ಎಸ್ ಡಿಪಿಐ ಜಿಲ್ಲಾಧ್ಯಕ್ಷರ ಮನೆಗೆ ಪೊಲೀಸ್ ದಾಳಿ: ಐವರು ಪಿಎಫ್ ಐ ಮುಖಂಡರು ವಶಕ್ಕೆ
13/10/2022
ಮಂಗಳೂರು: ಇಂದು ಬೆಳ್ಳಂಬೆಳಗ್ಗೆ ನಿಷೇಧಿತ ಪಿಎಫ್ ಐ ಸಂಘಟನೆಯ ಮುಖಂಡರ ಮನೆ ಮೇಲೆ ಪೊಲೀಸರು ದಾಳಿ ಮಾಡಿದ್ದು, ಎಸ್ ಡಿಪಿಐ ಜಿಲ್ಲಾಧ್ಯಕ್ಷ ಅಬೂಬಕರ್ ಕುಳಾಯಿ ಮನೆ ಮೇಲೆ ದಾಳಿ ನಡೆಸಲಾಗಿದೆ.
ಅಬೂಬಕರ್ ಕುಳಾಯಿಯವರನ್ನು ಬಂಧಿಸಲು ಪೊಲೀಸರು ದಾಳಿ ಮಾಡಿದ್ದು, ದಾಳಿಯ ವೇಳೆ ಅಬೂಬಕರ್ ಕುಳಾಯಿ ಮನೆಯಲ್ಲಿ ಇರಲಿಲ್ಲ ಎಂದು ತಿಳಿದು ಬಂದಿದೆ.
ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ನೇತೃತ್ವದಲ್ಲಿ ಈ ದಾಳಿ ನಡೆದಿದ್ದು, ಐವರು ಪಿಎಫ್ ಐ ಮುಖಂಡರನ್ನು ವಶಕ್ಕೆ ಪಡೆಯಲಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka