ಆಲ್ಟ್ ನ್ಯೂಸ್ ನ ಸ್ಥಾಪಕ ಮುಹಮ್ಮದ್ ಝುಬೇರ್ ವಿರುದ್ಧ ಮತ್ತೆ ದೇಶದ್ರೋಹದ ಕೇಸ್ ದಾಖಲು
ಫ್ಯಾಕ್ಟ್ ಚೆಕ್ ವೆಬ್ ಸೈಟ್ ಆಗಿ ಗುರುತಿಸಿಕೊಂಡಿರುವ ಆಲ್ಟ್ ನ್ಯೂಸ್ ನ ಸ್ಥಾಪಕ ಮುಹಮ್ಮದ್ ಝುಬೇರ್ ವಿರುದ್ಧ ಉತ್ತರ ಪ್ರದೇಶದ ಪೊಲೀಸರು ದೇಶದ್ರೋಹ ಪ್ರಕರಣ ದಾಖಲಿಸಿದ್ದಾರೆ. ದ್ವೇಷ ಭಾಷಣಗಾರ ಯತಿ ನರಸಿಂಗಾನಂದ ಅವರ ಪ್ರಚೋದನಕಾರಿ ಭಾಷಣದ ಕ್ಲಿಪ್ ಅನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿರುವುದಕ್ಕೆ ಈ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಲಾಗಿದೆ. ಭಾರತದ ಪರಮಾಧಿಕಾರ ಮತ್ತು ಐಕ್ಯತೆಗೆ ಭಂಗವನ್ನುಂಟು ಮಾಡಿದ್ದಾರೆ ಎಂದು ಆರೋಪಿಸಿ ಝುಬೇರ್ ವಿರುದ್ಧ ಈ ಪ್ರಕರಣ ದಾಖಲಿಸಲಾಗಿದೆ.
ಗಾಜಿಯಾಬಾದ್ ನ ದಸ್ನಾದೇವಿ ಮಂದಿರದ ಪೂಜಾರಿಯಾಗಿರುವ ಯತಿ ನರಸಿಂಗಾನಂದ ಅವರ ಅನುಯಾಯಿಗಳ ದೂರಿನ ಮೇರೆಗೆ ಪೊಲೀಸರು ಎಫ್ ಐ ಆರ್ ದಾಖಲಿಸಿದ್ದಾರೆ.
ಮೊಹಮ್ಮದ್ ಝುಬೇರ್ ವಿರುದ್ಧ ದೇಶದ್ರೋಹದ ಪ್ರಕರಣ ದಾಖಲಿಸಿರುವುದಕ್ಕೆ ಇಂಡಿಯಾ ಮೈತ್ರಿಕೂಟದ ನಾಯಕರು ತೀವ್ರ ಅಕ್ಷೇಪಾ ವ್ಯಕ್ತಪಡಿಸಿದ್ದಾರೆ. ವಿಭಜಕ ಶಕ್ತಿಗಳ ವಿರುದ್ಧ ಧೈರ್ಯದಿಂದ ಮಾತಾಡುವವರ ಧ್ವನಿ ಹತ್ತಿಕುವ ಕೆಲಸ ಇದು ಎಂದು ಡಿಎಂಕೆ ಸಂಸದೆ ಕನಿಮೋಳಿ ಹೇಳಿದ್ದಾರೆ. ಸ್ವತಂತ್ರ ಮಾಧ್ಯಮದ ಧ್ವನಿಯನ್ನು ಹತ್ತಿಕ್ಕುವ ಮತ್ತು ಪ್ರಭುತ್ವದ ಒತ್ತಡಕ್ಕೆ ಭಾಗದವರನ್ನು ಹೇಗೆ ಕಾನೂನು ದುರುಪಯೋಗಿಸಿ ಹತ್ತಿಕ್ಕಲು ಪ್ರಯತ್ನಿಸಲಾಗುತ್ತಿದೆ ಅನ್ನುವುದಕ್ಕೆ ಈ ಪ್ರಕರಣ ಒಂದು ಒಳ್ಳೆಯ ಉದಾಹರಣೆ ಎಂದು ಅವರು ಹೇಳಿದ್ದಾರೆ.
ಹೀಗೆ ಪ್ರಕರಣ ದಾಖಲಿಸಿರುವುದು ಪ್ರಜಾತಂತ್ರ ಮೌಲ್ಯಗಳಿಗೆ ವಿರುದ್ಧ ಎಂದು ಸಂಸದ ಮತ್ತು ಮಾಜಿ ಜಿಲ್ಲಾಧಿಕಾರಿ ಶಶಿಕಾಂತ್ ಸೆಂತಿಲ್ ಹೇಳಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/BHOOdLNNvmD17cBJslQgwj