ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಸಾವಿಗೆ ಶರಣು!
ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯೋರ್ವಳು ಮನೆಯಲ್ಲಿ ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಲ್ಲಡ್ಕದಲ್ಲಿ ನಡೆದಿದೆ.
ವೈಷ್ಣವಿ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ ಎಂದು ತಿಳಿದು ಬಂದಿದೆ. ಕಲ್ಲಡ್ಕ ಖಾಸಗಿ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ಓದುತ್ತಿದ್ದ ವೈಷ್ಣವಿ ಕಾಲೇಜಿಗೆಂದು ಹೊರಟು ಹೋಗಿ ಏನೋ ಮರೆತು ಹೋಗಿದ್ದೇನೆಂದು ವಾಪಾಸ್ ಮನೆಗೆ ಬಂದು ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿದ್ದಾಳೆನ್ನಲಾಗಿದೆ.
ಮೃತ ವಿದ್ಯಾರ್ಥಿನಿಯು ಭಗವದ್ಗೀತೆಯ 700 ಶ್ಲೋಕವನ್ನು ಕಂಠಪಾಠ ಮಾಡಿ ಜಿಲ್ಲಾ ಪ್ರಶಸ್ತಿಯನ್ನು ಪಡೆದಿದ್ದಳು. ಪ್ರತಿಭಾನ್ವಿತ ವಿದ್ಯಾರ್ಥಿನಿ ಸಾವಿಗೆ ಕಾರಣ ಏನು ಎಂದು ತಿಳಿದು ಬಂದಿಲ್ಲ. ಘಟನೆ ಸಂಬಂಧ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw