ಮಹಿಳೆಯ ಸೀರೆಯ ಪಿನ್ ಚುಚ್ಚಿ ಮಾಜಿ ಸಿಎಂ ಯಡಿಯೂರಪ್ಪನವರ ಕೈಗೆ ಗಾಯ!
ಬೆಂಗಳೂರು: ಬಸವರಾಜ್ ಬೊಮ್ಮಾಯಿ ನೇತೃತ್ವದ ಸರ್ಕಾರದ ನೂತನ ಸಚಿವ ಸಂಪುಟ ಇಂದು ಅಸ್ತಿತ್ವಕ್ಕೆ ಬಂದಿದ್ದು, ನೂತನ ಸಚಿವರು ಪ್ರಮಾಣ ವಚನ ನಡೆಸುತ್ತಿದ್ದ ವೇಳೆ ಮಾಜಿ ಸಿಎಂ ಯಡಿಯೂರಪ್ಪ ಅವರ ಕೈಗೆ ಪಿನ್ ಚುಚ್ಚಿ ಸಣ್ಣ ಗಾಯವಾಗಿದೆ ಎಂದು ವರದಿಯಾಗಿದೆ.
ಪ್ರಮಾಣ ವಚನ ಕಾರ್ಯಕ್ರಮದಲ್ಲಿ ಭಾಗಿಯಾಗಲು ಯಡಿಯೂರಪ್ಪನವರು ಆಗಮಿಸಿದ್ದರು. ಈ ವೇಳೆ ಶಾಸಕ ಗೋಪಾಲಯ್ಯ ಅವರ ಕುಟುಂಬದ ಸದಸ್ಯರು ಯಡಿಯೂರಪ್ಪನವರ ಆಶೀರ್ವಾದ ಪಡೆಯಲು ಮುಂದಾಗಿದ್ದಾರೆ.
ಆಶೀರ್ವಾದ ಪಡೆಯುತ್ತಿದ್ದ ವೇಳೆ ಮಹಿಳೆಯೊಬ್ಬರ ಸೀರೆಯಲ್ಲಿದ್ದ ಪಿನ್ ಯಡಿಯೂರಪ್ಪನವರ ಕೈಗೆ ಆಕಸ್ಮಿಕವಾಗಿ ತಾಗಿದ್ದು, ಅವರ ಕೈಗೆ ಸಣ್ಣ ಗಾಯವಾಗಿದೆ ಎಂದು ವರದಿಯಾಗಿದೆ. ಇನ್ನೂ ಕೈಗೆ ಗಾಯಗೊಂಡರೂ ಬೇಸರಗೊಳ್ಳದ ಯಡಿಯೂರಪ್ಪನವರು ಮಹಿಳೆಯ ಜೊತೆಗೆ ನಗುನಗುತ್ತಲೇ ಮಾತು ಮುಂದುವರಿಸಿದರು ಎಂದು ಮಾಧ್ಯಮವೊಂದು ವರದಿ ಮಾಡಿದೆ.
ಇನ್ನಷ್ಟು ಸುದ್ದಿಗಳು…
ಚಟ್ನಿ ರುಚಿಕರವಾಗಿ ತಯಾರಿಸಿಲ್ಲ ಎಂದು ಪತ್ನಿಯನ್ನು ಹೊಡೆದುಕೊಂದ ಪತಿ!
ಲಾಬಿ ಮಾಡುತ್ತಿದ್ದರೆ ನಾನೂ ಮಂತ್ರಿಯಾಗುತ್ತಿದ್ದೆ | ಗದ್ಗದಿತರಾದ ಶಾಸಕ ರೇಣುಕಾಚಾರ್ಯ
ಸಿಎಂ ರೇಸ್ ನಲ್ಲಿದ್ದ ಬೆಲ್ಲದ್ ಗೆ ಸಚಿವ ಸ್ಥಾನವೂ ಸಿಗಲಿಲ್ಲ | ಶೆಟ್ಟರ್, ಬಿಎಸ್ ವೈಗೆ ಧಿಕ್ಕಾರ ಹೇಳಿದ ಬೆಂಬಲಿಗರು
ಬ್ರೇಕಿಂಗ್ ನ್ಯೂಸ್: ಬೊಮ್ಮಾಯಿ ಸಂಪುಟ ಅಸ್ತಿತ್ವಕ್ಕೆ | ಯಾರಿಗೆಲ್ಲ ಒಲಿಯಿತು ಸಚಿವ ಸ್ಥಾನ?]
ಆ.10ರಂದು ಇಡೀ ದೇಶವೇ ಕಗ್ಗತ್ತಲಲ್ಲಿ ಮುಳುಗಲಿದೆ? | ದೇಶಾದ್ಯಂತ ವಿದ್ಯುತ್ ಸ್ಥಗಿತ!