ಸೆಲ್ಫಿ ತೆಗೆದುಕೊಳ್ಳಲು ಬಂದ ಬೆಂಬಲಿಗನ ಮೇಲೆ ತಿರುಗಿ ಬಿದ್ದ ಡಿ.ಕೆ.ಶಿವಕುಮಾರ್ - Mahanayaka

ಸೆಲ್ಫಿ ತೆಗೆದುಕೊಳ್ಳಲು ಬಂದ ಬೆಂಬಲಿಗನ ಮೇಲೆ ತಿರುಗಿ ಬಿದ್ದ ಡಿ.ಕೆ.ಶಿವಕುಮಾರ್

dk shivakumar
28/12/2021

ಮಂಡ್ಯ: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸೆಲ್ಫಿ ತೆಗೆದುಕೊಳ್ಳಲು ಬಂದ ಬೆಂಬಲಿಗನ ಮೊಬೈಲ್ ಕಸಿದು ಆತನ ಮೇಲೆ ಆಕ್ರೋಶ ವ್ಯಕ್ತಪಡಿಸಿದ ಘಟನೆ ಮಂಡ್ಯದಲ್ಲಿ ನಡೆದಿದೆ.

ಮಂಡ್ಯ ಜಿಲ್ಲೆಯ ಮದ್ದೂರಿನ ಶಿವಪುರ ಸತ್ಯಾಗ್ರಹ ಸೌಧ ಬಳಿಯಲ್ಲಿ ಈ ಘಟನೆ ನಡೆದಿದ್ದು, 137ನೇ ಕಾಂಗ್ರೆಸ್ ಸಂಸ್ಥಾಪನಾ ದಿನಾಚರಣೆಯ ಸಂದರ್ಭದಲ್ಲಿ ಸೆಲ್ಫಿ ತೆಗೆದುಕೊಳ್ಳಲು ಬೆಂಬಲಿಗ ಬಂದ ವೇಳೆ ಡಿ.ಕೆ.ಶಿವಕುಮಾರ್ ಆಕ್ರೋಶಗೊಂಡು ಮೊಬೈಲ್ ನ್ನು ಆತನ ಕೈಯಿಂದ ಎಳೆದುಕೊಳ್ಳಲು ಮುಂದಾದರು.

ಈ ವೇಳೆ ಡಿ.ಕೆ.ಶಿವಕುಮಾರ್ ಅವರ ಜೊತೆಗಿದ್ದ ಭದ್ರತಾ ಸಿಬ್ಬಂದಿ ಯುವಕನನ್ನು ಹಿಂದಕ್ಕೆ ತಳ್ಳಿದರು. ಸೆಲ್ಫಿ ತೆಗೆದುಕೊಳ್ಳಲು ಯುವಕ ಮುಂದಾಗುತ್ತಿದ್ದಂತೆಯೇ ಮೊಬೈಲ್ ನ್ನು ಹಿಡಿದುಕೊಂಡ ಡಿಕೆಶಿ ಯುವಕನನ್ನು ತರಾಟೆಗೆತ್ತಿಕೊಂಡರು.

ಕಾಮನ್ ಸೆನ್ಸ್ ಇಲ್ವಾ… ನಾನು ಧ್ವಜಾರೋಹಣ ಮಾಡುವ ಬದಲು ಸೆಲ್ಫಿ ತೆಗೆದುಕೊಳ್ಳಬೇಕಾ? ಇದೇ ವೇಳೆ ಯುವಕನ ವಿರುದ್ಧ ಡಿ.ಕೆ.ಶಿವಕುಮಾರ್ ಆಕ್ರೋಶ ವ್ಯಕ್ತಪಡಿಸಿದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DbJM9kayC1K4utc3ntXPdh

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಸನ್ನಿ ಲಿಯೋನ್ ಗೆ ಎಚ್ಚರಿಕೆ ನೀಡಿದ ಮಧ್ಯಪ್ರದೇಶದ ಗೃಹ ಸಚಿವ!

ಮಂಡಿ ನೋವಿಗೆ ನಾಟಿ ಚಿಕಿತ್ಸೆಯ ಮೊರೆ ಹೋದ ಸಿಎಂ ಬೊಮ್ಮಾಯಿ

ಡ್ರಗ್ಸ್ ನೀಡಿ ನನ್ನ ಮಗಳಿಗೆ ಲೈಂಗಿಕ ದೌರ್ಜನ್ಯ ನಡೆಸಲಾಗಿದೆ:  ಮಂಗಳೂರು ಕಮಿಷನರ್ ಗೆ ದೂರು ನೀಡಿದ ತಾಯಿ

90 ಎಲೆಕ್ಟ್ರಿಕ್ ಬಸ್ ​ಗಳಿಗೆ ಸಿಎಂ ಬೊಮ್ಮಾಯಿ ಚಾಲನೆ: ಈ ಬಸ್ಸಿನ ವಿಶೇಷತೆ ಏನು?

ರಾಜ್ಯದಲ್ಲಿ ಆಯಾ ಶಾಲೆಗಳಲ್ಲಿಯೇ ಮಕ್ಕಳಿಗೆ ಕೋವಿಡ್‌ ಲಸಿಕೆ: ಸಿಎಂ ಬಸವರಾಜ ಬೊಮ್ಮಾಯಿ

ಬಿಜೆಪಿ ರಾಜ್ಯ ಉಪಾಧ್ಯಕ್ಷರಾಗಿ ಲಕ್ಷ್ಮಣ ಸವದಿ, ಉಡುಪಿಯ ನಯನಾ ಗಣೇಶ್ ನೇಮಕ

ಇತ್ತೀಚಿನ ಸುದ್ದಿ