ಧಮ್ ಇದ್ರೆ, ಎಸ್ ಡಿಪಿಐ, ಆರ್‌ಎಸ್‌ಎಸ್, ಬಜರಂಗಳವನ್ನು ನಿಷೇಧಿಸಿ: ಬಿಜೆಪಿಗೆ ಸಿದ್ದರಾಮಯ್ಯ ಸವಾಲ್
ಹುಬ್ಬಳ್ಳಿ: ಕರ್ನಾಟಕದಲ್ಲಿ ಆಗಾಗ ನಡೆಯುತ್ತಿರುವ ಗಲಭೆ ಹಿಂದೆ ಸಂಘಟನೆಗಳ ಕೈವಾಡವಿದ್ದರೆ ಅವುಗಳನ್ನು ರಾಜ್ಯ ಸರ್ಕಾರ ನಿಷೇಧ ಹೇರಲಿ, ಬೇಡ ಎಂದವರು ಯಾರು? ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
ಬಾದಾಮಿಗೆ ತೆರಳುವ ಮುನ್ನ ಶುಕ್ರವಾರ ಇಲ್ಲಿನ ವಿಮಾನನಿಲ್ದಾಣದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು ಸರ್ಕಾರಕ್ಕೆ ದಮ್ ಇದ್ದರೆ ಶಾಂತಿ ಕದಡುವ ಎಸ್‌ಡಿಪಿಐ, ಆರ್‌ಎಸ್‌ಎಸ್, ಬಜರಂಗಳ, ಎಐಎಂಐಎಂಗಳನ್ನು ಸಂಘಟನೆಗಳನ್ನು ನಿಷೇಧ ಮಾಡಲಿ ಎಂದು ಸವಾಲು ಹಾಕಿದರು.
ಬಿಜೆಪಿಯ ದಿವ್ಯಾ ಹಾಗರಗಿಯನ್ನು ಕೂಡಲೇ ಬಂಧಿಸಬೇಕು. ಪಿಎಸ್‌ಐ ನೇಮಕಾತಿ ಅಕ್ರಮ ಕುರಿತು ‘ಯಾರೇ ತಪ್ಪು ಮಾಡಿದರೂ ಅವರ ಮೇಲೆ ಕಾನೂನು ಕ್ರಮ ತೆಗೆದುಕೊಳ್ಳಬೇಕು ಎಂದು ಸಿದ್ದರಾಮಯ್ಯ ಇದೇ ವೇಳೆ ಸರ್ಕಾರವನ್ನು ಒತ್ತಾಯಿಸಿದರು.
ಕರ್ನಾಟಕದಲ್ಲಿಯೂ ಸರ್ಕಾರ ರಚಿಸುವ ಕುರಿತು ಅರವಿಂದ ಕೇಜ್ರಿವಾಲ್ ಹೇಳಿಕೆಗೆ ಪ್ರತಿಕ್ರಿಯಿಸಿ ‘ಆಮ್ ಆದ್ಮಿ ಕೂಡ ರಾಜಕೀಯ ಪಕ್ಷ. ಯಾರಿಗೆ ಅಧಿಕಾರ ಕೊಡಬೇಕು ಎನ್ನುವುದನ್ನು ಜನರು ತೀರ್ಮಾನಿಸುತ್ತಾರೆ’ಎಂದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1duNIQRfXnJcfQKWPzNqD
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಸ್ವಲ್ಪವಾದರೂ ಗಂಡಸ್ತನ ತೋರಿಸಿ: ಪ್ರಮೋದ್ ಮುತಾಲಿಕ್ ಆಕ್ರೋಶ
ಕರ್ನಾಟಕದಲ್ಲೂ ಪೊರಕೆ ಬೀಸುತ್ತಾರಾ ಕೇಜ್ರಿವಾಲ್: 0% ಸರ್ಕಾರದ ಭರವಸೆ!
ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಗೆ ವಾರೆಂಟ್
ಪೆಟ್ರೋಲ್ ಟ್ಯಾಂಕ್ ಮೇಲೆ ಯುವತಿಯನ್ನು ಕೂರಿಸಿ ಬೈಕ್ ನಲ್ಲಿ ಜಾಲಿ ರೈಡ್: ವಿಡಿಯೋ ವೈರಲ್
ಅಂಬೇಡ್ಕರ್ ಕುರಿತಾದ ಸ್ಪರ್ಧಾತ್ಮಕ ಪರೀಕ್ಷೆಯ ಪೋಸ್ಟರ್ ಬಿಡುಗಡೆ: ಒಟ್ಟು 6 ಲಕ್ಷ ಬಹುಮಾನ ಘೋಷಣೆ