ನಮಗಿಂತ ಪಾನಿಪುರಿ, ಗೋಬಿ ಮಂಚೂರಿ ಮಾರುವವರು ಸುಖವಾಗಿದ್ದಾರೆ: ತಹಶೀಲ್ದಾರ್ ಬೇಸರ
ಹಾಸನ: ಪಾನಿಪುರಿ, ಗೋಬಿ ಮಂಚೂರಿ ಅಂಗಡಿ ಇಟ್ಟುಕೊಂಡವರು ನಮಗಿಂತ ಸುಖವಾಗಿ ಜೀವನ ಮಾಡುತ್ತಾರೆ ಎಂದು ಹಾಸನದ ಹೊಳೆನರಸೀಪುರ ತಹಶೀಲ್ದಾರ್ ಕೆ.ಕೆ.ಕೃಷ್ಣಮೂರ್ತಿ ಬೇಸರ ವ್ಯಕ್ತಪಡಿಸಿದ್ದಾರೆ.
ತಾಲೂಕು ಸರ್ಕಾರಿ ನೌಕರರ ಸಂಘದ ನೂತನ ಸದಸ್ಯರ ಪದಗ್ರಹಣ ಸಮಾರಂಭದಲ್ಲಿ ಮಾತನಾಡಿದ ಅವರು, ಸರ್ಕಾರಿ ನೌಕರಿ ಬಗ್ಗೆ ಬೇಸರ ವ್ಯಕ್ತಪಡಿಸಿದರು.
ನಾನು ಒಬ್ಬ ತಹಶೀಲ್ದಾರ್, ಒಂದು ತಾಲೂಕಿನ ಮುಖ್ಯಸ್ಥನಾಗಿದ್ದೇನೆ. ಆದ್ರೆ ಈಗ ನನಗೆ ಸರ್ಕಾರಿ ನೌಕರಿಯೇ ಬೇಡ ಎನ್ನುವಂತಾಗಿದೆ. ವೈಯಕ್ತಿಕವಾಗಿ ಹೇಳುವುದಾದರೆ, ಪಾನಿಪುರಿ, ಗೋಬಿ ಮಂಚೂರಿ ಇಟ್ಟುಕೊಂಡಿರುವವರು ನಮಗಿಂತ ಸುಖವಾಗಿ ಜೀವನ ಮಾಡುತ್ತಾರೆ. ಅವರಿಗೆ ಅಷ್ಟು ಸಮಾಧಾನ, ನೆಮ್ಮದಿ ಇದೆ ಎಂದು ಅವರು ಹೇಳಿದರು.
ಪಾನಿಪುರಿ ಮಾರುವವನು ಹೆಂಡ್ತಿ ಮಕ್ಕಳ ಜೊತೆ ಕಾಲ ಕಳೆಯುತ್ತಾನೆ. ಹೆಂಡ್ತಿ ಮಕ್ಕಳನ್ನು ಊರಿಗೆ ಎಲ್ಲಿಗೆ ಬೇಕಾದರೂ ಕರೆದುಕೊಂಡು ಹೋಗುತ್ತಾನೆ. ಆದರೆ ನಮ್ಮ ಕುಟುಂಬವನ್ನು ದೇವಸ್ಥಾನಕ್ಕೆ ಕರೆದುಕೊಂಡು ಹೋಗಿ ದೇವರ ದರ್ಶನ ಮಾಡಿಸುವ ಯೋಗ್ಯತೆ ಇಲ್ಲ. ಬರೀ ಒತ್ತಡ ಎಂದು ಅವರು ಬೇಸರ ವ್ಯಕ್ತಪಡಿಸಿದರು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: