಯನ್ನು ಅಗಲಿದ್ದಾರೆ. ಮನೆಗೆ ಆಧಾರ ಸ್ತಂಭವಾಗಿದ್ದ ಯಶೋಧರ್ ಅವರನ್ನು ಕಳೆದುಕೊಂಡು ಕುಟುಂಬಸ್ಥರು ಕಂಗಾಲಾಗಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: